ಬೆಂಗಳೂರು: ರಾಜ್ಯಾದ್ಯಂತ ಕಳೆದ ಎರಡು ಮೂರು ದಿನಗಳಿಂದ ಎಡಬಿಡದೇ ಮಳೆ ಸುರಿಯುತ್ತಿದ್ದು, ಸಿಡಿಲಿನ ಆರ್ಭಟಕ್ಕೆ ಐವರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.
ರಾಜ್ಯದ ಬೆಳಗಾವಿ, ವಿಜಯಪುರ, ಹಾವೇರಿ, ಚಿತ್ರದುರ್ಗ, ಧಾರವಾಡ, ಗದಗ, ಬಳ್ಳಾರಿ, ಚಿಕ್ಕಮಗಳೂರು, ತುಮಕೂರು, ಉಡುಪಿ, ಶಿವಮೊಗ್ಗ ಜಿಲ್ಲೆಗಳ ಕೆಲ ಭಾಗಗಳಲ್ಲಿ ಉತ್ತಮ ಮಳೆ ಆಗಿದೆ. ಆದರೆ ಸೋಮವಾರ ಸಿಡಿಲಿಗೆ ಐವರು ಮೃತಪಟ್ಟಿದ್ದಾರೆ.
advertisement
9535127775 / 9901837775 / 6364528715 / 08362775155 / https://icsmpucollege.com/
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ವೆಂಕಟಾಪುರ ಗ್ರಾಮದ ಮಲ್ಲಮ್ಮ ಕಲ್ಮೇಶ , ವಿಜಯಪುರ ಜಿಲ್ಲೆಯ ಕೋಲ್ಹಾರ ತಾಲೂಕಿನ ತೆಲಗಿ ಗ್ರಾಮದ ಜಗದೀಶ, ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಇಂಡುವಳ್ಳಿ ಗ್ರಾಮದ ಗೌತಮ್ ಎಂಬುವರು ಸಿಡಿಲು ಬಡಿದು ಸಾವಿಗೀಡಾಗಿದ್ದಾರೆ. ಬಳ್ಳಾರಿ ಜಿಲ್ಲೆಯ ಸಂಡೂರಿನ ನಂದಿಹಳ್ಳಿಯ ಯುವಕ ಮಂಜುನಾಥ್ ಅವರು ಮನೆಯ ಮುಂದೆ ನಿಂತಿದ್ದಾಗ ಸಿಡಲಿ ಬಡಿದು ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಈದು ನೂರಾಲ್ ಬೆಟ್ಟು ಸಮೀಪದ ಜಗೀಶ್ ಜೈನ್ ಕೂಡ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ