ಸಿದ್ದಾಪುರ: ವಾಹನ ಬಡಿದು ಜಿಂಕೆ ಸಾವು

posted in: ರಾಜ್ಯ | 0

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಸಿದ್ದಾಪುರ -ಶಿರಸಿ ರಸ್ತೆಯ ಹಲಗಡಿಕೊಪ್ಪದ ಹತ್ತಿರ ಮಂಗಳವಾರ ಯಾವುದೋ ವಾಹನ ಬಡಿದು ಜಿಂಕೆಯೊಂದು ಮೃತಪಟ್ಟಿದೆ.
ಜಿಂಕೆ ಬಿದ್ದಿದ್ದನ್ನು ನೋಡಿ ಸ್ಥಳೀಯರು ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ನಂತರ ಅವರು ಸಿಬ್ಬಂದಿ ಸ್ಥಳಕ್ಕಾಗಮಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಜಿಂಕೆ ಸತ್ತಿತ್ತು.

ನಂತರ ಉಪಅರಣ್ಯ ಸಂರಕ್ಷಣಾಧಿಕಾರಿ ಎಸ್.ಜಿ.ಹೆಗಡೆ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಿ.ಎನ್.ಹರೀಶ ಮಾರ್ಗದರ್ಶನದಂತೆ ವಲಯ ಅರಣ್ಯಾಧಿಕಾರಿ ಶಿವಾನಂದ ನಿಂಗಾಣಿ, ಉಪವಲಯ ಅರಣ್ಯಾಧಿಕಾರಿ ಮಂಜುನಾಥ ಚಿನ್ನಣ್ಣವರ ಹಾಗೂ ಸಿಬ್ಬಂದಿಗಳು ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳಿಂದ ಮರಣೋತ್ತರ ಪರೀಕ್ಷೆ ಮಾಡಿಸಿ ಅರಣ್ಯ ಇಲಾಖೆಯ ನಿಯಮಗಳಂತೆ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ಓದಿರಿ :-   ಬೆಳ್ತಂಗಡಿ: ಗೋಡಂಬಿಯಾಕಾರದ ಮೊಟ್ಟೆ ಇಡುತ್ತಿರುವ ಕೋಳಿ...!
advertisement

ನಿಮ್ಮ ಕಾಮೆಂಟ್ ಬರೆಯಿರಿ