ಕರ್ನಾಟಕದಲ್ಲಿ ಮಂಗಳವಾರ 85 ಮಂದಿಗೆ ಸೋಂಕು, ಬೆಂಗಳೂರಿನಲ್ಲಿ ನಿಧನವಾಗಿ ಏರಿಕೆ

ಬೆಂಗಳೂರು: ಕೊರೊನಾ ಸೋಂಕಿನ ಏರಿಕೆಯಾಗುತ್ತಿದೆ. ಇಂದು, ಮಂಗಳವಾರ ಒಟ್ಟು 85 ಸೋಂಕು ದಾಖಲಾಗಿದ್ದು, ಸೋಮವಾರಕ್ಕಿಂತ 21 ಪ್ರಕರಣಗಳು ಹೆಚ್ಚಾಗಿದೆ. ಸಮಾಧಾನದ ಸಂಗತಿಯೆಂದರೆ ಕಳೆದ ಹಲವು ದಿನಗಳಿಂದ ಯಾವುದೇ ಮರಣ ದಾಖಲಾಗಿಲ್ಲ.

ಬೆಂಗಳೂರು ನಗರದಲ್ಲಿ ಇಂದು 82 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 70 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಪಾಸಿಟಿವಿಟಿ ರೇಟ್ 1.18% ಮತ್ತು ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,686 ಇದೆ.

ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಬೆಂಗಳೂರು ನಗರ 82, ತುಮಕೂರು 1 ಹಾಗೂ ವಿಜಯಪುರದಲ್ಲಿ 2 ಪಾಸಿಟಿವ್ ಕೇಸ್ ದಾಖಲಾಗಿದೆ. ಉಳಿದಂತೆ 27 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.
ರಾಜ್ಯದಲ್ಲಿ ಇಂದು ಒಟ್ಟು 57,468 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 7,171 ಮಾದರಿಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement