ಕ್ಲಾರೆನ್ಸ್ ಶಾಲೆಯಲ್ಲಿ ಬೈಬಲ್ ಕಡ್ಡಾಯ ವಿವಾದ-ಶಿಕ್ಷಣ ಇಲಾಖೆಯಿಂದ ನೋಟಿಸ್ ಕೊಡ್ತೇವೆ : ಸಚಿವ ನಾಗೇಶ

ಬೆಂಗಳೂರು: ಕ್ಲಾರೆನ್ಸ್ ಶಾಲೆಯಲ್ಲಿ ಬೈಬಲ್ ಕಡ್ಡಾಯ ವಿವಾದಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯಿಂದ ನೋಟಿಸ್ ನೀಡಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ಮಂಗಳವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು “ಶಾಲೆಯಲ್ಲಿ ಬೈಬಲ್ ಕಡ್ಡಾಯ ಮಾಡಿರುವುದು ರಾಜ್ಯ ಶಿಕ್ಷಣ ಕಾಯಿದೆಗೆ ವಿರುದ್ಧವಾಗಿದೆ ಎಂದು ಹೇಳಿದರು.

ಕ್ಲಾರೆನ್ಸ್ ಶಾಲೆಯಲ್ಲಿ ಎಲ್ಲಾ ಧರ್ಮದ ಮಕ್ಕಳೂ ಬರುತ್ತಿದ್ದಾರೆ. ಪ್ರಜಾಪ್ರಭುತ್ವದ ಅಡಿಯಲ್ಲಿ ಶಿಕ್ಷಣ ಇಲಾಖೆ ಕ್ರಮ ತೆಗೆದುಕೊಳ್ಳುತ್ತದೆ. ಅಡ್ಮಿಷನ್ ವೇಳೆ ಬೈಬಲ್ ಇದೆ ಒಪ್ಪಿಗೆ ಇದೆಯಾ ಅಂತ ಕೇಳುತ್ತಾರೆ. ಇಲ್ಲ ಅಂದರೆ ಪ್ರವೇಶ ಕೊಡುವುದಿಲ್ಲ ಎಂಬ ಆರೋಪಗಳಿವೆ. ಇದು ತಪ್ಪು ಎಂದರು.

ಯಾವುದೇ ಶಿಕ್ಷಣ ಸಂಸ್ಥೆಯಾಗಲಿ ಧಾರ್ಮಿಕ ಗ್ರಂಥಗಳ ಅಳವಡಿಕೆಗೆ ಅವಕಾಶ ಇಲ್ಲ. ಈ ಕಾರಣದಿಂದ ಶಾಲೆಗೆ ಶಿಕ್ಷಣ ಇಲಾಖೆಯಿಂದ ನೋಟಿಸ್ ನೀಡಲಾಗುವುದು. ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ ವೇಳೆ ಸೂಡೋ ಜಾತ್ಯತೀತವಾದಿಗಳು ಕಿರುಚಾಡಿದರು. ಆದರೆ ಕಾಂಗ್ರೆಸ್, ಜೆಡಿಎಸ್ ಇದರ ಬಗ್ಗೆ ಮಾತನಾಡಿಲ್ಲ. ಭಗವದ್ಗೀತೆಗೆ ವಿರೋಧ ಮಾಡುವವರು ಬೈಬಲ್ ವಿಚಾರದಲ್ಲಿ ಯಾಕೆ ಸುಮ್ಮನಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯದ ಎಲ್ಲಾ ಕ್ರೈಸ್ತ ಶಿಕ್ಷಣ ಸಂಸ್ಥೆಗಳ ಮೇಲೆ ನಿಗಾ ಇಡಲಾಗುವುದು. ಎಲ್ಲಾ ಶಿಕ್ಷಣಾಧಿಕಾರಿಗಳಿಗೆ ಕ್ರೈಸ್ತ ಶಿಕ್ಷಣಗಳಿಗೆ ಹೋಗಿ ಪರಿಶೀಲನೆ ನಡೆಸಲು ಸೂಚನೆ ನೀಡಲಾಗುವುದು ಎಂದು ತಿಳಿಸಿದರು.
ಜೂನ್ ಅಥವಾ ಜುಲೈ ನಲ್ಲಿ 4ನೇ ಅಲೆ ಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ತಜ್ಞರ ಸಮಿತಿ, ಆರೋಗ್ಯ ಇಲಾಖೆ ಸೂಚನೆಯನ್ನು ನಾವು ಅನುಸರಿಸುತ್ತೇವೆ. ಶೈಕ್ಷಣಿಕ ವರ್ಷವಂತೂ ಮೇ 16ರಿಂದಲೇ ಆರಂಭವಾಗಲಿದೆ. ಇದರಲ್ಲಿ‌ ಬದಲಾವಣೆ ಇಲ್ಲ‌ ಎಂದು ಸ್ಪಷ್ಟಪಡಿಸಿದರು.

ಪ್ರಮುಖ ಸುದ್ದಿ :-   ಸಿದ್ದಾಪುರ : ಸಿಡಿಲು ಬಡಿದು 7 ಹಸುಗಳು ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement