ಜೂನ್ ಕೊನೆಯಲ್ಲಿ ಕೊರೊನಾ ತೀವ್ರ ಹೆಚ್ಚಳವಾಗುವ ಸಾಧ್ಯತೆ: ಸಚಿವ ಡಾ.ಸುಧಾಕರ

ಬೆಂಗಳೂರು: ದೇಶದ ಹಲವೆಡೆ ನಿಧಾನಗತಿಯಲ್ಲಿ ಕೊವೀಡ್ ಪ್ರಕರಣ ಹೆಚ್ಚಾಗುತ್ತಿದ್ದು ರಾಜ್ಯದಲ್ಲಿ 4ನೇ ಅಲೆ ಬಗ್ಗೆ ಇನ್ನೆರಡು ದಿನದಲ್ಲಿ ವರದಿ ಬರಲಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ ಹೇಳಿದ್ದಾರೆ.
ಮಾಧ್ಯಮದವರ ಮಾತನಾಡಿದ ಅವರು, ಕೋವಿಡ್ ಬಗ್ಗೆ ಇಲ್ಲಿಯ ವರೆಗೆ ಐಐಟಿ ಕಾನ್ಪುರದವರು ನಮಗೆ ಅಂಕಿಅಂಶಗಳು ನೀಡುತ್ತಿದ್ದಾರೆ. ಅದರ ಪ್ರಕಾರ ಜೂನ್ ಅಂತ್ಯದಲ್ಲಿ ಕೋವಿಡ್ ನಾಲ್ಕನೇ ಅಲೆ ಹೆಚ್ಚಾಗುವ ಸಾಧ್ಯತೆಯಿದೆ. ಸೆಪ್ಟೆಂಬರ್-ಅಕ್ಟೋಬರ್ ವರೆಗೂ ಸೋಂಕುಹೆಚ್ಚಿರುತ್ತದೆ ಅವರು ಹೇಳಿದ್ದಾರೆ. ಕಳೆದ ಮೂರು ಅಲೆಗಳಲ್ಲಿ ಐಐಟಿ ಕಾನ್ಪುರ ವರದಿ ಸರಿಯಾಗಿತ್ತು ಎಂದು ಹೇಳಿದ್ದಾರೆ.

ದೇಶಾದ್ಯಂತ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ನಾಲ್ಕನೇ ಅಲೆ ಭೀತಿ ಎದುರಾಗಿದೆ. ರಾಜ್ಯದಲ್ಲಿ ನಾಲ್ಕನೇ ಅಲೆ ಬಗ್ಗೆ ಅಧಿಕೃತವಾಗಿ ಹೇಳಲಾಗದು. ಇನ್ನೆರಡು ದಿನದಲ್ಲಿ ವರದಿ ಬರಲಿದ್ದು ಆ ಬಳಿಕ ಸ್ಪಷ್ಟ ಮಾಹಿತಿ ಸಿಗಲಿದೆ ಎಂದು ತಿಳಿಸಿದ್ದಾರೆ.

ಕೋವಿಡ್ ನಾಲ್ಕನೇ ಅಲೆಯಲ್ಲಿ ಶಾಲೆಗಳನ್ನು ಮತ್ತೆ ಬಂದ್ ಮಾಡಲಾಗುತ್ತದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೋವಿಡ್ ಬಂದು ಎರಡು ವರ್ಷಗಳಾಗಿವೆ. ಈಗ ಅದರೊಟ್ಟಿಗೆ ಯಾವ ರೀತಿ ಜೀವನ ನಡೆಸಬೇಕು ಎಂಬುದು ಗೊತ್ತಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮ ಅಗತ್ಯ. ಶಾಲೆಗಳನ್ನು ಮತ್ತೆ ಬಂದ್ ಮಾಡುವ ಯಾವುದೇ ವಿಚಾರವಂತೂ ಸದ್ಯಕ್ಕಿಲ್ಲ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಪೆನ್‌ಡ್ರೈವ್ ಕೇಸ್‌ನಲ್ಲಿ ಎಚ್‌.ಡಿ. ಕುಮಾರಸ್ವಾಮಿ ಹೆಸರು ಹೇಳಲು ನನಗೆ 100 ಕೋಟಿ ರೂ. ಆಫರ್ ನೀಡಿದ್ದ ಡಿ.ಕೆ.ಶಿವಕುಮಾರ : ದೇವರಾಜೇ ಗೌಡ ಸ್ಫೋಟಕ ಹೇಳಿಕೆ

ಪ್ರಧಾನಿ ಮೋದಿ ಸಭೆ..
ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ನಿಧಾನವಾಗಿ ಏರಿಕೆ ಕಾಣುತ್ತಿದೆ. ಈ ಕುರಿತು ಪ್ರಧಾನಿ ಮೋದಿ ನಾಳೆ (ಏಪ್ರಿಲ್‌ ೨೭)ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳ ಜೊತೆಗೆ ಸಭೆ ಕರೆದಿದ್ದಾರೆ. ಸಭೆಯಲ್ಲಿ ರಾಜ್ಯಗಳ ಸ್ಥಿತಿ ಗತಿಗಳ ಬಗ್ಗೆ ಅವಲೋಕನದ ಮಾಡಿ, ಪೂರ್ವ ಸಿದ್ಧತೆ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement