ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ: ದಿವ್ಯಾ ಹಾಗರಗಿ ಸೇರಿ ಆರು ಆರೋಪಿಗಳಿಗೆ ಅರೆಸ್ಟ್‌ ವಾರಂಟ್‌-ವಾರದಲ್ಲಿ ಶರಣಾಗದಿದ್ರೆ ಆಸ್ತಿ ಮುಟ್ಟುಗೋಲು ಸಾಧ್ಯತೆ

ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಹಗರಣದ ಪ್ರಮುಖ ಆರೋಪಿ ಎಂದು ಹೇಳಲಾದ ದಿವ್ಯಾ ಹಾಗರಗಿ ಸೇರಿ ಆರು ಆರೋಪಿಗಳಿಗೆ ಮುಂಬೈ ಸ್ಫೋಟ ಪ್ರಕರಣದಲ್ಲಿ ದಾವೂದ್ ಇಬ್ರಾಹಿಂಗೆ ನೀಡಲಾಗಿದ್ದ ಅರೆಸ್ಟ್ ವಾರೆಂಟ್ ಮಾದರಿಯಲ್ಲೇ, ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ.

ತನಿಖಾ ಹಂತದಲ್ಲಿ ಜಾರಿ ಮಾಡಲಾಗುವ ಈ ವಾರೆಂಟ್ ಅನ್ವಯ, ಆರೋಪಿಗಳು ಎಲ್ಲಿದ್ದರೂ ಬಂದು ಶರಣಾಗಲೇ ಬೇಕು. ಇಲ್ಲದಿದ್ದರೆ ಅವರ ಆಸ್ತಿ ಮುಟ್ಟುಗೋಲು ಮಾಡುವ ಅವಕಾಶ ಇರುತ್ತದೆ.
ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ, ಮಂಜುನಾಥ್ ಮೇಳಕುಂದಿ, ರವೀಂದ್ರ ಮೇಳಕುಂದಿ, ಅರ್ಚನಾ, ಕಾಶಿನಾಥ್, ಶಾಂತಿಬಾಯಿಗೆ ಕಲಬುರಗಿಯ 3 ನೇ ಜೆಎಂಎಫ್‌ಸಿ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ.

ಮುಂಬೈ ಬ್ಲಾಸ್ಟ್ ಪ್ರಕರಣದಲ್ಲಿ ದಾವೂದ್ ಇಬ್ರಾಹಿಂಗೆ ನೀಡಲಾಗಿದ್ದ ಅರೆಸ್ಟ್ ವಾರೆಂಟ್ ಉಲ್ಲೇಖಿಸಿ ಸಿಐಡಿ ಪೊಲೀಸರು ನ್ಯಾಯಾಲಯಕ್ಕೆ ಕೋರಿಕೆ‌ ಸಲ್ಲಿಸಿದ್ದರು.‌ ಕೋರಿಕೆಯಂತೆ ತನಿಖಾ ಹಂತದ ಅರೆಸ್ಟ್ ವಾರೆಂಟ್ ಜಾರಿ ಮಾಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಒಂದು ವಾರದ ಒಳಗಡೆ ಆರೋಪಿಗಳು ಶರಣಾಗದಿದ್ದರೆ ಘೋಷಿತ ಅಪರಾಧಿ ಎಂದು ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಸಾಧ್ಯತೆ ಇದೆ. ಕಳೆದ 15 ದಿನಗಳಿಂದ ದಿವ್ಯಾ ಸೇರಿ ಆರು ಜನ ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ.
ಹಗರಣದ ಪ್ರಮುಖ ಆರೋಪಿ ಎಂದು ಹೇಳಲಾದ ಅಕ್ರಮದ ಕೇಂದ್ರ ಸ್ಥಾನವಾದ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಕಾರ್ಯದರ್ಶಿ, ಬಿಜೆಪಿ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ದಿವ್ಯಾ ಹಾಗರಗಿ, ಶಾಲೆಯ ಹೆಡ್‌ ಮಾಸ್ಟರ್ ಕಾಶಿನಾಥ್ ಸೇರಿ ಐವರು ತಲೆ ಮರೆಸಿಕೊಂಡು 14 ದಿನಗಳು ಕಳೆದಿವೆ.

ಪ್ರಮುಖ ಸುದ್ದಿ :-   ಪೆನ್‌ಡ್ರೈವ್ ಕೇಸ್‌ನಲ್ಲಿ ಎಚ್‌.ಡಿ. ಕುಮಾರಸ್ವಾಮಿ ಹೆಸರು ಹೇಳಲು ನನಗೆ 100 ಕೋಟಿ ರೂ. ಆಫರ್ ನೀಡಿದ್ದ ಡಿ.ಕೆ.ಶಿವಕುಮಾರ : ದೇವರಾಜೇ ಗೌಡ ಸ್ಫೋಟಕ ಹೇಳಿಕೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement