ಪಿಎಸ್‌ಐ ಪರೀಕ್ಷೆ ಅಕ್ರಮ ಹಗರಣ: ಡಿಕೆಶಿ ಜೊತೆ ಪ್ರಮುಖ ಆರೋಪಿ ದಿವ್ಯ ಹಾಗರಗಿ ತೆಗೆಸಿಕೊಂಡ ಫೋಟೋಗಳು ವೈರಲ್‌

ಬೆಂಗಳೂರು: 545 ಪಿಎಸ್‌ಐ ಪರೀಕ್ಷೆ ಅಕ್ರಮ ಹಗರಣದ ಪ್ರಮುಖ ಆರೋಪಿ ಎಂದು ಹೇಳಲಾಗುತ್ತಿರುವ ಬಿಜೆಪಿಯ ಮುಖಂಡರಾದ ದಿವ್ಯಾ ಹಾಗರಗಿ ಅವರು ಪರಾರಿಯಾಗಿದ್ದು, ಇನ್ನೂ ಎಲ್ಲಿದ್ದಾರೆಂದು ಪತ್ತೆಯಾಗಿಲ್ಲ. ಅವಳ ಬಂಧನಕ್ಕೂ ಸಿಐಡಿ ಪೊಲೀಸರು ಬಲೆ ಬೀಸಿದ್ದಾರೆ. ಈಗ ದಿವ್ಯಾ ಹಾಗರಗಿ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯ  ಆರೋಪ-ಪ್ರತ್ಯಾರೋಪಗಳ ಕೇಂದ್ರ ಬಿಂದುವಾಗಿದ್ದಾರೆ.

ಏತನ್ಮಧ್ಯೆ 545 ಪಿಎಸ್‌ಐ ಪರೀಕ್ಷೆ ಅಕ್ರಮ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರ ಜೊತೆಗೆ ತೆಗೆಸಿಕೊಂಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿವೆ.ದಿವ್ಯಾ ಹಾಗರಗಿ ಬಂಧಿಸುವಂತೆ ಕಾಂಗ್ರೆಸ್ ನಾಯಕರು ಒತ್ತಾಯಿಸುತ್ತಿದ್ದು, ವಿಪಕ್ಷ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ಸೇರಿದಂತೆ ಅನೇಕ ಮುಖಂಡರು ಯಾಕೆ ದಿವ್ಯಾ ಬಂಧನವಾಗಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದರ ಬೆನ್ನಲ್ಲೇ ಈಗ ಡಿಕೆ ಶಿವಕುಮಾರ್ ಜೊತೆಗೆ ದಿವ್ಯಾ ತೆಗೆಸಿಕೊಂಡಿರುವ ಫೋಟೊಗಳು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿವೆ. ಪ್ರಕರಣ ಹೊರಬಂದ ಸಂದರ್ಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಜೊತೆಗೆ ದಿವ್ಯಾ ಹಾಗರಗಿ ತೆಗೆಸಿಕೊಂಡಿದ್ದ ಫೋಟೋ ಚರ್ಚೆಗೆ ಕಾರಣವಾಗಿ ಫೋಟೋ ಆಧಾರದಲ್ಲಿ ಗೃಹ ಸಚಿವರ ವಿರುದ್ಧ ಕಾಂಗ್ರೆಸ್‌ ತೀವ್ರ ವಾಗ್ದಾಳಿ ನಡೆಸಿತ್ತು.

ಪ್ರಮುಖ ಸುದ್ದಿ :-   ಬೆಂಗಳೂರು ಕಾಲ್ತುಳಿತ ಪ್ರಕರಣ | ಐಪಿಎಸ್‌ ಅಧಿಕಾರಿ ವಿಕಾಸಕುಮಾರ ಅಮಾನತು ಆದೇಶ ರದ್ದುಗೊಳಿಸಿದ ಸಿಎಟಿ; ಸರ್ಕಾರಕ್ಕೆ ಹಿನ್ನಡೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement