ಲಕ್ನೋ: ಉತ್ತರ ಪ್ರದೇಶದಲ್ಲಿ ಸುಮಾರು ಆರು ಸಾವಿರ ಧಾರ್ಮಿಕ ಸ್ಥಳಗಳಿಂದ ಧ್ವನಿವರ್ಧಕಗಳನ್ನು ತೆರವುಗೊಳಿಸಲಾಗಿದೆ. ಇತರ 30 ಸಾವಿರ ಧ್ವನಿವರ್ಧಕಗಳ ಶಬ್ದಗಳನ್ನು ಮಿತಿಗೊಳಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಬುಧವಾರ ಹೇಳಿದ್ದಾರೆ.
ಉತ್ತರ ಪ್ರದೇಶ ರಾಜ್ಯಾದ್ಯಂತ ಧಾರ್ಮಿಕ ಸ್ಥಳಗಳಿಂದ ಧ್ವನಿವರ್ಧಕಗಳನ್ನು ತೆರವುಗೊಳಿಸುವ ಮತ್ತು ಶಬ್ದಗಳಲ್ಲಿ ಮಿತಿಗೊಳಿಸುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತಕುಮಾರ್ ಹೇಳಿದರು.
advertisement
9535127775 / 9901837775 / 6364528715 / 08362775155 / https://icsmpucollege.com/
ವಾರಾಣಸಿ ವಲಯದಲ್ಲಿ ಗರಿಷ್ಠ 1,366, ಮೀರತ್ 1,215, ಬರೇಲಿಯಲ್ಲಿ 1,070 ಮತ್ತು ಕಾನ್ಪುರದಲ್ಲಿ 1,056 ಧ್ವನಿವರ್ಧಕಗಳನ್ನು ತೆರವುಗೊಳಿಸಲಾಗಿದೆ ಎಂದು ಪೊಲೀಸ್ ಇಲಾಖೆ ಬುಧವಾರ ಮಾಹಿತಿ ನೀಡಿದೆ.
ಕಳೆದ ವಾರ ಇಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈ ಬಗ್ಗೆ ಸೂಚನೆ ನೀಡಿದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಕಾನೂನು-ಸುವ್ಯವಸ್ಥೆ ಪಾಲಿಸುವ ಕುರಿತು ಪರಿಶೀಲನಾ ಸಭೆ ನಡೆಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
ಜನರಿಗೆ ತಮ್ಮ ನಂಬಿಕೆಯ ಧಾರ್ಮಿಕ ಆಚರಣೆಗಳನ್ನು ಆಚರಿಸಲು ಮುಕ್ತ ಸ್ವಾತಂತ್ರ್ಯವಿದೆ. ಧಾರ್ಮಿಕ ಸ್ಥಳಗಳಲ್ಲಿ ಶಬ್ದವು ಸ್ಥಳದ ಆವರಣದಿಂದ ಹೊರ ಹೋಗದಂತೆ ಎಚ್ಚರವಹಿಸಬೇಕು’ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದರು.
ಏಪ್ರಿಲ್ 30 ರೊಳಗೆ ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳನ್ನು ತೆಗೆದುಹಾಕುವ ಬಗ್ಗೆ ಗೃಹ ಸಚಿವಾಲಯವು ಎಲ್ಲಾ ಜಿಲ್ಲೆಗಳಿಂದ ವರದಿಯನ್ನು ಕೇಳಿದೆ.
ನಿಮ್ಮ ಕಾಮೆಂಟ್ ಬರೆಯಿರಿ