ಬೆಂಗಳೂರು: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 2 ದಿನಗಳಿಂದ ಬೇಸಿಗೆ ಮಳೆ ಸುರಿದಿದ್ದು, ಇನ್ನೂ ಎರಡು ದಿನ ರಾಜ್ಯದಲ್ಲಿ ಗುಡುಗು ಸಿಡಿಲಿನ ಸಹಿತ ಮಳೆಯಾಗಲಿದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.
ಇಂದಿನಿಂದ ಎರಡು ದಿನ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಹಾಗೂ ಗುಡುಗಿನ ಮುನ್ನೆಚ್ಚರಿಕೆಯನ್ನು ನೀಡಲಾಗಿದೆ. ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಿಗೂ ಮಳೆ ಹಾಗೂ ಸಿಡಿಲಿನ ಮುನ್ನೆಚ್ಚರಿಕೆ ನೀಡಲಾಗಿದೆ.
advertisement
9535127775 / 9901837775 / 6364528715 / 08362775155 / https://icsmpucollege.com/
ಕರ್ನಾಟಕ, ತಮಿಳುನಾಡು, ಮತ್ತು ಕೇರಳದಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹೇಳಲಾಗಿದೆ. ಇದಲ್ಲದೆ, ಕೇರಳದಲ್ಲಿ ಮಾರ್ಚ್ 31ರ ಅಂತ್ಯದ ವೇಳೆಗೆ ಮಳೆಯ ಪ್ರಮಾಣ ಶೇ. 98ರಷ್ಟು ಹೆಚ್ಚಾಗಿದೆ. ಮುಂಗಾರು ಪೂರ್ವ ಮಳೆ ದಕ್ಷಿಣ ಭಾರತದಲ್ಲಿ ಮಳೆ ಉತ್ತಮವಾಗಿದೆ. ಕರ್ನಾಟಕದಲ್ಲಿ ವಿಶೇಷವಾಗಿ ಕರಾವಳಿ ಕರ್ನಾಟಕದಲ್ಲಿ ಶೇ. 143, ಉತ್ತರ ಒಳನಾಡಿನಲ್ಲಿ ಶೇ 43, ದಕ್ಷಿಣ ಒಳನಾಡಿನಲ್ಲಿ ಶೇ. 84ರಷ್ಟು ಹೆಚ್ಚುವರಿ ಮಳೆಯಾಗಿದೆ.
ಕೆಲ ದಿನಗಳಲ್ಲಿ ಬೆಂಗಳೂರು, ಬೆಳಗಾವಿ, ವಿಜಯಪುರ, ಕೊಪ್ಪಳ, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಚಿತ್ರದುರ್ಗ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕರಾವಳಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಕರ್ನಾಟಕದ ಹೆಚ್ಚಿನ ಪ್ರದೇಶಗಳಲ್ಲಿ ಈಗ ಗುಡುಗು, ಸಿಡಿಲುಗಳ ಆರ್ಭಟ ಜೋರಾಗಿದೆ.
ಮೇ 1ರವರೆಗೂ ಕರ್ನಾಟಕದಲ್ಲಿ ಮಳೆ ಮುಂದುವರಿಯಲಿದ್ದು, ಎಲ್ಲಾ ಜಿಲ್ಲೆಗಳಲ್ಲಿಯೂ ವರುಣನ ಆರ್ಭಟ ಹೆಚ್ಚಾಗಲಿದೆ ಎಂದು ಹೇಳಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ