ಕೋವಿಡ್ 4ನೇ ಅಲೆ ಭೀತಿ: ಇಂದು ಎಲ್ಲ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಮೋದಿ ಸಭೆ

ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ 4ನೇ ಅಲೆಯ ಆತಂಕ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ದೇಶದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವೀಡಿಯೊ ಕಾನ್ಫರೆನ್ಸ್ ಮೂಲಕ ಇಂದು, ಬುಧವಾರ ಸಭೆ ನಡೆಸಲಿದ್ದಾರೆ.

ಬುಧವಾರ ಮಧ್ಯಾಹ್ನ 12 ಗಂಟೆಗೆ ಈ ಸಭೆ ನಿಗದಿಯಾಗಿದೆ ಎಂದು ಪ್ರಧಾನಿ ಕಾರ್ಯಾಲಯದ ಅಧಿಕಾರಿಗಳು ಮಾಹಿತಿ ನೀಡಿದ್ದು, ಮುಂಬರುವ ಸರಣಿ ಹಬ್ಬಗಳ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಸಮಗ್ರ ಕಾರ್ಯತಂತ್ರ ರೂಪಿಸಲು ನಿರ್ಧರಿಸಲಾಗಿದೆ.

ವೀಡಿಯೊ ಕಾನ್ಫರೆನ್ಸ್ ವೇಳೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಮೊದಲಿಗೆ ಸವಿಸ್ತಾರವಾಗಿ ಮಾಹಿತಿ ನೀಡಲಿದ್ದಾರೆ. ಬಳಿಕ, ಆಯಾ ರಾಜ್ಯ ಸರ್ಕಾರಗಳು ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಕೋವಿಡ್ ಸ್ಥಿತಿಗತಿ ನಿರ್ವಹಣೆಯ ಕಾರ್ಯತಂತ್ರದ ಕುರಿತು ಸಮಗ್ರ ಸಮಾಲೋಚನೆ ನಡೆಯಲಿದೆ.
ರಂಜಾನ್, ಅಕ್ಷಯ ತೃತೀಯ, ಭಗವಾನ್ ಪರಶುರಾಮ ಜಯಂತಿ, ವೈಶಾಖಾ ಬುದ್ಧ ಪೌರ್ಣಮಿ ಸೇರಿದಂತೆ ದೇಶದ ಉದ್ದಗಲಕ್ಕೂ ಹಲವು ಹಬ್ಬಗಳು ಬರಲಿದೆ.

ಪ್ರಮುಖ ಸುದ್ದಿ :-   ವೀಡಿಯೋ..| ಎರಡೂ ಕೈತೋಳುಗಳಿಲ್ಲದೆ ಡ್ರೈವಿಂಗ್‌ ಲೈಸೆನ್ಸ್‌ ಪಡೆದ ಏಷ್ಯಾದ ಮೊದಲ ಮಹಿಳೆ ಇವರು : ಕೇರಳದ ಯುವತಿಯ ಕಾರ್‌ ಚಾಲನೆಗೆ ಬೆರಗಾಗ್ತೀರಾ..!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement