ಸುಲಿಗೆ ಪ್ರಕರಣ: ಮಾಜಿ ಎಂಎಲ್‌ಸಿ ಶ್ರೀಕಾಂತ್ ಘೊಟ್ನೇಕರಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಹೈಕೋರ್ಟ್‌

ಬೆಂಗಳೂರು: ಸಿವಿಲ್ ಗುತ್ತಿಗೆದಾರರೊಬ್ಬರು ದಾಖಲಿಸಿರುವ ಸುಲಿಗೆ ಪ್ರಕರಣದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಶ್ರೀಕಾಂತ್ ಘೊಟ್ನೇಕರ್‌ಗೆ ನಿರೀಕ್ಷಣಾ ಜಾಮೀನು ನೀಡಲು ಕರ್ನಾಟಕ ಹೈಕೋರ್ಟ್ ಈಚೆಗೆ ನಿರಾಕರಿಸಿದೆ.
ನಿರೀಕ್ಷಣಾ ಜಾಮೀನು ಕೋರಿ ಶ್ರೀಕಾಂತ್ ಎಲ್.ಘೊಟ್ನೇಕರ್ ಹಾಗೂ ಮತ್ತೊಬ್ಬ ಆರೋಪಿ ಅನಿಲ್ ಚೌವ್ಹಾಣ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್‌ ಸುನಿಲ್‌ ದತ್ ಯಾದವ್ ಅವರಿದ್ದ ಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿದೆ ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ.

ಅರ್ಜಿದಾರರ ವಿರುದ್ಧ ಗಂಭೀರ ಆರೋಪವಿದೆ. ಪ್ರಕರಣದ ಮೊದಲ ಆರೋಪಿಯು ವಿಧಾನ ಪರಿಷತ್‌ನ ಮಾಜಿ ಸದಸ್ಯರಾಗಿದ್ದಾರೆ. ಆದ್ದರಿಂದ, ಈ ಹಂತದಲ್ಲಿ ನಿರೀಕ್ಷಣಾ ಜಾಮೀನು ನೀಡಲು ಆಗುವುದಿಲ್ಲ. ಅರ್ಜಿದಾರರು ವಿಚಾರಣೆಯನ್ನು ಎದುರಿಸಲಿ ಎಂದು ಹೈಕೋರ್ಟ್ ಆದೇಶದಲ್ಲಿ ತಿಳಿಸಿದೆ ಎಂದು ಹೈಕೋರ್ಟ್‌ ಹೇಳಿದೆ ಎಂದು ವರದಿ ತಿಳಿಸಿದೆ.

ಪ್ರಕರಣ ಏನು:

ಕಾಂಗ್ರೆಸ್‌ನ ವಿಧಾನ ಪರಿಷತ್‌ ಮಾಜಿ ಸದಸ್ಯರಾದ ಶ್ರೀಕಾಂತ್ ಘೊಟ್ನೇಕರ್ ವಿರುದ್ಧ ಗುತ್ತಿಗೆದಾರ ವಸಂತ ನೀಲಕಂಠ ಚೊರ್ಲೇಕರ್ ಎಂಬವರು ಹಳಿಯಾಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಹಳಿಯಾಳದ ಕ್ಷತ್ರಿಯ ಮರಾಠ ಭವನಕ್ಕೆ ಸ್ಲ್ಯಾಬ್ ಅಳವಡಿಸುವ ಕಾಮಗಾರಿ ಟೆಂಡರ್ ಪಡೆದಿದ್ದೆ. ದೇಣಿಗೆ ಹಣದಿಂದ ಸ್ಲಾಬ್ ಹಾಕಿಸಿದ್ದ ಶ್ರೀಕಾಂತ್ ಘೊಟ್ನೇಕರ್, ಕ್ಷತ್ರಿಯ ಮರಾಠ ಪರಿಷತ್‌ನಿಂದ ಬಿಲ್ ಮಾಡಿಸಿದ್ದರು. ಜತೆಗೆ, ಮಲೆನಾಡು ಅಭಿವೃದ್ಧಿ ಪ್ರಾಧಿಕಾರದಿಂದ 3.71 ಲಕ್ಷ ರೂ. ಪಾವತಿಯಾಗಿತ್ತು. ಈ ಹಣ ತಮಗೆ ನೀಡುವಂತೆ ಶ್ರೀಕಾಂತ್ ಬೆದರಿಕೆ ಹಾಕಿದ್ದರು. ತಮ್ಮ ಕಾರ್‌ನಲ್ಲಿ ಬಲವಂತವಾಗಿ ಲಾಡ್ಜ್ ಒಂದಕ್ಕೆ ಕರೆದೊಯ್ದು 3.33 ಲಕ್ಷ ರೂಪಾಯಿ ಚೆಕ್‌ಗೆ ಬಲವಂತವಾಗಿ ಸಹಿ ಪಡೆದಿದ್ದಾರೆ ಎಂದು ವಸಂತ ನೀಲಕಂಠ ಚೊರ್ಲೇಕರ್ ದೂರಿನಲ್ಲಿ ಆರೋಪಿಸಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದು, ಬಂಧನದ ಭೀತಿ ಎದುರಿಸುತ್ತಿರುವ ಶ್ರೀಕಾಂತ್ ಘೊಟ್ನೇಕರ್ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು ಎಂದು ವರದಿ ಹೇಳಿದೆ.

ಪ್ರಮುಖ ಸುದ್ದಿ :-   ಶ್ರೀರಂಗಪಟ್ಟಣ: ಐಸ್‌ ಕ್ರೀಂ ತಿಂದ ಬಳಿಕ ಅವಳಿ ಮಕ್ಕಳ ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement