ನವಜಾತ ಮೊಮ್ಮಗಳನ್ನು ಮನೆಗೆ ಕರೆತರಲು ಹೆಲಿಕಾಪ್ಟರ್ ಬಾಡಿಗೆಗೆ ತಂದ ರೈತ..!

ಪುಣೆ: ಮೊಮ್ಮಗಳ ಜನನದಿಂದ ಹರ್ಷಗೊಂಡ ಮಹಾರಾಷ್ಟ್ರದ ಪುಣೆ ಜಿಲ್ಲೆಯ ರೈತನೊಬ್ಬ ಮೊಮ್ಮಗಳನ್ನು ಮಂಗಳವಾರ ಮನೆಗೆ ಕರೆತರಲು ಹೆಲಿಕಾಪ್ಟರ್‌ ಅನ್ನು ಬಾಡಿಗೆಗೆ ತಂದಿದ್ದಾರೆ…!
ಪುಣೆಯ ಹೊರವಲಯದಲ್ಲಿರುವ ಬಾಲೆವಾಡಿ ಪ್ರದೇಶದ ನಿವಾಸಿ ಅಜಿತ್ ಪಾಂಡುರಂಗ ಬಲ್ವಾಡ್ಕರ್ ಸುದ್ದಿಗಾರರೊಂದಿಗೆ ಮಾತನಾಡಿ, ಕುಟುಂಬದ ಹೊಸ ಸದಸ್ಯಳಾದ ಕ್ರುಶಿಕಾ ಅವಳಿಗೆ ಭವ್ಯವಾದ ಸ್ವಾಗತವನ್ನು ನೀಡಲು ಅವಳನ್ನು ಹೆಲಿಕಾಪ್ಟರಿನಲ್ಲಿ ಕರೆತರಲು ನಿರ್ಧರಿಸಿದ್ದೆ ಎಂದು ಹೇಳಿದ್ದಾರೆ.

ಹಾಗಾಗಿ ಸಮೀಪದ ಶೆವಾಲ್ ವಾಡಿಯಲ್ಲಿರುವ   ಅಜ್ಜಿ ಮನೆಯಿಂದ ಮಗು ಮತ್ತು ತಾಯಿಯನ್ನು ಮನೆಗೆ ಕರೆತರುವ ಸಮಯ ಬಂದಾಗ, ತಾನು ಹೆಲಿಕಾಪ್ಟರ್ ಅನ್ನು ಬುಕ್ ಮಾಡಿದೆ ಎಂದು ಅವರು ಹೇಳಿದರು.
ಏಪ್ರಿಲ್ 26 ರಂದು ತೆಗೆದ ಫೋಟೋಗಳು ಇಡೀ ಕುಟುಂಬವು ತನ್ನ ಹೊಸ ಸದಸ್ಯರನ್ನು ಸ್ವಾಗತಿಸಲು ಒಟ್ಟುಗೂಡಿರುವುದನ್ನು ತೋರಿಸುತ್ತದೆ. ಹಿನ್ನೆಲೆಯಲ್ಲಿ, ಹೆಲಿಕಾಪ್ಟರ್ ಅನ್ನು ಗುರುತಿಸಬಹುದು. ಈ ಫೋಟೋಗಳನ್ನು ಸುದ್ದಿ ಸಂಸ್ಥೆ ಎಎನ್‌ಐ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ಅವುಗಳು ವೈರಲ್ ಆಗಿವೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement