ಬೆಂಗಳೂರು ಡಿ ಜೆ ಹಳ್ಳಿ -ಕೆ ಜಿ ಹಳ್ಳಿ ಗಲಭೆ ಪ್ರಕರಣ: ಹೈಕೋರ್ಟ್‌ನಿಂದ ಎಸ್‌ಡಿಪಿಐ ಮುಖಂಡ ಮೊಹಮ್ಮದ್ ಶರೀಫ್‌ ಜಾಮೀನು ಮನವಿ ವಜಾ

ಬೆಂಗಳೂರು: ಬೆಂಗಳೂರಿನ ಡಿ ಜೆ ಹಳ್ಳಿ ಹಾಗೂ ಕೆ ಜಿ ಹಳ್ಳಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಎರಡು ವರ್ಷಗಳ ಹಿಂದೆ ನಡೆದಿದ್ದ ಗಲಭೆ ಪ್ರಕರಣದ ಆರೋಪಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್‌ ಇಂಡಿಯಾದ (ಎಸ್‌ಡಿಪಿಐ) ಬೆಂಗಳೂರು ಘಟಕದ ಮುಖ್ಯಸ್ಥ ಮೊಹಮ್ಮದ್ ಶರೀಫ್‌ ಸಲ್ಲಿಸಿದ್ದ ಜಾಮೀನು ಮನವಿಯನ್ನು ಕರ್ನಾಟಕ ಹೈಕೋಟ್ ಇತ್ತೀಚಿಗೆ ವಜಾ ಮಾಡಿದೆ ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ.

ಜಾಮೀನು ತಿರಸ್ಕರಿಸಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಪ್ರಕರಣದ 25ನೇ ಆರೋಪಿಯಾಗಿರುವ ಮೊಹಮ್ಮದ್ ಶರೀಫ್‌ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಬಿ ವೀರಪ್ಪ ಮತ್ತು ಎಸ್ ರಾಚಯ್ಯ ಅವರಿದ್ದ ಪೀಠ, ಮೇಲ್ಮನವಿ ವಜಾಗೊಳಿಸಿ ಆದೇಶಿಸಿದೆ.

ವರದಿ ಪ್ರಕಾರ, ಪ್ರಕರಣ ಸಂಬಂಧ ಎನ್‌ಐಎ ಅಧಿಕಾರಿಗಳು ಆರೋಪಿ ಮೊಹಮ್ಮದ್ ಶರೀಫ್ ವಿರುದ್ಧ ವಿಚಾರಣಾ ನ್ಯಾಯಾಲಯಕ್ಕೆ ದೋಷರೋಪ ಪಟ್ಟಿ ಸಲ್ಲಿಸಿದ್ದಾರೆ. ಆರೋಪಿ ಭಯೋತ್ಪಾದನಾ ಸಂಘಟನೆಯ ಸಕ್ರಿಯ ಸದಸ್ಯನಾಗಿದ್ದು, ಗಲಭೆ ಪ್ರಕರಣದ ಇತರ ಆರೋಪಿಗಳ ಜತೆಗೂಡಿ ಅಪರಾಧಿಕ ಕೃತ್ಯಗಳಿಗೆ ಪಿತೂರಿ ನಡೆಸಿದ್ದಾನೆ. ಕೆ ಜಿ ಹಳ್ಳಿ ಮತ್ತು ಡಿ ಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಎಸ್‌ಡಿಪಿಐ ಸೇರಿ ಇತರ ಆರೋಪಿಗಳಿಗೆ ಗಲಭೆ ಸೃಷ್ಟಿಸಲು ಸಹಕಾರ ನೀಡಿದ್ದಾನೆ. ಪೊಲೀಸ್ ಠಾಣೆಗಳ ಮೇಲೆ ನಡೆದ ದಾಳಿ ಹಾಗೂ ವಾಹನ ಮತ್ತು ಮನೆಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಎಸ್‌ಡಿಪಿಐ ಸದಸ್ಯರನ್ನು ಕರೆತಂದಿದ್ದಾನೆ ಎಂದು ಆರೋಪ ಪಟ್ಟಿಯಲ್ಲಿ ಹೇಳಲಾಗಿದೆ. ಆರೋಪಪಟ್ಟಿ ಸೇರಿ ಪ್ರಕರಣದ ಎಲ್ಲ ದಾಖಲೆಗಳನ್ನು ಗಮನಿಸಿದರೆ ಆರೋಪಿಯು ಮೇಲ್ನೋಟಕ್ಕೆ ಜಾಮೀನು ಪಡೆಯಲು ಅರ್ಹನಲ್ಲ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಾಲಯವು ಮನವಿ ವಜಾ ಮಾಡಿದೆ.
.

ಪ್ರಮುಖ ಸುದ್ದಿ :-   ಕುಮಟಾ : ಕಣ್ಣುಗಳನ್ನು ದಾನ ಮಾಡಿ ಸಾವಿನ ನಂತರವೂ ಸಾರ್ಥಕ್ಯದ ಕಾರ್ಯ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement