ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಇಂದು, ಗುರುವಾರ ಒಟ್ಟು 154 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಬೆಂಗಳೂರಲ್ಲೇ 142 ಪ್ರಕರಣ ದಾಖಲಾಗಿವೆ
ರಾಜ್ಯದ ಕೋವಿಡ್ ಪಾಸಿಟಿವಿಟಿ ದರ ಶೇ.1.49ಕ್ಕೆ ಏರಿಕೆ ಕಂಡರೆ ಬೆಂಗಳೂರಿನ ಪಾಸಿಟಿವಿಟಿ ರೇಟ್ ಶೇ.3 ದಾಟಿದೆ. ಇದೇವೇಳೆ ಒಟ್ಟು 116 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,751ಕ್ಕೆ ಏರಿದೆ.
advertisement
9535127775 / 9901837775 / 6364528715 / 08362775155 / https://icsmpucollege.com/
ರಾಜ್ಯದಲ್ಲಿ ಇಂದು ಒಟ್ಟು 67,860 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 10,319 ಸ್ಯಾಂಪಲ್‌ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 142, ದಕ್ಷಿಣ ಕನ್ನಡ 2, ಕೋಲಾರ 2, ವಿಜಯಪುರ 2, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ದಾರವಾಡ, ಮಂಡ್ಯ, ಉಡುಪಿ ಮತ್ತು ಉತ್ತರಕನ್ನಡದಲ್ಲಿ ತಲಾ 1 ಪ್ರಕರಣ ವರದಿಯಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ