ದೆಹಲಿ ಜಹಾಂಗೀರ್ ಪುರಿ ಗಲಭೆ: ಕತ್ತಿ ಝಳಪಿಸಿದ್ದ ಪ್ರಮುಖ ಆರೋಪಿ ಸೇರಿ ಇಬ್ಬರ ಬಂಧನ

ನವದೆಹಲಿ: ವಾಯುವ್ಯ ದೆಹಲಿಯ ಜಹಾಂಗೀರ್‌ಪುರಿ ಪ್ರದೇಶದಲ್ಲಿ ಈ ತಿಂಗಳಲ್ಲಿ ನಡೆದ ಕೋಮು ಘರ್ಷಣೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸೇರಿದಂತೆ ಇನ್ನೂ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಇಬ್ಬರು ಬಾಲಾಪರಾಧಿಗಳು ಸೇರಿದಂತೆ ಈ ಪ್ರಕರಣದಲ್ಲಿ ಸುಮಾರು 30 ಮಂದಿಯನ್ನು ಬಂಧಿಸಲಾಗಿದೆ. ಆರೋಪಿಗಳಾದ ಜಹಾಂಗೀರಪುರಿ ನಿವಾಸಿಗಳಾದ ಜಾಫರ್ (34) ಮತ್ತು ಬಾಬುದ್ದೀನ್ ಅಲಿಯಾಸ್ ಬಾಬು (43) ಎಂಬವರನ್ನು ಬಂಧಿಸಲಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸ್‌ ಅಪರಾಧ ವಿಭಾಗದ ಪೊಲೀಸರು ಜಹಾಂಗೀರ್ ಪುರಿಯಿಂದ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಜಾಫರ್ ಮತ್ತು ಬಾಬುದ್ದೀನ್ ಇಬ್ಬರೂ ಗಲಭೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಹಲವು ಸಿಸಿಟಿವಿ ಕ್ಯಾಮೆರಾಗಳು ಮತ್ತು ಮೊಬೈಲ್ ವೀಡಿಯೊಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಜಾಫರ್ ಕತ್ತಿಯೊಂದಿಗೆ ಜನಸಂದಣಿಯಲ್ಲಿ ತಿರುಗಾಡುತ್ತಿರುವುದು ಕಂಡುಬಂದಿದೆ.
ಬಾಬುದ್ದೀನ್ ಹಿಂಸಾಚಾರದ ಸಮಯದಲ್ಲಿ ಗುಂಪನ್ನು ಪ್ರಚೋದಿಸುತ್ತಿರುವುದು ಕಂಡುಬಂದಿದೆ. ಡಿಜಿಟಲ್ ಸಾಕ್ಷ್ಯದ ಆಧಾರದ ಮೇಲೆ ಇಬ್ಬರನ್ನೂ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಏಪ್ರಿಲ್ 16 ರಂದು ಹನುಮಾನ್ ಜಯಂತಿ ಮೆರವಣಿಗೆಯಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ ಸಂಭವಿಸಿದ್ದು, ಎಂಟು ಪೊಲೀಸ್ ಸಿಬ್ಬಂದಿ ಮತ್ತು ಸ್ಥಳೀಯ ನಿವಾಸಿ ಗಾಯಗೊಂಡಿದ್ದರು. ಪೊಲೀಸರ ಪ್ರಕಾರ ಘರ್ಷಣೆಯಲ್ಲಿ ಕಲ್ಲು ತೂರಾಟ ನಡೆಸಲಾಯಿತು ಮತ್ತು ಕೆಲವು ವಾಹನಗಳಿಗೆ ಬೆಂಕಿ ಹಚ್ಚಲಾಯಿತು. ಪ್ರಕರಣದ ಐವರು ಆರೋಪಿಗಳ ವಿರುದ್ಧ ಪೊಲೀಸರು ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆಯ ಅಡಿ ಪ್ರಕರಣ ದಾಖಲಿಸಿದ್ದಾರೆ.

ಪ್ರಮುಖ ಸುದ್ದಿ :-   ಜೆಡಿಯು ಯುವ ಮುಖಂಡನ ಗುಂಡಿಕ್ಕಿ ಹತ್ಯೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement