ಬೆಂಗಳೂರು: ಇಂದು ದೆಹಲಿಗೆ ತರಳುತ್ತಿದ್ದು, ದೆಹಲಿ ಪ್ರವಾಸದ ವೇಳೆ ಕೇಂದ್ರ ಸಚಿವರು ಹಾಗೂ ಪಕ್ಷದ ವರಿಷ್ಠರನ್ನು ಭೇಟಿ ಮಾಡುವುದಿಲ್ಲ ಎಂದು ಹೇಳಿರುವ ಮುಖ್ಯಮಂತ್ರಿ ಬೊಮ್ಮಾಯಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮೇ 3ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಆಗ ಸಂಪುಟ ರಚನೆ ಬಗ್ಗೆ ತೀರ್ಮಾನ ಮಾಡುವುದಾಗಿ ಹೇಳಿದ್ದಾರೆ.
advertisement
9535127775 / 9901837775 / 6364528715 / 08362775155 / https://icsmpucollege.com/
ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈಗಾಗಲೇ ಖಾಲಿ ಇರುವ ಸಚಿವ ಸ್ಥಾನಗಳನ್ನು ತುಂಬುವ ಬಗ್ಗೆ ವರಿಷ್ಠರ ಗಮನಕ್ಕೆ ತರಲಾಗಿದೆ. ಹೀಗಾಗಿ ಅಮಿತ್ ಶಾ ಬಂದಾಗ ಈ ಬಗ್ಗೆ ಅವಕಾಶ ಪಡೆದುಕೊಂಡು ಚರ್ಚೆ ನಡೆಸುತ್ತೇನೆ ಎಂದು ತಿಳಿಸಿದರು.
ದೆಹಲಿಯಲ್ಲಿ ನಾಳೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಹಾಗೂ ಮುಖ್ಯಮಂತ್ರಿಗಳ ಸಮ್ಮೇಳನದವಿದ್ದು, ಅದರಲ್ಲಿ ಪಾಲ್ಗೊಳ್ಳಲು ಇಂದು ಸಂಜೆ ದೆಹಲಿಗೆ ಹೋಗುತ್ತಿದ್ದೇನೆ, ಭಾನುವಾರ ಬೆಳಿಗ್ಗೆ ರಾಜ್ಯಕ್ಕೆ ವಾಪಸ್ ಬರಲಿದ್ದೇನೆ ಎಂದು ಬೊಮ್ಮಾಯಿ ತಿಳಿಸಿದರು.
ನಿಮ್ಮ ಕಾಮೆಂಟ್ ಬರೆಯಿರಿ