ಉಡುಪಿ: ಕರ್ತವ್ಯನಿರತ ಹೆಡ್‌ ಕಾನ್ಸ್‌ಟೇಬಲ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ

posted in: ರಾಜ್ಯ | 0

ಉಡುಪಿ: ಕರ್ತವ್ಯನಿರತ ಪೊಲೀಸ್ ಹೆಡ್‌ ಕಾನ್ಸ್‌ಟೇಬಲ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಆದಿ ಉಡುಪಿ ಪ್ರೌಢಶಾಲೆ ಬಳಿ ಶುಕ್ರವಾರ (ಏಪ್ರಿಲ್‌ 29) ನಡೆದಿದೆ.

ಮೃತ ಸಶಸ್ತ್ರ ಮೀಸಲು ಪಡೆಯ ಹೆಡ್‌ ಕಾನ್ಸ್‌ಟೇಬಲ್‌ ಅನ್ನು ರಾಜೇಶ್ ಕುಂದರ್ ಎಂದು ಗುರುತಿಸಲಾಗಿದೆ. ಇವರು ಇಂದು,ಶುಕ್ರವಾರ ಆದಿಉಡುಪಿ ಪ್ರೌಢಶಾಲೆಯಲ್ಲಿ ಎಸೆಸೆಲ್ಸಿ ಉತ್ತರ ಪತ್ರಿಕೆ ಕೊಠಡಿಯ ಭದ್ರತಾ ನಿರ್ವಹಣೆಯಲ್ಲಿ ರಾತ್ರಿ ಪಾಳಿಗೆ ಕರ್ತವ್ಯನಿರತರಾಗಿದ್ದ ವೇಳೆ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ. ಇಂದು ಬೆಳಿಗ್ಗೆ ಅವರನ್ನು ರಿಲೀವ್ ಮಾಡಲು ಇತರ ಸಿಬ್ಬಂದಿ ಬಂದಾಗ ಘಟನೆ ಬೆಳಕಿಗೆ ಬಂದಿದೆ..
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಫ್‌‌ಎಸ್‌ಎಲ್, ಆರ್‌ಎಫ್‌‌ಎಸ್‌ಎಲ್, ಫಾರೆನ್ಸಿಕ್ ತಂಡಗಳು ಪರಿಶೀಲನೆ ನಡೆಸಿವೆ ಎಂದು ಉಡುಪಿ ಎಎಸ್‌ಪಿ ಎಸ್. ಟಿ. ಸಿದ್ದಲಿಂಗಪ್ಪ ತಿಳಿಸಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ಓದಿರಿ :-   ಹುಚ್ಚು ಸಾಹಸ...ಶ್ರೀನಿವಾಸ ಸಾಗರ ಅಣೆಕಟ್ಟಿನ ಗೋಡೆ ಹತ್ತುವಾಗ 30 ಅಡಿ ಎತ್ತರದಿಂದ ಬಿದ್ದ ಯುವಕ | ದೃಶ್ಯ ವೀಡಿಯೊದಲ್ಲಿ ಸೆರೆ
advertisement

ನಿಮ್ಮ ಕಾಮೆಂಟ್ ಬರೆಯಿರಿ