ಪಿಎಸ್​ಐ ಹುದ್ದೆ ನೇಮಕಾತಿ ಮರು ಪರೀಕ್ಷೆಗೆ ರಾಜ್ಯ ಸರ್ಕಾರ ನಿರ್ಧಾರ: ಆರಗ ಜ್ಞಾನೇಂದ್ರ ಘೋಷಣೆ

ಬೆಂಗಳೂರು: ಕರ್ನಾಟಕದಲ್ಲಿ ಪಿಎಸ್​ಐ ಹುದ್ದೆ ನೇಮಕಾತಿಗೆ ಮರು ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರಕಟಿಸಿದ್ದಾರೆ.
ಈ ಹಿಂದೆ ನಡೆದಿದ್ದ ಪಿಎಸ್‌ಐ ಪರೀಕ್ಷೆ ಫಲಿತಾಂಶವನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ. 545 ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಶುಕ್ರವಾರ ಗೃಹ ಸಚಿವ ಆರಗ ಜ್ಞಾನೇಂದ್ರ ಈ ಮಾಹಿತಿ ನೀಡಿದ್ದಾರೆ. ಅಲ್ಲದೆ ಶೀಘ್ರವೇ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರಿನ ಕೇಂದ್ರದಲ್ಲೂ ಅಕ್ರಮದ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಮರು ಪರೀಕ್ಷೆಗೆ ನಿರ್ಧರಿಸಲಾಗಿದೆ. ಪ್ರಾಮಾಣಿಕ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಮರು ಪರೀಕ್ಷೆ ನಡೆಸಲಾಗುವುದು. ಯಾರು ಪಿಎಸ್​ಐ ಪರೀಕ್ಷೆ ಬರೆದಿದ್ದಾರೋ ಅವರಿಗೆ ಮರು ಪರೀಕ್ಷೆ ನಡೆಯುತ್ತದೆ. ಆದರೆ, ಆಪಾದಿತರಿಗೆ ಮರು ಪರೀಕ್ಷೆಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಹಣಕ್ಕಾಗಿ ಹುದ್ದೆ ಎಂಬುದನ್ನು ಎಲ್ಲರೂ ಮರೆಯಬೇಕು. ತಪ್ಪಿತಸ್ಥರ ವಿರುದ್ಧ ‌ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಪಿಎಸ್​ಐ ಪರೀಕ್ಷೆ ಅಕ್ರಮ ಬೆಂಗಳೂರಿನಲ್ಲೂ ಆಗಿರುವ ಆರೋಪ ಕೇಳಿಬಂದಿದೆ. ಹೀಗಾಗಿ ಕಳೆದ ಬಾರಿ ನಡೆದ ಪರೀಕ್ಷಾ ಕೇಂದ್ರಗಳನ್ನು ಬದಲಾವಣೆ ಮಾಡಲಾಗುವುದು. ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಲಾಗುವುದು ಎಂದು ಗೃಹ ಸಚಿವರು ಮಾಹಿತಿ ನೀಡಿದರು.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿ : ಗೃಹ ಸಚಿವ ಡಾ..ಪರಮೇಶ್ವರ

ಗುರುವಾರ ರಾತ್ರಿ ಪೂನಾದಲ್ಲಿ ದಿವ್ಯಾ ಹಾಗರಗಿ ಅವರನ್ನ ಬಂಧಿಸಿ ಪೊಲೀಸರು ಕಲಬುರಗಿಗೆ ಕರೆತರುತ್ತಿದ್ದಾರೆ. ಕಷ್ಟಪಟ್ಟು ಓದಿದವರ ಬಾಯಿಗೆ ಇವರು ಮಣ್ಣು ಹಾಕಿದ್ದಾರೆ. ಹಲವು ವರ್ಷಗಳಿಂದ ಈ ರೀತಿಯ ಅಕ್ರಮ ನಡೆಯುತ್ತಿದೆ. ಮುಂದೆ ಯಾವ ರೀತಿ ಪರೀಕ್ಷೆ ನಡೆಸಬೇಕೆಂಬ ಬಗ್ಗೆಯೂ ಚಿಂತನೆ ನಡೆಯುತ್ತಿದೆ. ಕಷ್ಟಪಟ್ಟು ಓದಿದವರಿಗೆ ಯಾವುದೇ ಕಾರಣಕ್ಕೂ ವಂಚನೆ ಆಗಬಾರದರು. ಈ ಹಗರಣದಲ್ಲಿ ಎಷ್ಟು ಪ್ರಭಾವಿಗಳಿದ್ದರೂ ಹಸ್ತಕ್ಷೇಪ ಮಾಡಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement