ಹುಬ್ಬಳ್ಳಿ ಗಲಭೆ ಆರೋಪಿಗಳಿಗೆ ಉಡುಗೊರೆ ನೀಡಿದ ಆರೋಪ ಸತ್ಯಕ್ಕೆ ದೂರ: ಜಮೀರ್ ಸ್ಪಷ್ಟನೆ

ಬೆಂಗಳೂರು: ಹುಬ್ಬಳ್ಳಿ ಗಲಭೆಯಲ್ಲಿ ಕಲ್ಲು ತೂರಾಟ ನಡೆಸಿ ಬಂಧೀತ ಆರೋಪಿಗಳಿಗೆ 5 ಸಾವಿರ ರೂ. ನಗದು ಹಾಗೂ ರಂಜಾನ್ ಫುಡ್‌ಕಿಟ್ ನೀಡಿ ಸಹಾಯ ಮಾಡಿದ್ದಾರೆ ಎಂದು ತಮ್ಮ ಮೇಲೆ ಆರೋಪ ಕೇಳಿಬರುತ್ತಿದ್ದಂತೆ, ಶಾಸಕ ಜಮೀರ್ ಟ್ವೀಟ್ ಮೂಲಕ ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ.

ತಮ್ಮ ಮೇಲಿನ ಆರೋಪಗಳೆಲ್ಲ ಸುಳ್ಳು ಎಂದು ಹೇಳಿರುವ ಅವರು ಅದಕ್ಕೂ ನನಗೂ ಸಂಬಂಧವೇ ಇಲ್ಲ ಎಂದು ಹೇಳಿದ್ದಾರೆ. ತಾನು ಕಳೆದ ಏಪ್ರಿಲ್ 17ರಂದು ಬೆಂಗಳೂರು ತೊರೆದು ಧಾರ್ಮಿಕ ಯಾತ್ರೆಗಾಗಿ ಮೆಕ್ಕಾಕ್ಕೆ ಬಂದಿದ್ದೇನೆ. ಈಗ ನನ್ನ ವಿರುದ್ಧ ಮಾಡಲಾಗುತ್ತಿರುವ ಆರೋಪಗಳಿಗೂ ನನಗೂ ಯಾವ ರೀತಿಯ ಸಂಬಂಧವೂ ಇಲ್ಲ. ಈ ಎಲ್ಲಾ ಆರೋಪಗಳು ಸತ್ಯಕ್ಕೆ ದೂರವಾದವು ಎಂದು ಅವರು ಟ್ವೀಟ್‌ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಕಲ್ಲು ತೂರಾಟ ನಡೆಸಿದವರಿಗೆ ಚಾಮರಾಜಪೇಟೆ ಶಾಸಕ ಜಮೀರ್ ಅಹಮ್ಮದ್‌  ಖಾನ್ ಅವರು ಸಹಾಯ ಮಾಡುತ್ತಿದ್ದಾರೆ. ದೇಗುಲ, ಪೊಲೀಸ್ ಠಾಣೆಗೆ ಕಲ್ಲು ಹೊಡೆದವರಿಗೆ ಜಮೀರ್ ನೆರವು ನೀಡಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿತ್ತು. ಟ್ವೀಟ್‌ ಮೂಲಕ ಜಮೀರ್‌ ಅವರ ಕ್ರಮವನ್ನು ಬಿಜೆಪಿ ಪ್ರಶ್ನಿಸಿತ್ತು. ಈಗ ಜಮೀರ್‌ ಅಹಮ್ಮದ್‌ ಸ್ಪಷ್ಟನೆ ನೀಡಿದ್ದು, ಇದು ಸತ್ಯಕ್ಕೆ ದೂರವಾದದ್ದು, ಇದಕ್ಕೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

4.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement