ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಗೆ ಗ್ರೀನ್ ಸಿಗ್ನಲ್ ನೀಡಿದ ಸರ್ಕಾರ: ಇಂದಿನಿಂದ ಆರಂಭ, ಇಲಾಖಾ ಸಚಿವರಿಗೆ ವರ್ಗಾವಣೆ ಹೊಣೆ

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರ ವರ್ಗಾವಣೆಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಶೇ.6ರಷ್ಟು ಮೀರದಂತೆ ವರ್ಗಾವಣೆ ಮಾಡಲು ಆದೇಶಿಸಿದೆ.
ಅಲ್ಲದೆ, ರಾಜ್ಯ ಸರ್ಕಾರವು ವರ್ಗಾವಣೆಯ ಹೊಣೆಗಾರಿಕೆಯನ್ನು ಆಯಾ ಇಲಾಖಾ ಸಚಿವರಿಗೆ ನೀಡಿ ಆದೇಶಿಸಿದೆ.
ಈ ಕುರಿತು ರಾಜ್ಯದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ಸರ್ಕಾರಿ ನೌಕರರ ವರ್ಗಾವಣೆ ( Transfer of Government Employees ) ಕುರಿತು ವಿಸ್ತೃತ ಮಾರ್ಗಸೂಚಿಗಳನ್ನು ನೀಡಲಾಗಿದೆ. ಈ ಮಾರ್ಗಸೂಚಿಗಳ ಪ್ರಕಾರ ಸರ್ಕಾರಿ ನೌಕರರ ವರ್ಗಾವಣೆಗಳನ್ನು ಪ್ರತಿ ವರ್ಷ ಮೇ ಮತ್ತು ಜೂನ್ ತಿಂಗಳುಗಳಲ್ಲಿ ಮಾತ್ರ ಷರತ್ತುಗಳಿಗೆ ಒಳಪಟ್ಟು ಮಾಡಬಹುದಾಗಿದೆ ಎಂದು ಸೂಚಿಸಲಾಗಿದೆ.
2022-23ನೇ ಸಾಲಿಗೆ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್ ಸಿ ಮತ್ತು ಗ್ರೂಪ್-ಡಿ ವರ್ಗದ ಅಧಿಕಾರಿಗಳು ಹಾಗೂ ನೌಕರರಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ ಘಟದಲ್ಲಿ ಕಾರ್ಯನಿರತ ವೃಂದ ಬಲದ ಶೇ.6ರಷ್ಟು ಮೀರದಂತೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಹೊಣೆಗಾರಿಕೆ ನೀಡಿದೆ.
ಶೇ.6ರಷ್ಟು ಗ್ರೂಪ್-ಎ, ಬಿ, ಸಿ ಮತ್ತು ಡಿ ವರ್ಗದ ಅಧಿಕಾರಿ, ನೌಕರಿಗೆ ಅನ್ವಯವಾಗುವಂತೆ ದಿನಾಂಕ 01-05-2022ರಿಂದ ದಿನಾಂಕ 15-06-2022ರ ವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಿ, ರಾಜ್ಯ ಸರ್ಕಾರ ಆದೇಶಿಸಿದೆ.

ಪ್ರಮುಖ ಸುದ್ದಿ :-   ಕುಣಿಗಲ್ : ರಾಮನವಮಿ ಪಾನಕ ಸೇವಿಸಿದ 42 ಮಂದಿ ಅಸ್ವಸ್ಥ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement