ಕೊಳದಮಠದ ಶ್ರೀ ಶಾಂತವೀರ ಸ್ವಾಮೀಜಿ ಲಿಂಗೈಕ್ಯ

ಬೆಂಗಳೂರು: ಕೊಳದಮಠದ ಶ್ರೀ ಶಾಂತವೀರ ಸ್ವಾಮೀಜಿ (80) ಇಂದು, ಶನಿವಾರ ಬೆಳಗ್ಗೆ ಲಿಂಗೈಕ್ಯರಾಗಿದ್ದಾರೆ.
ಆರೋಗ್ಯವಾಗಿದ್ದ ಶ್ರೀಗಳು ಶುಕ್ರವಾರ ಮಹಾಲಕ್ಷ್ಮಿಲೇಔಟ್‍ನಲ್ಲಿ ನಡೆದ ಕಾರ್ಯಕ್ರಮಕ್ಕೆ ಹೋಗಿಬಂದಿದ್ದರು. ಇಂದು ಎಂದಿನಂತೆ ತಮ್ಮ ನಿತ್ಯಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಅವರಿಗೆ ಹೃದಯಾಘಾತ ಸಂಭವಿಸಿದೆ.  ಶ್ರೀಗಳು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಮಠದ ಆವರಣದಲ್ಲಿ ಶ್ರೀಗಳ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಮಠದ ಸಿಬ್ಬಂದಿ ತಿಳಿಸಿದ್ದಾರೆ.

ಅಖಿಲ ಭಾರತ ಸಂಸ್ಕೃತ ವಿದ್ಯಾಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರೂ ಆಗಿದ್ದ ಶ್ರೀಗಳು ಕೊಳದ ಮಠದ ಮಹಾಸಂಸ್ಥಾನದ ಮೂಲಕ ವಿವಿಧ ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸುಕೊಂಡು ಬಂದಿದ್ದರು.
ಶ್ರೀಗಳ ನಿಧನಕ್ಕೆ ತುಮಕೂರು ಸಿದ್ದಗಂಗಾಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಸುತ್ತೂರು ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ವಿ.ಸೋಮಣ್ಣ ಸೇರಿದಂತೆ ಪ್ರಮೂಕರು ಶ್ರೀಗಳ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement