ಮೂರು ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ರಾಗಿ ಖರೀದಿಗೆ ಕೇಂದ್ರದ ಒಪ್ಪಿಗೆ: ಸಿಎಂ ಬೊಮ್ಮಾಯಿ

ನವದೆಹಲಿ: ಮೂರು ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ರಾಗಿ ಖರೀದಿಗೆ ಕೇಂದ್ರ ಸರ್ಕಾರದ ಒಪ್ಪಿಗೆ ನೀಡಿದೆ. ಈ ಮೂಲಕ ರಾಗಿ ಬೆಳೆಗಾರರ ದೊಡ್ಡ ಸಂಕಷ್ಟ ಬಗೆಹರಿಸಿದಂತಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು, ಶನಿವಾರ ನವದೆಹಲಿಯಲ್ಲಿ ಮುಖ್ಯಮಂತ್ರಿಗಳ ಹಾಗೂ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳ ಸಮ್ಮೇಳನದಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಐದಾರು ಜಿಲ್ಲೆಗಳಲ್ಲಿ ರಾಗಿ ಬೆಳೆದ ರೈತರಿಗೆ ಬೆಲೆ ಸಿಗಬೇಕೆಂಬ ಕಾರಣದಿಂದ ಮೊದಲು 2 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿ ಮಾಡಲಾಯಿತು. ಪುನ: ಬೇಡಿಕೆ ಬಂದ ಹಿನ್ನೆಲೆಯಲ್ಲಿ 485 ಕೋಟಿ ರೂ.ಗಳನ್ನು ಮಂಜೂರು ಮಾಡಿ 1.14 ಲಕ್ಷ ಮೆಟ್ರಿಕ್ ಟನ್ ಖರೀದಿ ಮಾಡಲಾಯಿತು. ರಾಗಿ ಹೆಚ್ಚು ಬೆಳೆದ್ದದ್ದರಿಂದ ಖರೀದಿಗೆ ರೈತರ ಒತ್ತಾಸೆಯ ಮೇರೆಗೆ ಕೇಂದ್ರ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೇಂದ್ರ ಸರ್ಕಾರ ಒಪ್ಪಿಗೆ ನೀಡಿರುವುದರಿಂದ ರಾಗಿ ಖರೀದಿಯನ್ನು ಪ್ರಾರಂಭಿಸಲಾಗುವುದು. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಹಾಗೂ ಕೇಂದ್ರ ಆಹಾರ ಸಚಿವ ಪಿಯೂಶ್ ಗೋಯಲ್ ಅವರಿಗೆ ಧನ್ಯವಾದಗಳನ್ನು ಅರ್ಪಿಸುವುದಾಗಿ ತಿಳಿಸಿದರು.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement