ಸೋಮವಾರವೇ ರಂಜಾನ್ ಹಬ್ಬ ಆಚರಣೆಗೆ ನಿರ್ಧಾರ: ಸಾರ್ವತ್ರಿಕ ರಜೆ ಘೋಷಿಸಿ ಸರ್ಕಾರದ ಆದೇಶ

ಬೆಂಗಳೂರು: ರಂಜಾನ್ ಹಬ್ಬ ಆಚರಣೆಗೆ ಮೂನ್ ಕಮಿಟಿ ತೀರ್ಮಾನಿಸಿದ್ದು, ಸೋಮವಾರವೇ ರಂಜಾನ್ ಹಬ್ಬ ಆಚರಣೆಗೆ ನಿರ್ಧಾರ ಕೈಗೊಳ್ಳಲಾಗಿದೆ.
ಮಂಗಳವಾರ ಬದಲು ಸೋಮವಾರವೇ ರಂಜಾನ್ ಹಬ್ಬವಿದ್ದು, ರಂಜಾನ್ ಹಬ್ಬದ ಪ್ರಯುಕ್ತ ಸೋಮವಾರವೇ ಸಾರ್ವತ್ರಿಕ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ರಾಜ್ಯ ಸರ್ಕಾರದ ಶಿಷ್ಟಾಚಾರ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. 2022ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯಲ್ಲಿ ದಿನಾಂಕ 03-05-2022ರಂದು ಖುತುಬ್ ಎ ರಂಜಾನ್ ಹಬ್ಬದ ಪ್ರಯುಕ್ತ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿತ್ತು.ಈಗ ಹಬ್ಬವನ್ನು ದಿನಾಂಕ 02-05-2022ರಂದು ಆಚರಿಸಲು ಮೂನ್ ಕಮಿಟಿಯು ತೀರ್ಮಾನಿಸಿರುವುದರಿಂದ ಸಾರ್ವತ್ರಿಕ ರಜೆಯನ್ನು ಸೋಮವಾರ ಮಂಜೂರು ಮಾಡಿ ಆದೇಶಿಸಲಾಗಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement