ಕೊರೊನಾ ಸಂಬಂಧ ಏಪ್ರಿಲ್ 27ರಂದು ಪ್ರಧಾನಿ ಮೋದಿ ವೀಡಿಯೋ ಕಾನ್ಫರೆನ್ಸ್ ನಂತರ ಕೋವಿಡ್ -19 ಪ್ರೋಟೋಕಾಲ್ ; ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ದೇಶದ ಕೆಲವು ಭಾಗಗಳಲ್ಲಿ ಕೋವಿಡ್ -19 ಪ್ರಕರಣಗಳು ಕ್ರಮೇಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಏಪ್ರಿಲ್ 27 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕರೆದಿರುವ ಮುಖ್ಯಮಂತ್ರಿಗಳ ಸಭೆ ಕರೆದಿದ್ದು, ಅದರಲ್ಲಿ ಭಾಗವಹಿಸಿದ ನಂತರ ಹೊಸ ಪ್ರೋಟೋಕಾಲ್ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕೆಲವು ರಾಜ್ಯಗಳು ಹೆಚ್ಚಿನ ಪ್ರಕರಣಗಳನ್ನು ವರದಿ ಮಾಡುತ್ತಿವೆ, … Continued

ಆಂಧ್ರದಲ್ಲಿ ಮತ್ತೊಂದು ಇವಿ ಬೈಕ್ ಬ್ಯಾಟರಿ ಸ್ಫೋಟ: ವ್ಯಕ್ತಿ ಸಾವು, ಪತ್ನಿಗೆ ಗಾಯ

ಅಮರಾವತಿ: ಮೂರು ದಿನಗಳ ಹಿಂದೆ ನೆರೆಯ ತೆಲಂಗಾಣದ ನಿಜಾಮಾಬಾದ್ ಪಟ್ಟಣದಲ್ಲಿ ವಿದ್ಯುತ್ ವಾಹನದ ಬ್ಯಾಟರಿ ಸ್ಫೋಟಗೊಂಡು 80 ವರ್ಷದ ವ್ಯಕ್ತಿ ಸಾವಿಗೀಡಾದ ಘಟನೆ ಮಾಸುವ ಮುನ್ನವೇ ಆಂಧ್ರದಲ್ಲಿ ಮತ್ತೊಂದು ಇವಿ ಬೈಕ್ ಬ್ಯಾಟರಿ ಸ್ಫೋಟಗೊಂಡು ವ್ಯಕ್ತಿ ಸಾವಿಗೀಡಾದ ಘಟನೆ ವರದಿಯಾಗಿದೆ. ಮಲಗುವ ಕೋಣೆಯಲ್ಲಿ ಹೊಸ ಎಲೆಕ್ಟ್ರಿಕ್ ಬೈಕ್‌ನ ಬ್ಯಾಟರಿ ಸ್ಫೋಟಗೊಂಡು 40 ವರ್ಷದ ವ್ಯಕ್ತಿಯೊಬ್ಬರು ಸಾವಿಗೀಡಾದ … Continued

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡ, ದೇಶಕ್ಕೆ ಕೊಡುಗೆ ನೀಡಿದ ಮಹನೀಯರ ಹೆಸರನ್ನಿಡಿ: ಸಿಎಂ ಬೊಮ್ಮಾಯಿಗೆ ಮಾಜಿ ಸಿಎಂ ಬಿಎಸ್‌ವೈ ಪತ್ರ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ಅವರ ಅವರು ಇಡುವುದಾಗಿ ಘೋಷಣೆ ಮಾಡಿದ ನಂತರ ಈಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಇಡುವುದು ಬೇಡ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವವರಿಗೆ … Continued

ಹನುಮಾನ್ ಚಾಲೀಸಾ ವಿವಾದ: ರವಿ, ನವನೀತ್ ರಾಣಾ ವಿರುದ್ಧ ದೇಶದ್ರೋಹ ಆರೋಪ, ನ್ಯಾಯಾಂಗ ಬಂಧನ

ಮುಂಬೈ: ಮುಂಬೈ ನ್ಯಾಯಾಲಯವು ಭಾನುವಾರ ಸಂಸದೆ ನವನೀತ್ ರಾಣಾ ಮತ್ತು ಅವರ ಪತಿ ಶಾಸಕ ರವಿ ರಾಣಾ ಅವರನ್ನು ಮೇ 6ರ ವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಮನೆ ಮುಂದೆ ಹನುಮಾನ್ ಚಾಲೀಸಾವನ್ನು ಪಠಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ “ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಸೃಷ್ಟಿಸಿದ” ಆರೋಪದ ಮೇಲೆ ದಂಪತಿಯನ್ನು ನಿನ್ನೆ ಸಂಜೆ … Continued

ನೈಜೀರಿಯಾ ತೈಲ ಸಂಸ್ಕರಣಾಗಾರದಲ್ಲಿ ಸ್ಫೋಟ-100ಕ್ಕೂ ಹೆಚ್ಚು ಜನರು ಸಾವು

ಪೋರ್ಟ್ ಹಾರ್ಕೋರ್ಟ್ (ನೈಜೀರಿಯಾ): ದಕ್ಷಿಣ ನೈಜೀರಿಯಾದಲ್ಲಿನ ಅಕ್ರಮ ತೈಲ ಸಂಸ್ಕರಣಾಗಾರದಲ್ಲಿ ಸ್ಫೋಟ ಸಂಭವಿಸಿದ ನಂತರ ರಾತ್ರಿಯಿಡೀ ಹಲವಾರು ಜನರು ಸುಟ್ಟು ಸಾವಿಗೀಡಾಗಿದ್ದಾರೆ ಎಂದು ಎನ್‌ಜಿಒ ಶನಿವಾರ ತಿಳಿಸಿದೆ. ಪೊಲೀಸರು ಸ್ಫೋಟವನ್ನು ದೃಢಪಡಿಸಿದರು, ಇದು ಶುಕ್ರವಾರ ತಡವಾಗಿ ಸಂಭವಿಸಿದೆ ಎಂದು ಹೇಳಿದ್ದಾರೆ, ಆದರೆ ಸಾವುನೋವುಗಳ ವಿವರಗಳನ್ನು ನೀಡಲಿಲ್ಲ. ಗುರುತಿಸಲಾಗದಷ್ಟು ಸುಟ್ಟುಹೋಗಿರುವ ಹಲವಾರು ದೇಹಗಳು ನೆಲದ ಮೇಲೆ ಬಿದ್ದಿದ್ದರೆ, … Continued

ಮರಕ್ಕೆ ಡಿಕ್ಕಿಯಾದ ಬೊಲೆರೊ: ಮೂವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಬೊಲೆರೊ ವಾಹನ ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಬೋಕಿಕೆರೆ ಗೇಟ್ ಬಳಿ ಭಾನುವಾರ ಮುಂಜಾನೆ ನಡೆದ ಬಗ್ಗೆ ವರದಿಯಾಗಿದೆ. ಮೃತರನ್ನು ಹೊನ್ನಾವರ ನಿವಾಸಿಗಳಾದ ಶ್ರೀಧರ ನಾಯ್ಕ್, ಜೀವನಕುಮಾರ್, ವಿನಾಯಕ ಎಂದು ಗುರುತಿಸಲಾಗಿದೆ. ಎಲ್ಲರೂ ತುಮಕೂರು ಗ್ಯಾಸ್ ಪೈಪ್ ಲೈನ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು … Continued

ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ-ಇ ಮೇಲ್ ಬಂದಿದ್ದು ಪಾಕಿಸ್ತಾನದಿಂದ..?!

ಬೆಂಗಳೂರು: ಬೆಂಗಳೂರು ನಗರದ ಪ್ರತಿ‍ಷ್ಠಿತ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿರುವ ಇಮೇಲ್ ಪಾಕಿಸ್ತಾನದಿಂದ ಬಂದಿದೆ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಶಾಲೆಗಳಲ್ಲಿ ಬಾಂಬ್ ಇರಿಸಲಾಗಿದೆ ಎಂದು ಏ. 8 ರಂದು ಬೆಂಗಳೂರು ನಗರದ ಹಲವಾರು ಶಾಲೆಗಳಿಗೆ ಇಮೇಲ್ ಸಂದೇಶ ಬಂದಿತ್ತು. ಪ್ರಕರಣದ ಬೆನ್ನತ್ತಿದ್ದ ಬೆಂಗಳೂರು ಪೊಲೀಸರು ಇಮೇಲ್ ಬಂದಿರುವ ಮೂಲವನ್ನು ಜಾಲಾಡತೊಡಗಿದಾಗ ಇಮೇಲ್ ಪಾಕಿಸ್ತಾನದಿಂದ ಕಳುಹಿಸಲಾಗಿದೆ … Continued

ಜಮ್ಮು -ಕಾಶ್ಮೀರದಲ್ಲಿ ಪ್ರಧಾನಿ ಮೋದಿಯವರ ಸಮಾವೇಶ ನಡೆಯುವ ಸ್ಥಳದ ಸಮೀಪದಲ್ಲಿ ಸ್ಫೋಟ: ವರದಿ

ಜಮ್ಮು -ಕಾಶ್ಮೀರದಲ್ಲಿ ಪ್ರಧಾನಿ ಮೋದಿಯವರ ಸಮಾವೇಶ ನಡೆಯುವ ಸ್ಥಳದಿಂದ 12 ಕಿಮೀ ದೂರದಲ್ಲಿ ಸ್ಫೋಟ: ವರದಿ ಜಮ್ಮು: ಭಾನುವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರ್ಯಾಲಿ ನಡೆಯುವ ಸ್ಥಳದಿಂದ 12 ಕಿಮೀ ದೂರದ ಮೈದಾನದಲ್ಲಿ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. ಜಮ್ಮು ಜಿಲ್ಲೆಯ ಲಾಲಿಯಾನ ಗ್ರಾಮದಲ್ಲಿ ಸ್ಫೋಟ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ … Continued

ಭಟ್ಕಳ: ಅಧಿಕಾರಿ ವಿರುದ್ಧ ಬ್ಯಾಂಕ್‌ನಲ್ಲಿ 1.50 ಕೋಟಿ ರೂ.ಗಳ ಅವ್ಯಹಾರದ ಆರೋಪ-ದೂರು ದಾಖಲು, ಅಧಿಕಾರಿ ಪರಾರಿ

ಭಟ್ಕಳ: ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಬಝಾರ್ ಶಾಖೆಯಲ್ಲಿ ಅಂದಾಜು ₹ 1.50 ಕೋಟಿ ಅವ್ಯವಹಾರ ನಡೆದ ಬಗ್ಗೆ ಶಹರ ಪೊಲೀಸ್ ಠಾಣೆಯಲ್ಲಿ ಶನಿವಾರ ದೂರು ದಾಖಲಾಗಿದೆ. ಈ ಹಿಂದೆ ಶಾಖಾ ವ್ಯವಸ್ಥಾಪಕರಾಗಿದ್ದ ಮಂಗಳೂರಿನ ಕಾವೂರು ಬೊಳ್ಪುಗಡ್ಡೆ ನಿವಾಸಿ ಅನೂಪ್ ದಿನಕರ ಪೈ ವಿರುದ್ಧ ಈ ಆರೋಪ ಮಾಡಲಾಗಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಅವರು … Continued

ಗ್ರಾಹಕರಿಗೆ ಎಸ್‌ಬಿಐ ಮುನ್ನೆಚ್ಚರಿಕೆ: ಈ ಸಂಖ್ಯೆಗಳಿಂದ ಫೋನ್‌ ಕರೆ-ಮೆಸೇಜ್‌ ಬಂದರೆ ಪ್ರತಿಕ್ರಿಯೆ ನೀಡಲು ಹೋಗಬೇಡಿ

ನವದೆಹಲಿ: ಹಣ ವಂಚನೆ ಬಗೆಗಿನ ಇತ್ತೀಚಿನ ಎಚ್ಚರಿಕೆಯಲ್ಲಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಗ್ರಾಹಕರಿಗೆ ಎರಡು ಸಂಖ್ಯೆಗಳಿಂದ ಫೋನ್‌ ಕರೆಗಳನ್ನು ತೆಗೆದುಕೊಳ್ಳದಂತೆ ಎಚ್ಚರಿಕೆ ನೀಡಿದೆ. KYC (ನಿಮ್ಮ ಗ್ರಾಹಕರನ್ನು ತಿಳಿದುಕೊಳ್ಳಿ) ಹೆಸರಿನಲ್ಲಿ “ಈ ಲಿಂಕ್ ಅನ್ನು ಕ್ಲಿಕ್ ಮಾಡಿ” ಎಂದು ವಂಚಕರು ಬಳಕೆದಾರರನ್ನು ಮನವೊಲಿಸುತ್ತಿದ್ದಾರೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಟ್ವೀಟ್ … Continued