ಯೋಗಿ ಆದಿತ್ಯನಾಥರಿಂದ ಸ್ಫೂರ್ತಿ ಪಡೆದ ಐವರು ಮದ್ಯ ಮಾಫಿಯಾದವರು ಪೋಸ್ಟರ್‌ ಹಿಡಿದು ಶರಣರು…!

ಶಹಜಹಾನ್‌ಪುರ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನೀತಿಗಳಿಂದ ಪ್ರೇರಿತರಾಗಿ ಅಕ್ರಮ ಮದ್ಯ ತಯಾರಿಕೆ ಮತ್ತು ಮಾರಾಟದಲ್ಲಿ ತೊಡಗಿಸಿಕೊಂಡಿದ್ದ ಐವರು ಇಲ್ಲಿನ ಪೊಲೀಸ್ ಠಾಣೆಯಲ್ಲಿ ಶನಿವಾರ ಶರಣಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೋಲೀಸರ ಪ್ರಕಾರ, ಐವರು ಪೋಸ್ಟರ್‌ಗಳನ್ನು ಬರೆದು ಅದನ್ನು ಹಿಡಿದುಕೊಂಡು ಬಂದು ಪೊಲೀಸ್‌ ಠಾಣೆಯಲ್ಲಿ ಶರಣಾಗಿದ್ದಾರೆ. ನಾನು ದೇಶೀಯ ಮದ್ಯವನ್ನು ತಯಾರಿಸುವ ಮತ್ತು … Continued

ಜಮ್ಮುವಿನ ಸುಂಜ್ವಾನ್‌ನಲ್ಲಿ ಭದ್ರತಾ ಸಿಬ್ಬಂದಿ ಬಸ್ ಮೇಲೆ ಭಯೋತ್ಪಾದಕರಿಂದ ನಡೆದ ಗ್ರೆನೇಡ್‌-ಗುಂಡಿನ ದಾಳಿ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನವದೆಹಲಿ: ಆತ್ಮಾಹುತಿ ದಾಳಿಯ ಹೊಣೆ ಹೊತ್ತಿದ್ದ ಜೈಶ್-ಎ-ಮೊಹಮ್ಮದ್ ಉಗ್ರರನ್ನು ಭದ್ರತಾ ಸಿಬ್ಬಂದಿ ಹೊಡೆದುರುಳಿಸಿದ ಒಂದು ದಿನದ ನಂತರ.ಜಮ್ಮು ಮತ್ತು ಕಾಶ್ಮೀರದ ಸುಂಜ್ವಾನ್ ಪ್ರದೇಶದಲ್ಲಿ ನಡೆದ ಭಯೋತ್ಪಾದಕ ದಾಳಿಯ ಸಿಸಿಟಿವಿ ದೃಶ್ಯಾವಳಿಗಳು ಶನಿವಾರ ಹೊರಬಿದ್ದಿದೆ. ಶುಕ್ರವಾರ ಬೆಳಗಿನ ಜಾವ ಬಸ್‌ನಲ್ಲಿದ್ದ ಭದ್ರತಾ ಸಿಬ್ಬಂದಿ ವಾಹನದ ಮೇಲೆ ಭಯೋತ್ಪಾದಕರು ಗುಂಡುಗಳನ್ನು ಹಾರಿಸಿದರು ಮತ್ತು ಗ್ರೆನೇಡ್‌ಗಳನ್ನು ಎಸೆದರು. ಈ ಘಟನೆಯಲ್ಲಿ … Continued

ಚಿಕ್ಕಮಗಳೂರು: ಹೆಜ್ಜೇನು ದಾಳಿಯಿಂದ ಕಾಫಿ ಮಂಡಳಿ ಮಾಜಿ ಅಧ್ಯಕ್ಷ ಭೋಜೇಗೌಡ ಸಾವು

ಚಿಕ್ಕಮಗಳೂರು: ತಾಲೂಕಿನ ಕೃಷ್ಣಗಿರಿ ಕಾಫಿ ತೋಟದಲ್ಲಿ ಜೇನುನೊಣಗಳು ದಾಳಿ ನಡೆಸಿದ ಪರಿಣಾಮ ಕಾಫಿ ಮಂಡಳಿ ಮಾಜಿ ಅಧ್ಯಕ್ಷ ಎಂ.ಎಸ್.ಭೋಜೇಗೌಡ ಅವರು ಅಸುನೀಗಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಕೃಷ್ಣಗಿರಿ ಎಸ್ಟೇಟ್​ ನಲ್ಲಿ ಈ ದುರ್ಘಟನೆ ನಡೆದಿದೆ. ಕಾಫಿ ತೋಟಕ್ಕೆ ಹೋಗಿದ್ದ ಸಂದರ್ಭದಲ್ಲಿ ಈ ಆಕಸ್ಮಿಕ ನಡೆದಿದೆ. ಒಮ್ಮೆಲ್ಲೇ ಸಾವಿರಾರು ಹೆಜ್ಜೇನುಗಳು (Honey bee attack) ಭೋಜೇಗೌಡರ ಮೇಲೆ ಹಿಂಡು … Continued

ಎಫ್‌ಐಆರ್ ದಾಖಲಾಗದಿದ್ದರೂ, ಶಿಕ್ಷೆಗೆ ಗುರಿಯಾಗದಿದ್ದರೂ ರೌಡಿ ಶೀಟ್ ತೆರೆಯಬಹುದು ಎಂದ ಹೈಕೋರ್ಟ್‌

ಬೆಂಗಳೂರು: ಅಪರಾಧ ಚುಟವಟಿಕೆಯಲ್ಲಿ ಸಕ್ರಿಯಾಗಿರುವ ರೌಡಿಗಳ ವಿರುದ್ಧ ರೌಡಿ ಶೀಟ್‌ ತೆರೆಯುವ ವಿಚಾರದಲ್ಲಿ ಅನುಸರಿಸಬೇಕಾದ ನಿಯಮಗಳ ಕುರಿತು ಕರ್ನಾಟಕ ಹೈಕೋರ್ಟ್ ಶುಕ್ರವಾರ ಮಾರ್ಗಸೂಚಿಗಳನ್ನು ರಚಿಸಿದೆ. ಅಪರಾಧ ಪ್ರಕರಣದಲ್ಲಿ ಶಿಕ್ಷೆಯಾಗದಿದ್ದರೂ ಮತ್ತು ಯಾವುದೇ ಅಪರಾಧ ಕೃತ್ಯದಲ್ಲಿ ಆರೋಪಿಯಾಗದಿದ್ದರೂ ಪೊಲೀಸರು ರೌಡಿ ಶೀಟ್‌ ತೆಗೆದಿದ್ದಾರೆ. ಇದು ಮೂಲಭೂತ ಹಕ್ಕಿನ ಚ್ಯುತಿಯಾಗಿದೆ. ಆದ್ದರಿಂದ ತಮ್ಮ ವಿರುದ್ಧದ ರೌಡಿ ಶೀಟ್ ರದ್ದುಪಡಿಸಬೇಕು … Continued

ಆಸ್ಕರ್ ಕಪಾಳಮೋಕ್ಷ ಘಟನೆ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಹಾಲಿವುಡ್‌ ನಟ ವಿಲ್‌ ಸ್ಮಿತ್‌ : ಅವರು ಅಧ್ಯಾತ್ಮ ಸಮಾಧಾನಕ್ಕೆ ಭಾರತಕ್ಕೆ ಬಂದರೆ..?

ವಿಲ್ ಸ್ಮಿತ್‌ಗೆ ಇತ್ತೀಚೆಗೆ ಎಲ್ಲವೂ ಸರಿಯಾಗಿಲ್ಲ. 2022ರ ಆಸ್ಕರ್‌ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ವಿಲ್ ಸ್ಮಿತ್‌ ಅವರು ತಮ್ಮ ಪತ್ನಿ ಜಡಾ ಪಿಂಕೆಟ್ ಸ್ಮಿತ್ ಬಗ್ಗೆ ತಮಾಷೆ ಮಾಡಿದ ನಂತರ ಕ್ರಿಸ್ ರಾಕ್ ಅವರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಸುದ್ದಿಯಲ್ಲಿದ್ದರು. ಆ ಘಟನೆಯ ನಂತರ ಇದೇ ಪ್ರಥಮ ಬಾರಿಗೆ ಇಂದು, ಶನಿವಾರ (ಏಪ್ರಿಲ್ 23) ಹಾಲಿವುಡ್ ನಟ … Continued

ರಸ್ತೆ ಮಧ್ಯದ ಮ್ಯಾನ್‌ಹೋಲ್‌ಗೆ ಬಿದ್ದ ಫೋನಿನಲ್ಲಿ ಮಾತನಾಡುತ್ತ ಹೋಗುತ್ತಿದ್ದ ಮಹಿಳೆ…ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬಿಹಾರ: ಮಹಿಳೆಯೊಬ್ಬರು ತಮ್ಮ ಮೊಬೈಲ್‌ನಲ್ಲಿ ಮಾತನಾಡುತ್ತ ಬರುತ್ತಿದ್ದಾಗ ಆಕಸ್ಮಿಕವಾಗಿ ಮ್ಯಾನ್‌ಹೋಲ್‌ಗೆ ಬಿದ್ದಿರುವ ಘಟನೆ ನಡೆದಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಿಹಾರದ ರಾಜಧಾನಿ ಪಟನಾದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಉತ್ಕರ್ಷ್ ಸಿಂಗ್ ಎಂಬುವವರು ಟ್ವಿಟರ್‌ನಲ್ಲಿ ಇದರ ವೀಡಿಯೊ ಹಂಚಿಕೊಂಡಿದ್ದಾರೆ. ಮಹಿಳೆಯು ವಾಹನವೊಂದರ ಹಿಂದೆ ಫೋನ್‌ನಲ್ಲಿ ಮಾತನಾಡುತ್ತ ನಡೆದುಕೊಂಡು ಹೋಗುತ್ತಿರುವುದು ವೀಡಿಯೊದಲ್ಲಿ ಕಂಡುಬಂದಿದೆ. ಫೋನಿನಲ್ಲಿ … Continued

ಉಡುಪಿ: ಶನಿವಾರವೂ ಮೂವರು ಹಿಜಾಬ್ ಹೋರಾಟಗಾರ್ತಿಯರು ಗೈರು

ಉಡುಪಿ: ಹಿಜಾಬ್‌ಗಾಗಿ ಹೋರಾಟ ನಡೆಸುತ್ತಿರುವ ಇಲ್ಲಿನ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಮೂವರು ಹಿಜಾಬ್‌ ಹೋರಾಟಗಾರ್ತಿಯರು ಶನಿವಾರ ದ್ವಿತೀಯ ಪಿಯುಸಿ ಪರೀಕ್ಷೆಗೆ ಗೈರಾಗಿದ್ದಾರೆ. ಇಂದು ವಿಜ್ಞಾನ ವಿಭಾಗದ ಪರೀಕ್ಷೆ ಆರಂಭವಾಗಿದ್ದು, ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರು ಶನಿವಾರ ವಿದ್ಯೋದಯ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಗಣಿತ ವಿಷಯದಲ್ಲಿ ಪರೀಕ್ಷೆ ಬರೆಯಬೇಕಿತ್ತು. ಆದರೆ ಅಲ್ಮಾಸ್, ಹಜ್ರಾ, ಆಯೇಷಾ … Continued

ಪಿಎಸ್​ಐ ನೇಮಕಾತಿ ಪರೀಕ್ಷೆ ಹಗರಣ: ಮಹಾರಾಷ್ಟ್ರದಲ್ಲಿ ಪೊಲೀಸರ ಬಲೆಗೆ ಬಿದ್ದ ಪ್ರಮುಖ ಆರೋಪಿ

ಕಲಬುರಗಿ: ಪಿಎಸ್‌ಐ ನೇಮಕದ ಪರೀಕ್ಷೆ ಹಗರಣದಲ್ಲಿ ಬ್ಲೂಟೂತ್ ಬಳಸಿ ಅಕ್ರಮ ನಡೆಸಿದ ಆರೋಪಿ ಹಾಗೂ ಪ್ರಕರಣದ ಕಿಂಗ್ ‌ಪಿನ್ ಎನ್ನಲಾಗುತ್ತಿರುವ ಅಫಜಲಪುರದ ಅರ್.ಡಿ.ಪಾಟೀಲ್ ಎಂಬಾತನನ್ನು ಸಿಐಡಿ ಪೊಲೀಸರು ಮಹಾರಾಷ್ಟ್ರದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ನಿನ್ನೆ ಶುಕ್ರವಾರವಷ್ಟೇ ಅವರ ಸಹೋದರ ಹಾಗೂ ಅಫಜಲಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಾಂತೇಶ ಪಾಟೀಲ್ ಎಂಬುವರನ್ನು ಬಂಧಿಸಲಾಗಿತ್ತು. ಇಂದು ಶನಿವಾರ … Continued

ಮಂಗಳೂರು: ಮಸೀದಿಯ ಹಿಂದಿನ ರಚನೆ ಕೆಡಹದಂತೆ ನ್ಯಾಯಾಲಯದಿಂದ ತಾತ್ಕಾಲಿಕ ತಡೆಯಾಜ್ಞೆ

ಮಲಾಲಿಯಲ್ಲಿ ಮಸೀದಿಯ ಹಿಂದಿನ ಕಟ್ಟಡವನ್ನು ಕೆಡವಲು ನ್ಯಾಯಾಲಯದ ತಡೆಯಾಜ್ಞೆ ನೀಡಿದ್ದು, ಪ್ರವೇಶವನ್ನು ನಿರಾಕರಿಸಿತು ಮಂಗಳೂರು: ಮಂಗಳೂರು ಹೊರವಲಯದ ಮಳಲಿಯಲ್ಲಿ ಮಸೀದಿಯೊಂದರ ನವೀಕರಣ ಕಾಮಗಾರಿಯನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ ಸ್ಥಗಿತಗೊಳಿಸಿದ ಒಂದು ದಿನದ ನಂತರ, ಮಸೀದಿಯ ಹಿಂದೆ ಕಂಡುಬಂದ ಕಟ್ಟಡದೊಳಗೆ ಯಾವುದೇ ಕೆಲಸ ಮಾಡದಂತೆ ಹಾಗೂ ಯಾರೂ ಪ್ರವೇಶ ಮಾಡದಂತೆ ನ್ಯಾಯಾಲಯದ ತಡೆಯಾಜ್ಞೆ ನೀಡಿದೆ. ಗಂಜಿಮಠದ ನಿವಾಸಿ … Continued

ಜಹಾಂಗೀರ್‌ಪುರಿ ಹಿಂಸಾಚಾರ: ಆರೋಪಿ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿದ ಇಡಿ

ನವದೆಹಲಿ: ಇತ್ತೀಚಿನ ಜಹಾಂಗೀರ್‌ಪುರಿ ಹಿಂಸಾಚಾರ ಪ್ರಕರಣದಲ್ಲಿ ಪ್ರಮುಖ ಆರೋಪಿ ಮೊಹಮ್ಮದ್ ಅನ್ಸಾರ್ ಸೇರಿದಂತೆ ವಿವಿಧ ಶಂಕಿತರ ವಿರುದ್ಧ ಜಾರಿ ನಿರ್ದೇಶನಾಲಯವು ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಜಾರಿ ನಿರ್ದೇಶನಾಲಯದ ಎನ್‌ಫೋರ್ಸ್‌ಮೆಂಟ್ ಕೇಸ್ ಮಾಹಿತಿ ವರದಿ (ECIR), ED ಪೊಲೀಸ್ ಎಫ್‌ಐಆರ್‌ಗೆ ಸಮಾನವಾಗಿದೆ, ಇದನ್ನು ಫೆಡರಲ್ ಏಜೆನ್ಸಿಯು ಹಣ ವರ್ಗಾವಣೆ ತಡೆ … Continued