ಭಾರತದಲ್ಲಿ 5 ರಿಂದ 11 ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ ನೀಡಲು ತಜ್ಞರ ಸಮಿತಿ ಶಿಫಾರಸು

ನವದೆಹಲಿ: ಭಾರತದ ಕೆಲ ರಾಜ್ಯಗಳಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ವರದಿಗಳ ಮಧ್ಯೆ ಮಕ್ಕಳಿಗೆ ಹೆಚ್ಚು ಅಪಾಯ ಆಗುವ ಸಾಧ್ಯತೆಯನ್ನು ತಪ್ಪಿಸುವ ನಿಟ್ಟಿನಲ್ಲಿ ಭಾರತೀಯ ಔಷಧಿ ನಿಯಂತ್ರಣ ಪ್ರಾಧಿಕಾರ(DCGI)ದ ವಿಷಯ ತಜ್ಞರ ಸಮಿತಿಯು 5 ರಿಂದ 11 ವರ್ಷದ ಮಕ್ಕಳಿಗೆ ಲಸಿಕೆ ನೀಡುವಂತೆ ಶಿಫಾರಸ್ಸು ಮಾಡಿದೆ. ದೇಶದಲ್ಲಿ 5 ರಿಂದ 11 ವರ್ಷದ ಮಕ್ಕಳಿಗೆ ಬಯೋಲಾಜಿಕಲ್-ಇ … Continued

ಅಫ್ಘಾನಿಸ್ತಾನ: ಅವಳಿ ಸ್ಫೋಟದಲ್ಲಿ ಕನಿಷ್ಠ 22 ಮಂದಿ ಸಾವು, 50 ಮಂದಿಗೆ ಗಾಯ

ಕಾಬೂಲ್:‌ ಏಪ್ರಿಲ್ 21, ಗುರುವಾರದಂದು ಅಫ್ಘಾನಿಸ್ತಾನದ ಮಜರ್-ಎ-ಷರೀಫ್ ನಗರದ ಶಿಯಾ ಮಸೀದಿಯಲ್ಲಿ ನಡೆದ ಸ್ಫೋಟದಲ್ಲಿ ಕನಿಷ್ಠ 11 ಜನರು ಸತ್ತಿದ್ದಾರೆ ಮತ್ತು ಸುಮಾರು 50 ಜನರು ಗಾಯಗೊಂಡಿದ್ದಾರೆ ಎಂದು ಆರೋಗ್ಯ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ಎಪಿ ವರದಿ ಮಾಡಿದೆ. ಮುಸ್ಲಿಮರು ಪವಿತ್ರ ರಂಜಾನ್ ಮಾಸದಲ್ಲಿ ಉತ್ತರದ ನಗರವಾದ ಮಜಾರ್-ಎ-ಶರೀಫ್‌ನಲ್ಲಿರುವ ಸಾಯಿ ಡೋಕನ್ ಮಸೀದಿಯಲ್ಲಿ ಪ್ರಾರ್ಥನೆ ಮಾಡುತ್ತಿದ್ದಾಗ ಸ್ಫೋಟ … Continued

ಮಂಗಳೂರು: ಮಸೀದಿ ನವೀಕರಣದ ವೇಳೆ ಪ್ರಾಚೀನ ದೇವಸ್ಥಾನದ ಕುರುಹು ಪತ್ತೆ..!?

ಮಂಗಳೂರು: ನಗರದ ಹೊರವಲಯದ ಗುರುಪುರ ಹೋಬಳಿಯ ತೆಂಕ ಉಳಿಪಾಡಿ ಗ್ರಾಮದ ಮಸೀದಿ ಕಟ್ಟಡದಲ್ಲಿ ಪ್ರಾಚೀನ ಕಾಲದ ದೇವಾಲಯದ ಮಾದರಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ತಹಶೀಲ್ದಾರ ಪುರಂದರ ಅವರು ಭೇಟಿ ನೀಡಿದ್ದಾರೆ. ಮಂಗಳೂರು ತಾಲೂಕಿನ ಗುರುಪುರ ಹೋಬಳಿಯ ತೆಂಕ ಉಳಿಪಾಡಿ ಗ್ರಾಮದ ಗಂಜಿಮಠ ಪಂಚಾಯಿತಿಯಲ್ಲಿರುವ ಸರ್ವೇ ನಂ 1/10 ನಲ್ಲಿ ಅಸ್ಸಾಯಿದ್ ಅಬ್ದುಲ್ಲಾಹಿಲ್ ಮದನಿ ಜುಮಾ … Continued

ಮಾರಣಾಂತಿಕ ಭೂ ಕುಸಿತದಲ್ಲಿ ಮಣ್ಣಿನಡಿ ಸಿಲುಕಿದ್ದರೂ ಪವಾಡಸದೃಶರೀತಿಯಲ್ಲಿ ಬದುಕುಳಿದ ಫ್ರಿಡ್ಜ್‌ನಲ್ಲಿ ಅಡಗಿಕೊಂಡಿದ್ದ ಬಾಲಕ..!

11 ವರ್ಷದ ಬಾಲಕನೊಬ್ಬ ರೆಫ್ರಿಜರೇಟರ್‌ನಲ್ಲಿ ಕುಳಿತು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಫಿಲಿಪ್ಪೀನ್ಸ್‌ನಲ್ಲಿ ನಡೆದಿದೆ. ಸಿಜೆ ಜಾಸ್ಮೆ ಎಂದು ಗುರುತಿಸಲ್ಪಟ್ಟ ಬಾಲಕನನ್ನು ಫಿಲಿಪೈನ್ ಕೋಸ್ಟ್ ಗಾರ್ಡ್ ಮತ್ತು ರಕ್ಷಣಾ ತಂಡವು ಜೀವಂತವಾಗಿ ಪತ್ತೆಹಚ್ಚಿದೆ. ಉಷ್ಣವಲಯದ ಚಂಡಮಾರುತ ಮೆಗಿಯಿಂದ ಉಂಟಾದ ಭೂ ಕುಸಿತದಲ್ಲಿ ಸಿಲುಕಿದ್ದ ಜಾಸ್ಮೆ ಪವಾಡ ಸದೃಶರೀತಿಯಲ್ಲಿ ಬದುಕುಳಿದ್ದಾರೆ. ಫಿಲಿಪೈನ್ಸ್‌ನ ಬೇಬೇ ಸಿಟಿಯಲ್ಲಿರುವ ಜಾಸ್ಮೆ ಅವರ ಮನೆ … Continued

ಧಾರ್ಮಿಕ ಉದ್ದೇಶಕ್ಕಾಗಿ ಮಾತ್ರ ಹಿಂದೂ ಅವಿಭಜಿತ ಕುಟುಂಬದ ಪಿತ್ರಾರ್ಜಿತ ಆಸ್ತಿ ಉಡುಗೊರೆಯಾಗಿ ನೀಡಬಹುದು: ಸುಪ್ರೀಂ ಕೋರ್ಟ್

ನವದೆಹಲಿ: ಪ್ರೀತಿ ವಾತ್ಸಲ್ಯದಿಂದ ನೀಡುವ ಅವಿಭಕ್ತ ಕುಟುಂಬದ ಪಿತ್ರಾರ್ಜಿತ ಆಸ್ತಿ ‘ಭಕ್ತಿಯ ಉದ್ದೇಶʼ ಪದದ ವ್ಯಾಪ್ತಿಗೆ ಬರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿಗಳಾದ ಎಸ್. ಅಬ್ದುಲ್ ನಜೀರ್ ಮತ್ತು ಕೃಷ್ಣ ಮುರಾರಿ ಅವರಿದ್ದ ಪೀಠವು ಹಿಂದೂ ತಂದೆ ಅಥವಾ ಹಿಂದೂ ಅವಿಭಜಿತ ಕುಟುಂಬದ ಇತರ ನಿರ್ವಹಣಾ ಸದಸ್ಯರಿಗೆ ಪೂರ್ವಜರ ಆಸ್ತಿಯನ್ನು ಕೇವಲ ‘ಭಕ್ತಿಯ ಉದ್ದೇಶಕ್ಕಾಗಿ’ … Continued

ಹಂಪಿಗೆ  ಆರ್‌ಎಸ್‌ಎಸ್ ರಾಷ್ಟ್ರೀಯ ಸಂಪರ್ಕ ಪ್ರಮುಖರ ಭೇಟಿ

ಹೊಸಪೇಟೆ: ವಿಶ್ವವಿಖ್ಯಾತ ಹಂಪಿಗೆ ರಾಷ್ಟ್ರೀಯ ಸ್ವಯಂ ಸೇವಕ (ಆರ್‌ಎಸ್‌ಎಸ್) ರಾಷ್ಟ್ರೀಯ ಸಂಪರ್ಕ ಪ್ರಮುಖರಾದ ರಾಮಲಾಲ್ ಜೀ ಗುರುವಾರ ಭೇಟಿ ನೀಡಿದರು. ಹಂಪಿ ಶ್ರೀವಿರೂಪಾಕ್ಷ ಸ್ವಾಮಿ ದೇಗುಲಕ್ಕೆ ತೆರಳಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ನಂತರ ಐತಿಹಾಸಿಕ ಪ್ರಸಿದ್ಧಿ ಪಡೆದ ವಿವಿಧ ಸ್ಮಾರಕಗಳನ್ನು ವೀಕ್ಷಿಸಿದರು. ರಾಮ್ ಲಾಲ್ ಜೀ ಅವರು ಬಿಜೆಪಿ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿಯಾಗಿ … Continued

ಕರ್ನಾಟಕದ್ದು 40% ಕಮಿಷನ್ ಸರ್ಕಾರ, ದೆಹಲಿಯದ್ದು 0% ಎಎಪಿ ಸರ್ಕಾರ, ನಿಮಗೆ ಕರ್ನಾಟಕದಲ್ಲಿ 0% ಸರ್ಕಾರ ಬೇಡವೇ ?: ಜನತೆಗೆ ಕೇಜ್ರಿವಾಲ್‌ ಪ್ರಶ್ನೆ, ರಾಜ್ಯದಲ್ಲಿ ಚುನಾವಣಾ ತಯಾರಿಗೆ ಎಎಪಿ ಮುನ್ನುಡಿ

ಬೆಂಗಳೂರು: ಪ್ರತಿಪಕ್ಷಗಳು ಹಾಗೂ ರಾಜ್ಯದ ಗುತ್ತಿಗೆದಾರ ಸಂಘದಿಂದ ‘ಶೇ 40 ಪರ್ಸೆಂಟ್ ಕಮಿಷನ್ ಸರ್ಕಾರ’ ಎಂಬ ಹಣೆಪಟ್ಟಿ ಕಟ್ಟಿಕೊಂಡಿರುವ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಆಡಳಿತದ ವಿರುದ್ಧ ಹೊರಿಸಲಾಗಿರುವ ಭ್ರಷ್ಟಾಚಾರದ ಆರೋಪದ ಮೇಲೆ ಎಎಪಿ ಕರ್ನಾಟಕದಲ್ಲಿ ಚುನಾವಣಾ ಕಣದ ಹುಡುಕಾಟದಲ್ಲಿದೆ. ಕರ್ನಾಟಕವು 2023 ರಲ್ಲಿ ಚುನಾವಣೆಗೆ ಹೋಗಲು ಸಿದ್ಧವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಗುರುವಾರ ನಡೆದ … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ: ನವಾಬ್‌ ಮಲಿಕ್ ವಿರುದ್ಧ 5,000 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಇಡಿ

ಮುಂಬೈ: ಪರಾರಿಯಾಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಬಂಧನದ ಸುಮಾರು ಎರಡು ತಿಂಗಳ ನಂತರ ಜಾರಿ ನಿರ್ದೇಶನಾಲಯ (ಇಡಿ) ನವಾಬ್‌ ಮಲಿಕ್‌ ವಿರುದ್ಧ ಗುರುವಾರ ಇಲ್ಲಿನ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ. ಈ ಪ್ರಕರಣದಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಹಿರಿಯ ನಾಯಕ … Continued

ಬೆಳಗಾವಿ: ವಾಯವ್ಯ ಶಿಕ್ಷಕರ ಮತಕ್ಷೇತ್ರದಿಂದ ಮಾಜಿ ಪ್ರಕಾಶ ಹುಕ್ಕೇರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ

ಬೆಳಗಾವಿ : ಮಾಜಿ ಸಚಿವ, ಚಿಕ್ಕೋಡಿ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಅವರಿಗೆ ಕಾಂಗ್ರೆಸ್ ಪಕ್ಷ ವಾಯವ್ಯ ಶಿಕ್ಷಕರ ಮತಕ್ಷೇತ್ರದ ಟಿಕೆಟ್ ಘೋಷಣೆ ಮಾಡಿದೆ. ಪ್ರಕಾಶ್ ಹುಕ್ಕೇರಿ ಅವರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಘೋಷಣೆ ಮಾಡಿದೆ. ಈ ಕ್ಷೇತ್ರದಲ್ಲಿ ಎನ್.ಬಿ. ಬನ್ನೂರ ಅವರು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಅವರನ್ನು ಹಿಂದಿಕ್ಕಿರುವ ಪ್ರಕಾಶ ಹುಕ್ಕೇರಿ … Continued

ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ; ಶಾಸಕರ ಗನ್ ಮ್ಯಾನ್ ಸೇರಿ ಇಬ್ಬರ ಬಂಧನ

ಕಲಬುರಗಿ: ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮದ ಜಾಡು ಹಿಡಿದು ಸಿಐಡಿ ತನಿಖೆ ಮುಂದುವರಿದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಎಂ.ವೈ.ಪಾಟೀಲ್ ಗನ್‌ಮ್ಯಾನ್ ಸೇರಿ ಇಬ್ಬರು ಪೊಲೀಸ್ ಕಾನ್​ಸ್ಟೇಬಲ್​ಗಳನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ‌. ಕಲಬುರಗಿ ಸಿಟಿ ಆರ್ಮ್ಸ್ ರಿಸರ್ವ್ (ಸಿಎಆರ್) ಪೊಲೀಸ್ ಪೇದೆ ರುದ್ರಗೌಡ ಮತ್ತು ಅಫಜಲಪುರ ಕಾಂಗ್ರೆಸ್ ಶಾಸಕ ಎಂ.ವೈ.ಪಾಟೀಲ್ ಗನ್‌ ಮ್ಯಾನ್ ಅಯ್ಯಣ್ಣ ದೇಸಾಯಿ … Continued