ತಪ್ಪುಗಳು ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಯ್ತು ಎಂದು ಒಪ್ಪಿಕೊಂಡ ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆ

ಕೊಲಂಬೊ: ದಶಕಗಳಲ್ಲೇ ದೇಶದ ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟಿಗೆ ಕಾರಣವಾದ ತಪ್ಪುಗಳನ್ನು ಶ್ರೀಲಂಕಾ ಅಧ್ಯಕ್ಷರು ಸೋಮವಾರ ಒಪ್ಪಿಕೊಂಡಿದ್ದಾರೆ ಮತ್ತು ಅವುಗಳನ್ನು ಸರಿಪಡಿಸುವ ವಾಗ್ದಾನ ಮಾಡಿದ್ದಾರೆ. ದೇಶದ ಭೀಕರ ಆರ್ಥಿಕ ಸ್ಥಿತಿಯಿಂದ ಉಂಟಾಗಿರುವ ರಾಜಕೀಯ ಬಿಕ್ಕಟ್ಟನ್ನು ಪರಿಹರಿಸಲು ಅವರು ಮತ್ತು ಅವರ ಪ್ರಬಲ ಕುಟುಂಬ ಪ್ರಯತ್ನಿಸುತ್ತಿರುವಾಗ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರು ಸೋಮವಾರ ನೇಮಿಸಿದ 17 ಹೊಸ … Continued

ರಾಗಿ ಬೆಳೆಗಾರರಿಗೆ ಸಿಹಿಸುದ್ದಿ: ಹೆಚ್ಚುವರಿಯಾಗಿ 1.14 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಗೆ ರಾಜ್ಯ ಸರ್ಕಾರದ ನಿರ್ಧಾರ

ಬೆಂಗಳೂರು : ರಾಗಿ ಬೆಳೆಗಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಹೆಚ್ಚುವರಿಯಾಗಿ ರಾಗಿ ಖರೀದಿಗೆ ಮುಂದಾಗಿದೆ. ಬೆಂಬಲ ಬೆಲೆಯಡಿ 1.14 ಲಕ್ಷ ಮೆ. ಟನ್‌ ರಾಗಿಯನ್ನು ಹೆಚ್ಚುವರಿಯಾಗಿ ಖರೀದಿಸಲು ಸಂಪುಟ ಉಪ ಸಮಿತಿ ತೀರ್ಮಾನಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಂಪುಟ ಉಪ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕನಿಷ್ಠ … Continued

ಹುಬ್ಬಳ್ಳಿ ಗಲಭೆ ಹಿಂಸಾಚಾರ : ಒಟ್ಟು 104 ಆರೋಪಿಗಳ ಬಂಧನ

ಹುಬ್ಬಳ್ಳಿ:ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣ ಸಂಬಂಧಿಸಿದಂತೆ ಈವರೆಗೆ ಒಟ್ಟು 12 ಪ್ರಕರಣಗಳು ದಾಖಲಾಗಿದ್ದು, ಮತ್ತೆ 15 ಜನರನ್ನು ಪೊಲೀಸರು ಬಂಧಿಸಿದ್ದು, ಒಟ್ಟು 104 ಆರೋಪಿಗಳನ್ನು ಬಂಧಿಸಲಾಗಿದೆ. ಶನಿವಾರ ಹಳೇ ಹುಬ್ಬಳ್ಳಿಯಲ್ಲಿ ಪ್ರಚೋದನಕಾರಿ ವಾಟ್ಸಪ್ ಸ್ಟೇಟಸ್ ನಿಂದ ಗಲಾಟೆ ನಡೆದಿದ್ದು, ಗಲಭೆ ವೇಳೆ ಕೊಲೆ ಯತ್ನ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿರುವುದು, ಪೊಲಿಸ್‌ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ … Continued

ಗೋ ಹತ್ಯೆ ನಿಷೇಧ ಕಾಯಿದೆ: ಸೆಕ್ಷನ್ 5 ನಿಯಮ ಜಾರಿಗೆ ಸರ್ಕಾರಕ್ಕೆ ಹೈಕೋರ್ಟ್‌ ಅಸ್ತು

ಬೆಂಗಳೂರು: ಕರ್ನಾಟಕ ಗೋವಧೆ ಪ್ರತಿಬಂಧಕ ಹಾಗೂ ಜಾನುವಾರು ಸಂರಕ್ಷಣೆ ನಿಯಮಗಳನ್ನು (ಜಾನುವಾರು ಸಾಗಣೆ 2021ರ ನಿಯಮಗಳು) ರೂಪಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಗೋವಧೆ ಪ್ರತಿಬಂಧಕ ಹಾಗೂ ಜಾನುವಾರು ಸಂರಕ್ಷಣಾ ಕಾಯಿದೆ- 2020ರ ಸೆಕ್ಷನ್ 5 ಮತ್ತು ಅದರ ಅಡಿ ರೂಪಿಸಿರುವ ನಿಯಮಗಳ ಜಾರಿಗೆ ಸೋಮವಾರ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ್ದು, ಅದು ಅಂತಿಮ ನಿರ್ಧಾರಕ್ಕೆ ಒಳಪಟ್ಟಿರುತ್ತದೆ … Continued

17 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರವು 17 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಆಯಕಟ್ಟಿನ ಸ್ಥಾನದಲ್ಲಿದ್ದ ಅಧಿಕಾರಿಗಳ ಸ್ಥಾನಪಲ್ಲಟವಾಗಿದೆ. ವರ್ಗಾವಣೆ ಅಧಿಕಾರಿಗಳ ಪಟ್ಟಿ ಇಂತಿದೆ. * ಜಿ. ಕಲ್ಪನಾ- ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಕಾರ್ಮಿಕ ಇಲಾಖೆ * ಶ್ರೀವತ್ಸ ಕೃಷ್ಣ- ಪ್ರಧಾನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ * ಆಮ್ಲಾನ್ ಆದಿತ್ಯ ಬಿಸ್ವಾಸ್- ವಿಶೇಷಾಧಿಕಾರಿ, … Continued

ಪರ್ಸಂಟೇಜ್‌ ಬಗ್ಗೆ ದಿಂಗಾಲೇಶ್ವರ ಸ್ವಾಮೀಜಿ ದಾಖಲೆ ನೀಡಿದರೆ ಸಂಪೂರ್ಣ ತನಿಖೆ: ಸಿಎಂ ಬೊಮ್ಮಾಯಿ

ಬೆಂಗಳೂರು: ದಿಂಗಾಲೇಶ್ವರ ಸ್ವಾಮೀಜಿಗಳು ಎಲ್ಲಿ, ಯಾರಿಗೆ ಎಷ್ಟು ಪರ್ಸೆಂಟ್ ಕಮಿಷನ್ ಕೊಟ್ಟಿದ್ದಾರೆ ಎಂದು ದಾಖಲೆ ನೀಡಲಿ, ಆ ಬಗ್ಗೆ ಸಂಪೂರ್ಣ ತನಿಖೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ದಿಂಗಾಲೇಶ್ವರ ಸ್ವಾಮೀಜಿಯ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಈ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ದಿಂಗಾಲೇಶ್ವರ ಸ್ವಾಮೀಜಿಗಳು ಅತ್ಯಂತ ಜ್ಞಾನಿ … Continued

ಅಸಡ್ಡೆ ಚಾಲಕ… ಗುಡ್ಡಗಾಡು ಪ್ರದೇಶದಲ್ಲಿ ಬಾಲಕಿಗೆ ಜನರಿಂದ ತುಂಬಿದ್ದ ಬಸ್ ಚಲಾಯಿಸಲು ಅವಕಾಶ ನೀಡಿದ ಡ್ರೈವರ್‌..! ಚಾಲಕನ ಪರವಾನಿಗೆ ಅಮಾನತು.. ವೀಕ್ಷಿಸಿ

ಉಧಂಪುರ: ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಬಸ್ ಚಲಾಯಿಸುತ್ತಿರುವುದನ್ನು ತೋರಿಸುವ ವೀಡಿಯೊ ಆನ್‌ಲೈನ್‌ನಲ್ಲಿ ವೈರಲ್ ಆಗುತ್ತಿದೆ. ಉಧಂಪುರ-ಲ್ಯಾಂಡರ್ ಮಾರ್ಗದಲ್ಲಿ ಚಲಿಸುತ್ತಿದ್ದ ಬಸ್ ಅನ್ನು ಪಂಚೈರಿಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ 11 ನೇ ತರಗತಿ ವಿದ್ಯಾರ್ಥಿನಿ ಓಡಿಸುತ್ತಿದ್ದಳು ಎಂಬುದು ಗಮನಾರ್ಹ. ಬಾಲಕಿ ಸ್ಟೀರಿಂಗ್ ಹಿಡಿದಿರುವಾಗ ಆಕೆಯ ಪಕ್ಕದಲ್ಲಿ ಕುಳಿತಿದ್ದ ಬಸ್ ಚಾಲಕ ಆಕೆಗೆ … Continued

ಕೆವೈಸಿ, ಪಿಪಿಐ ಮಾನದಂಡಗಳನ್ನು ಉಲ್ಲಂಘಿಸಿದ್ದಕ್ಕೆ ಮಣಪ್ಪುರಂ ಫೈನಾನ್ಸ್‌ಗೆ ದಂಡ ವಿಧಿಸಿದ ಆರ್‌ಬಿಐ

ಮುಂಬೈ: ಕೆವೈಸಿ (KYC) ಮಾರ್ಗಸೂಚಿಗಳನ್ನು ಮತ್ತು ಪ್ರಿಪೇಯ್ಡ್ ಪಾವತಿ ಸಾಧನ (prepaid payment instruments) ಗಳಿಗೆ ಸಂಬಂಧಿಸಿದ ಮಾನದಂಡಗಳನ್ನು ಉಲ್ಲಂಘಿಸಿದ್ದಕ್ಕಾಗಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ಸೋಮವಾರ ಬ್ಯಾಂಕಿಂಗ್ ಅಲ್ಲದ ಹಣಕಾಸು ಕಂಪನಿ ಮಣಪ್ಪುರಂ ಫೈನಾನ್ಸ್‌ಗೆ 17 ಲಕ್ಷ ರೂ.ಗಳಿಗಿಂತ ಹೆಚ್ಚಿನ ದಂಡವನ್ನು ವಿಧಿಸಿದೆ ಎಂದು ಬಿಸಿನೆಸ್‌ ಟುಡೆ.ಇನ್‌ ವರದಿ ಮಾಡಿದೆ. ಪಾವತಿ ಮತ್ತು ಸೆಟ್ಲ್‌ಮೆಂಟ್ … Continued

ಭೂ ಸೇನಾ ಮುಖ್ಯಸ್ಥರಾಗಿ ನೇಮಕಗೊಂಡ ಮೊದಲ ಇಂಜಿನಿಯರ್ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತೀಯ ಭೂಸೇನೆಯ ನೂತನ ಮುಖ್ಯಸ್ಥರಾಗಿ ಲೆ.ಜ. ಮನೋಜ್ ಪಾಂಡೆ ಅವರನ್ನು ನೇಮಕ ಮಾಡಲಾಗಿದೆ. ಹಾಲಿ ಭೂಸೇನೆ ಮುಖ್ಯಸ್ಥ ಜನರಲ್ ಎಂ.ಎಂ. ನರವಣೆ ಅವರ ಸೇವಾವಧಿ ಏ.30ರಂದು ಜನರಲ್ ನರವಣೆ ನಿವೃತ್ತಿಯಾಗಲಿದ್ದು, ಅದೇ ದಿನ ಲೆ.ಜ. ಮನೋಜ್ ಪಾಂಡೆ ಭೂಸೇನೆಉ ನೂತನ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ರಕ್ಷಣಾ ಇಲಾಖೆ ಮೂಲಗಳು ತಿಳಿಸಿವೆ. … Continued

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 50 ಸನ್ಯಾಸಿಗಳಿಂದ ಸ್ಪರ್ಧೆ, ಭಟ್ಕಳದಲ್ಲಿ ನನ್ನಿಂದಲೇ ಮೊದಲು ಪ್ರಯೋಗಕ್ಕೆ ಚಿಂತನೆ : ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

ಭಟ್ಕಳ (ಉತ್ತರ ಕನ್ನಡ) : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಂದ ಪ್ರೇರಣೆ ಪಡೆದಿರುವ ಸುಮಾರು 50ಕ್ಕೂ ಹೆಚ್ಚು ಸನ್ಯಾಸಿಗಳು ಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದೇವೆ ಎಂದು ಉಜಿರೆ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹೊಳೆ ಹಳೆಕೋಟೆ ಶ್ರೀಕ್ಷೇತ್ರ ಹನುಮಂತ ದೇವರ ಪುನರ್ … Continued