ಅಂತಹ ವಿಷಯಗಳಿಗೆ ಅದೇ ರೀತಿ ಉತ್ತರಿಸಬೇಕು: ದೆಹಲಿ ಹಿಂಸಾಚಾರದ ಬಗ್ಗೆ ರಾಜ್ ಠಾಕ್ರೆ

ನವದೆಹಲಿ: ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರು ನಗರದ ಜಹಾಂಗೀರ್‌ಪುರಿ ಪ್ರದೇಶದಲ್ಲಿ ಶನಿವಾರ ಸಂಜೆ ವರದಿಯಾದ ದೆಹಲಿ ಹಿಂಸಾಚಾರದ ಘಟನೆಗೆ ಭಾನುವಾರ ಪ್ರತಿಕ್ರಿಯಿಸಿದ್ದು, ಇಂತಹ ವಿಷಯಗಳಿಗೆ ‘ಅದೇ ರೀತಿಯಲ್ಲಿ ಉತ್ತರಿಸಬೇಕು’ ಎಂದು ಹೇಳಿದ್ದಾರೆ. ಇಂತಹ ವಿಷಯಗಳಿಗೆ ಅದೇ ರೀತಿಯಲ್ಲಿ ಉತ್ತರಿಸಬೇಕು ಎಂದು ನಾನು ಭಾವಿಸುತ್ತೇನೆ, ಇಲ್ಲದಿದ್ದರೆ, ಆ ಜನರಿಗೆ ಅರ್ಥವಾಗುವುದಿಲ್ಲ” ಎಂದು … Continued

ಹುಬ್ಬಳ್ಳಿ ಘಟನೆ ವ್ಯವಸ್ಥಿತ ಸಂಚು ಎಂಬುದು ಮೇಲ್ನೋಟಕ್ಕೆ ಕಾಣುವ ಅಂಶ; ಗೃಹ ಸಚಿವ ಆರಗ ಜ್ಞಾನೇಂದ್ರ

ಹೊಸಪೇಟೆ (ವಿಜಯನಗರ): ಹುಬ್ಬಳ್ಳಿಯಲ್ಲಿ ಶನಿವಾರ ತಡರಾತ್ರಿ ನಡೆದ ಗಲಾಟೆ ಒಂದು ವ್ಯವಸ್ಥಿತ ಸಂಚು ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಕಿಡಿಗೇಡಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮೊದಲೇ ಕಲ್ಲು ಸಂಗ್ರಹ ಮಾಡಲಾಗಿತ್ತು ಎಂಬ ಮಾಹಿತಿಯಿದೆ ಎಂದು ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶನಿವಾರ ರಾತ್ರಿ ಒಬ್ಬ ಯುವಕ ತನ್ನ ಮೊಬೈಲ್ … Continued

ವಿಶ್ವ ಆರೋಗ್ಯ ಸಂಸ್ಥೆಯ ಕೋವಿಡ್ ಸಾವಿನ ಅಂದಾಜಿನ ವರದಿ ಮೇಲೆ ಮೋದಿ ಸರ್ಕಾರದ ಮೇಲೆ ವಾಗ್ದಾಳಿ ಮಾಡಿದ ರಾಹುಲ್ ಗಾಂಧಿ

ನವದೆಹಲಿ: ಸರ್ಕಾರದ ನಿರ್ಲಕ್ಷ್ಯದಿಂದಾಗಿ 40 ಲಕ್ಷ ಭಾರತೀಯರು ಕೊರೊನಾ ವೈರಸ್ ಸಾಂಕ್ರಾಮಿಕ ಸಮಯದಲ್ಲಿ ಮೃತಪಟ್ಟಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಆರೋಪಿಸಿದ್ದಾರೆ ಮತ್ತು ಮೃತರ ಎಲ್ಲಾ ಕುಟುಂಬಗಳಿಗೆ ತಲಾ ನಾಲ್ಕು ಲಕ್ಷ ರೂಪಾಯಿ ಪರಿಹಾರವನ್ನು ನೀಡಬೇಕು ಎಂದು ಒತ್ತಾಯಿಸಿದ್ದಾರೆ. ನ್ಯೂಯಾರ್ಕ್ ಟೈಮ್ಸ್ ವರದಿಯ ಸ್ಕ್ರೀನ್‌ಶಾಟ್ ಅನ್ನು ಟ್ವಿಟರ್‌ನಲ್ಲಿ ರಾಹುಲ್‌ ಗಾಂಧಿ ಹಂಚಿಕೊಂಡಿದ್ದು, ಜಾಗತಿಕ … Continued

ಹುಬ್ಬಳ್ಳಿಯಲ್ಲಿ ನಡೆದ ಹಿಂಸಾಚಾರ, 40 ಮಂದಿ ಬಂಧನ, 12 ಪೊಲೀಸರಿಗೆ ಗಾಯ

ಹುಬ್ಬಳ್ಳಿ: ಪೊಲೀಸ್ ಠಾಣೆ ಹಾಗೂ ಸಾರ್ವಜನಿಕ ಕಟ್ಟಡಗಳ ಮೇಲೆ ಕಲ್ಲು ತೂರಾಟ ನಡೆಸಿ ಏಳು ವಾಹನಗಳಿಗೆ ಹಾನಿ ಮಾಡಿದ ಆರೋಪದ ಮೇಲೆ 40 ಜನರನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಕಲ್ಲು ತೂರಾಟದ ಘಟನೆಯಲ್ಲಿ ಒಟ್ಟು 12 ಪೊಲೀಸರು ಗಾಯಗೊಂಡಿದ್ದು, ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿಯ ಆನಂದನಗರ ನಿವಾಸಿ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿದ ನಂತರ … Continued

ಜೆಡಿಎಸ್‌ ನೂತನ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಅಧಿಕಾರ ಸ್ವೀಕಾರ

ಬೆಂಗಳೂರು: ಜೆಡಿಎಸ್‌ಗೆ ಅಧಿಕೃತವಾಗಿ ಪಾದಾರ್ಪಣೆ ಮಾಡಿದ ಸಿ.ಎಂ. ಇಬ್ರಾಹಿಂ ಭಾನುವಾರ ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸಿದ್ದಾರೆ. ಜೆಡಿಎಸ್ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಅವರು ಜೆಡಿಎಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು. ಬಳಿಕ ಹಾಲಿ ಅಧ್ಯಕ್ಷ ಎಚ್. ಕೆ. ಕುಮಾರಸ್ವಾಮಿಯವರು ಪಕ್ಷದ ಧ್ವಜ ನೀಡಿ ರಾಜ್ಯಾಧ್ಯಕ್ಷರ ಅಧಿಕಾರ ಹಸ್ತಾಂತರಿಸಿದರು. ಮಾಜಿ ಪ್ರಧಾನಿ, ಪಕ್ಷ ವರಿಷ್ಠ ಹೆಚ್.ಡಿ ದೇವೇಗೌಡ … Continued

ಅಪಘಾತದಲ್ಲಿ ಪತಿ ಸಾವು: 6 ತಿಂಗಳ ಪುತ್ರನ ಕೊಂದು ಪತ್ನಿಯೂ ಆತ್ಮಹತ್ಯೆ

ಮಂಗಳೂರು: ಮಂಗಳೂರು ಅಗ್ನಿಶಾಮಕ ಇಲಾಖೆಯಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿ ಕುಂಟಿಕಾನ ಬಳಿ ರಸ್ತೆ ದಾಟುತ್ತಿದ್ದಾ‌ಗ ಕಾರು ಢಿಕ್ಕಿ ಹೊಡೆದು ಸಾವಿಗೀಡಾಗಿದ್ದು, ಪತಿ ಸಾವಿನ ಸುದ್ದಿ ತಿಳಿದು ರಾಯಚೂರು ಜಿಲ್ಲೆಯ ಲಿಂಗಸೂಗೂರಿನಲ್ಲಿ ತನ್ನ ತಮ್ಮನ ಮನೆಯಲ್ಲಿದ್ದ ಪತ್ನಿ ತನ್ನ 6 ತಿಂಗಳ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ದುರಂತ ಘಟನೆ ನಡೆದಿದೆ. ಗಂಗಾಧರ ಬಿ. ಕಮ್ಮಾರ … Continued

ದೆಹಲಿ: ಹನುಮ ಜಯಂತಿ ಮೆರವಣಿಗೆ ವೇಳೆ ಘರ್ಷಣೆ- 9 ಮಂದಿಗೆ ಗಾಯ, 14 ಮಂದಿ ಬಂಧನ

ನವದೆಹಲಿ: ಶನಿವಾರ ಸಂಜೆ ವಾಯುವ್ಯ ದೆಹಲಿಯ ಜಹಾಂಗೀರ್‌ಪುರಿ ಪ್ರದೇಶದಲ್ಲಿ ಹನುಮಾನ್ ಜಯಂತಿ ಮೆರವಣಿಗೆಯಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ ಸಂಭವಿಸಿದೆ. ನಂತರದ ಹಿಂಸಾಚಾರದಲ್ಲಿ ಹಲವಾರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, ಶನಿವಾರ ಸಂಜೆ 6 ಗಂಟೆ ಸುಮಾರಿಗೆ ನಡೆದ ಹಿಂಸಾಚಾರದಲ್ಲಿ ಕಲ್ಲು ತೂರಾಟ ನಡೆದಿದೆ ಮತ್ತು ಕೆಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಪರಿಸ್ಥಿತಿ ಹತೋಟಿಗೆ … Continued

ಹುಬ್ಬಳ್ಳಿ: ವಿವಾದಿತ ಪೋಸ್ಟ್​ನಿಂದ ಹಳೇ ಹುಬ್ಬಳ್ಳಿ ಉದ್ವಿಗ್ನ, ಹಲವರ ಬಂಧನ, ನಿಷೇಧಾಜ್ಞೆ ಜಾರಿ

ಹುಬ್ಬಳ್ಳಿ: ಸಾಮಾಜಿಕ ಜಾಲತಾಣದಲ್ಲಿ ವಿವಾದಿತ ಪೋಸ್ಟ್‌ ಕಂಡುಬಂದ ನಂತರ ಹುಬ್ಬಳ್ಳಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಏ.20ರ ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಗರದೆಲ್ಲೆಡೆ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದಾರೆ. ಹೆಚ್ಚಿನ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಕಿಡಿಗೇಡಿಗಳು  ಶನಿವಾರ ರಾತ್ರಿ ಹಳೇಹುಬ್ಬಳ್ಳಿ ಪೊಲೀಸ್‌ ಠಾಣೆ ಎದುರು ಕಲ್ಲು ತೂರಾಟ ನಡೆಸಿದ್ದು, ನೂರಾರು ಜನರು ಠಾಣೆಯ ಎದುರು ಜಮಾಯಿಸಿ … Continued

ಯುವಕನಿಂದ ಪ್ರಚೋದನಾಕಾರಿ ಪೋಸ್ಟ್‌: ಹಳೆಹುಬ್ಬಳ್ಳಿಯಲ್ಲಿ ಉದ್ವಿಗ್ನ, ಕಲ್ಲು ತೂರಾಟ

ಹುಬ್ಬಳ್ಳಿ: ಯುವಕನೊಬ್ಬ ವೀಡಿಯೊವೊಂದನ್ನು ಹಂಚಿಕೊಂಡಿರುವುದು ಈಗ ನಗರದಲ್ಲಿ ಕೋಮು ಉದ್ವಿಗ್ನಕ್ಕೆ ಕಾರಣವಾಗಿದೆ. ಪೊಲೀಸ್ ಠಾಣೆ ಎದುರೇ ಕಲ್ಲು ತೂರಾಟ ನಡೆದಿದ್ದು, ಪೊಲೀಸ್ ಜೀಪನ್ನು ಪಲ್ಟಿ ಮಾಡಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಫೋಟೋ ಎಡಿಟ್‌ ಮಾಡಿ ಮಸೀದಿಯೊಂದರ ಮೇಲೆ ಭಗವಾಧ್ವಜ ಹಾರಿಸಿದಂಥ ವೀಡಿಯೊವೊಂದನ್ನು ಸ್ಟೇಟಸ್​​ಗೆ ಹಾಕಿಕೊಂಡಿದ್ದು ಕೋಮು ಉದ್ವಿಗ್ನಕ್ಕೆ ಕಾರಣವಾಗಿದೆ. ಈ ವಿಷಯ ತಿಳಿದ ಕೂಡಲೇ ಹಳೇ ಹುಬ್ಬಳ್ಳಿ … Continued

ದ್ವಿತೀಯ ಪಿಯು ಪರೀಕ್ಷೆ‌ ಬರೆಯುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಕೆಎಸ್ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ

ಬೆಂಗಳೂರು: ಏಪ್ರಿಲ್‌ 22ರಿಂದ ಆರಂಭವಾಗುವ ದ್ವಿತೀಯ ಪಿಯು ಪರೀಕ್ಷೆಗೆ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತೆರಳಲು ಹಾಗೂ ಬರೆದು ವಾಪಸ್ ಬರಲು ಕೆಎಸ್ಆರ್‌ಟಿಸಿ ಬಸ್ಸಿನಲ್ಲಿ ಉಚಿತ ಪ್ರಯಾಣ ಸೌಲಭ್ಯ ನೀಡಲಾಗಿದೆ. ಈ ಕುರಿತು ಕೆಎಸ್ಆರ್‌ಟಿಸಿ ಪತ್ರಿಕಾ ಪ್ರಕಟಣೆ ನೀಡಿದ್ದು, ಏಪ್ರಿಲ್‌ 22ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷೆಗಾಗಿ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾ ಸಂಸ್ಥೆಗಳಿಗೆ … Continued