ಆತ್ಮಾಹುತಿಗೂ ಮುನ್ನ ವೀಡಿಯೊ: ವರ್ಗಾವಣೆ ಮಾಡಲು ಹೊಲಸು ಬೇಡಿಕೆ ಇಟ್ಟ ದುರುಳ ಜೆಇ: ಮನನೊಂದು ಲೈನ್‌ಮ್ಯಾನ್ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ..!

ಲಖೀಂಪುರ ಖೇರಿ (ಉತ್ತರ ಪ್ರದೇಶ): ದುರುಳ ಜೂನಿಯರ್‌ ಇಂಜಿನಿಯರ್​​ (ಜೆಇ) ಕಿರುಕುಳದಿಂದಾಗಿ ತೀವ್ರವಾಗಿ ಮನನೊಂದ ಲೈನ್​ಮ್ಯಾನ್​ ಮೈಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ‘ವರ್ಗಾವಣೆಗಾಗಿ ಒಂದು ಲಕ್ಷ ರೂ. ಲಂಚ ಮತ್ತು ಒಂದು ರಾತ್ರಿಗೆ ನಿನ್ನ ಪತ್ನಿಯನ್ನು ನನ್ನೊಂದಿಗೆ ಕಳುಹಿಸಬೇಕು ಎಂದು ಜೂನಿಯರ್‌ ಇಂಜಿನಿಯರ್​​ (ಜೆಇ) ನಾಗೇಂದ್ರಕುಮಾರ ವಿಕೃತ ಬೇಡಿಕೆ … Continued

ಒಮಿಕ್ರಾನ್ ನಂತರ ಈಗ XE, ME ರೂಪಾಂತರಿ ಭೀತಿ: ಮಾಸ್ಕ್‌ ಕಡ್ಡಾಯ, ಶೀಘ್ರ ಹೊಸ ಮಾರ್ಗಸೂಚಿ ಪ್ರಕಟ ಎಂದ ಡಾ.ಸುಧಾಕರ

ಬೆಂಗಳೂರು: ರಾಜ್ಯತೆ ಜನತೆ ಮಾಸ್ಕ್‌ ಕಡ್ಡಾಯವಾಗಿ ಧರಿಸಬೇಕು. ಈ ಮೂಲಕ ನಾಲ್ಕನೇ ಅಲೆಯನ್ನ ತಡೆಯಲು ಸರ್ಕಾರದ ಜೊತೆ ಕೈ ಜೋಡಿಸಬೇಕು. ಶೀಘ್ರವೇ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಲಿದೆ ಎಂದು ಹೇಳಿದ್ದಾರೆ. ಸೋಮವಾರ ಆರೋಗ್ಯಸೌಧದಲ್ಲಿ ತಾಂತ್ರಿಕ ಸಲಹಾ ಸಮಿತಿ ನೇತೃತ್ವದಲ್ಲಿ ಆರೋಗ್ಯ ಸಚಿವ ಸುಧಾಕರ್ ತುರ್ತು ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನ ಎಂದಿನಂತೆ … Continued

ರಾಂಚಿ: ರೋಪ್‌ ವೇ ಕೇಬಲ್ ಕಾರ್ ಅಪಘಾತದಲ್ಲಿ 2 ಸಾವು, 22 ಜನರ ಜನರ ರಕ್ಷಣೆ, ರಕ್ಷಣೆಗಾಗಿ ಕಾಯುತ್ತಿರುವ 20ಕ್ಕೂ ಹೆಚ್ಚು ಜನ

ರಾಂಚಿ: ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯ ತ್ರಿಕುಟ್ ಬೆಟ್ಟಗಳಲ್ಲಿ ಭಾನುವಾರ ಸಂಭವಿಸಿದ ರೋಪ್‌ ವೇ ಕೇಬಲ್ ಕಾರ್ ಡಿಕ್ಕಿಯಲ್ಲಿ ಕನಿಷ್ಠ ಇಬ್ಬರು ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎರಡು ವಾಯುಪಡೆಯ ಹೆಲಿಕಾಪ್ಟರ್‌ಗಳು ರೋಪ್‌ವೇಯಲ್ಲಿ ಸಿಲುಕಿರುವ ಜನರನ್ನು ಹೊರತೆಗೆಯಲು ಇನ್ನೂ ಪ್ರಯತ್ನಿಸುತ್ತಿವೆ. 24 ಗಂಟೆಗಳ ನಂತರ ಸುಮಾರು 22 ಜನರನ್ನು ರಕ್ಷಿಸಲಾಗಿದೆ ಮತ್ತು ಕನಿಷ್ಠ … Continued

ವಿರೋಧ ಪಕ್ಷದ ನಾಯಕ ಶೆಹಬಾಜ್ ಷರೀಫ್ ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಆಯ್ಕೆ

ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಶೆಹಬಾಜ್ ಷರೀಫ್ ಆಯ್ಕೆಯಾಗಿದ್ದಾರೆ. ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಅಧ್ಯಕ್ಷ ಷರೀಫ್ ನಿನ್ನೆ ಉನ್ನತ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದರು. ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ನಾಯಕ ಶಾ ಮಹಮೂದ್ ಖುರೇಷಿ ಕೂಡ ಪ್ರಧಾನಿ ಹುದ್ದೆಗೆ ಕಣದಲ್ಲಿದ್ದರು. ರಾಷ್ಟ್ರೀಯ ಅಸೆಂಬ್ಲಿ ಶನಿವಾರ 12 ಗಂಟೆಗಳಿಗೂ ಹೆಚ್ಚು ಕಾಲ ಈ ವಿಷಯದ ಬಗ್ಗೆ ಚರ್ಚೆ ನಡೆಸಿದ … Continued

ನಟ, ಚಿತ್ರಕಥೆ ಬರಹಗಾರ ಶಿವಕುಮಾರ್ ಸುಬ್ರಮಣ್ಯಂ ನಿಧನ

ಮುಂಬೈ: ನಟ ಮತ್ತು ಚಿತ್ರಕಥೆಗಾರ ಶಿವಕುಮಾರ್ ಸುಬ್ರಮಣ್ಯಂ ಭಾನುವಾರ ರಾತ್ರಿ ನಿಧನರಾಗಿದ್ದಾರೆ. ನಟ 1989 ರಲ್ಲಿ ವಿಧು ವಿನೋದ್ ಚೋಪ್ರಾ ಅವರ ಪರಿಂದಾ ಚಿತ್ರದ ಚಿತ್ರಕಥೆಯನ್ನು ಬರೆಯುವುದರೊಂದಿಗೆ ಬಾಲಿವುಡ್‌ನಲ್ಲಿ ತಮ್ಮ ಪ್ರಯಾಣವನ್ನು ಪ್ರಾರಂಭಿಸಿದರು. ಅವರು 1942: ಎ ಲವ್ ಸ್ಟೋರಿ, ಚಮೇಲಿ, ಹಜಾರೋನ್ ಕ್ವಾಯಿಶೇನ್‌ ಐಸಿ ಮೊದಲಾದ ಗಮನಾರ್ಹ ಚಲನಚಿತ್ರಗಳಿಗೆ ಚಿತ್ರಕಥೆ ಬರೆದಿದ್ದಾರೆ. ಸುಬ್ರಹ್ಮಣ್ಯಂ ಅವರು … Continued

ಅಪಘಾತದಲ್ಲಿ ಸಂಸದ ಸಂಗಣ್ಣ ಕರಡಿ ಸಹೋದರ ಸಾವು

ಕೊಪ್ಪಳ: ಕಾರು-ಸ್ಕೂಟಿ ನಡುವೆ ಮುಖಾಮುಖಿ ಢಿಕ್ಕಿಯಲ್ಲಿ ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರ ಸಹೋದರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಟಣಕನಕಲ್ ನಲ್ಲಿ ಸೋಮವಾರ ನಡೆದಿದೆ. ತಾಲೂಕಿನ ಟಣಕನಕಲ್ ಬಳಿ ಕಾರು-ಸ್ಕೂಟಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬಸಣ್ಣ ಅಮರಪ್ಪ ಕರಡಿ(60) ಅವರು ಬಸಪ್ಪ ಅಮರಪ್ಪ ಕರಡಿ ಮೃತಪಟ್ಟರು. ತೀವ್ರವಾಗಿ ಗಾಯಗೊಂಡ ಬಸಣ್ಣ ಕರಡಿ ಅವರನ್ನು … Continued

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ ಇಡಿ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಜಾರಿ ನಿರ್ದೇಶನಾಲಯ ಸೋಮವಾರ ವಿಚಾರಣೆ ನಡೆಸಿದೆ. ನ್ಯಾಷನಲ್ ಹೆರಾಲ್ಡ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಖರ್ಗೆ ಅವರನ್ನು ಕೇಂದ್ರ ತನಿಖಾ ಸಂಸ್ಥೆ ಪ್ರಶ್ನಿಸುತ್ತಿದೆ ಎಂದು ಮೂಲಗಳು ತಿಳಿಸಿವೆ ಎಂದು ಇಂಡಿಯಾ ಟುಡೆ … Continued

ಮುಸ್ಕಾನ್‌ ತನಿಖೆ ಮಾಡಿದರೆ ತಪ್ಪೇನೂ ಇಲ್ಲ, ಆದರೆ ರಾಜಕಾರಣ ಮಾಡಿ ಶಾಂತಿ ಹದಗೆಡಿಸಬಾರದು: ಸುಮಲತಾ ಅಂಬರೀಷ್

ಬೆಂಗಳೂರು: ಮಂಡ್ಯದ ಮುಸ್ಕಾನ್‌ ಅವರನ್ನು ತನಿಖೆ ನಡೆಸಿದರೆ ತಪ್ಪೇನೂ ಇಲ್ಲ. ತನಿಖೆ ನಡೆದರೆ ಸತ್ಯ ಹೊರಗೆ ಬರುತ್ತದೆ ಎಂದು ಸಂಸದೆ ಸುಮಲತಾ ಅಂಬರೀಶ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖೆ ಮಾಡುವುದರಲ್ಲಿ ತಪ್ಪೇನಿಲ್ಲ, ತನಿಖೆ ಆಗಿ ನಿಜ ಹೊರಗೆ ಬರಬೇಕು. ಆದರೆ ರಾಜಕಾರಣ ಮಾಡಿ ವಾತಾವರಣ ಹದಗೆಡಿಸುವ ಕೆಲಸ ಮಾಡಬಾರದು ಎಂದು ಸ್ಪಷ್ಟಪಡಿಸಿದರು. ಮಂಡ್ಯ ಹಾಗೂ … Continued

ವಿದ್ಯಾರ್ಥಿನಿ ಮುಸ್ಕಾನಳನ್ನು ತನಿಖೆಗೊಳಪಡಿಸುವಂತೆ ಒತ್ತಾಯಿಸಿ ಸಿಎಂಗೆ ಸಂಸದ ಅನಂತಕುಮಾರ ಹೆಗಡೆ ಪತ್ರ

ಕಾರವಾರ: ಅಲ್ಲಾ ಹೋ ಅಕ್ಬರ್ ಎಂದು ಕೂಗಿದ್ದ ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್‍ ಅವಳನ್ನು ತನಿಖೆಗೆ ಒಳಪಡಿಸಬೇಕು ಎಂದು  ಕೇಂದ್ರದ ಮಾಜಿ ಸಚಿವ ಹಾಗೂ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಒತ್ತಾಯಿಸಿದ್ದಾರೆ. ಈ ಘಟನೆ ಹಿಂದೆ ಕಾಣದ ಕೈಗಳು ಮತ್ತು ನಿಷೇಧಿತ ಮುಸ್ಲಿಂ ಸಂಘಟನೆಗಳ ಸಂಬಂಧದ ಬಗ್ಗೆ ತನಿಖೆ ಮಾಡುವಂತೆ … Continued

ಜೆಎನ್‌ಯು ಹಿಂಸಾಚಾರ: ಎಬಿವಿಪಿ ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲು, ದೆಹಲಿ ಪೊಲೀಸ್ ಪ್ರಧಾನ ಕಚೇರಿಗೆ ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳಿಂದ ಘೇರಾವ್

ನವದೆಹಲಿ: ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಭಾನುವಾರ ಸಂಜೆ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದೆ. ಘಟನೆಯಲ್ಲಿ ಆರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾರ್ಥಿಗಳ ಪ್ರಕಾರ ಗಾಯಗೊಂಡ ವಿದ್ಯಾರ್ಥಿಗಳ ಸಂಖ್ಯೆ ಇನ್ನೂ ಹೆಚ್ಚು. ಹಿಂದೂಗಳ ಹಬ್ಬವಾದ ರಾಮನವಮಿಯಂದು ಹಾಸ್ಟೆಲ್ ಮೆಸ್‌ನಲ್ಲಿ ಮಾಂಸಾಹಾರವನ್ನು ನೀಡಲಾಗುತ್ತಿದೆ ಎಂದು ಎಡ ಸಂಘಟನೆಗಳು ಮತ್ತು … Continued