ಪಿಎಸ್‌ಐ ನೇಮಕಾತಿ ಅಕ್ರಮ: ಬೆಂಗಳೂರಿನಲ್ಲಿ 12 ಅಭ್ಯರ್ಥಿಗಳ ಬಂಧನ

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ 12 ಅಭ್ಯರ್ಥಿಗಳನ್ನು ಹೈಗ್ರೌಂಡ್ಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸಿಐಡಿ ಡಿಎಸ್​ಪಿ ನೀಡಿದ ದೂರಿನನ್ವಯ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, 8ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಕೋರಮಂಗಲದ ನಿವಾಸಕ್ಕೆ ಹಾಜರುಪಡಿಸಿ, 10 ದಿನ ವಶಕ್ಕೆ ಪಡೆದಿದ್ದಾರೆ.

ಬಂಧಿತರು 2020-21ನೇ ಸಾಲಿನಲ್ಲಿ ಬೆಂಗಳೂರಿನ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದಾರೆ. ತನಿಖೆಯ ವೇಳೆ ಅಭ್ಯರ್ಥಿಗಳ ಒಎಂಆರ್​​ ಶೀಟ್‌ನ ಕಾರ್ಬನ್ ಪ್ರತಿ ಪಡೆಯಲಾಗಿತ್ತು. ಈ ಪೈಕಿ 22 ಅಭ್ಯರ್ಥಿಗಳ ಮೂಲ ಒಎಂಆರ್​​ ಪ್ರತಿ ಹಾಗೂ ಕಾರ್ಬನ್ ಪ್ರತಿಯಲ್ಲಿ ವ್ಯತ್ಯಾಸ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಹೈಗ್ರೌಂಡ್ಸ್ ಠಾಣೆಗೆ ಸಿಐಡಿ ಡಿಎಸ್​ಪಿ ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ 12 ಅಭ್ಯರ್ಥಿಗಳನ್ನು ಬಂಧಿಸಲಾಗಿದೆ. ಉಳಿದವರಿಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

ನಿಮ್ಮ ಕಾಮೆಂಟ್ ಬರೆಯಿರಿ

advertisement