ಕರ್ನಾಟಕದ ಕರಾವಳಿ ಭಾಗದಲ್ಲಿ ಗುಡುಗು ಸಹಿತ ಗಾಳಿ ಮಳೆ ಸಾಧ್ಯತೆ: ಇಂದು ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕರ್ನಾಟಕದ ಕರಾವಳಿ ಭಾಗದಲ್ಲಿ ಗುಡುಗು, ಮಿಂಚು, ಗಾಳಿ ಸಹಿತ ಉತ್ತಮ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಭಾನುವಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಗುಡುಗು, ಮಿಂಚು, ಗಾಳಿ ಸಹಿತ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಮೇ1ರಂದು ಉತ್ತಮ ಮಳೆ ಬಂದರೆ, ಬಳಿಕ ಮೂರ್‍ನಾಲ್ಕು ದಿನ ಸಾಧಾರಣ ಮಳೆ ಬೀಳುವ ಸಂಭವ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ ಮೂರ್ನಲ್ಕು ದಿನ ಕರಾವಳಿ ಜಿಲ್ಲೆಗಳಾದ ದಷಕಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಹಳ ಹಲವೆಡೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉತ್ತರ ಕರ್ನಾಟಕದ ಜಿಲ್ಲೆಗಳ ಹಲವೆಡೆ ಇಂದು ಮಳೆ ಸುರಿಯಲಿದೆ ಎಮದು ತಿಳಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗಿನಲ್ಲಿ ಹಗುರ ಮಳೆ ಮುಂದುವರೆಯಲಿದೆ. ಬೆಂಗಳೂರು ನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಕೂಡ
ಮಳೆ ಮುನ್ಸೂಚನೆ ನೀಡಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement