ಮೈಸೂರು-ಧಾರವಾಡ ರೈಲಿನಲ್ಲಿ ಮಧ್ಯರಾತ್ರಿ  ಕಾಣಿಸಿಕೊಂಡ ಬೆಂಕಿ

ಮಂಡ್ಯ: ಮೈಸೂರು-ಧಾರವಾಡ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮಧ್ಯರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಕೂದಲೆಳೆ ಸ್ವಲ್ಪದರಲ್ಲೇ ಭಾರೀ ಅನಾಹುತ ತಪ್ಪಿದೆ ಎಂದು ಹೇಳಲಾಗಿದೆ.
ರೈಲು ರಾತ್ರಿ 10:30ಕ್ಕೆ ಮೈಸೂರಿನಿಂದ ಧಾರವಾಡಕ್ಕೆ ತೆರಳುತ್ತಿತ್ತು. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಬಳಿ ರಾತ್ರಿ 12 ಗಂಟೆ ಸುಮಾರಿಗೆ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.

ತಕ್ಷಣವೇ ಚಾಲಕ ರೈಲನ್ನು ನಿಲ್ಲಿಸಿದ್ದರಿಂದ ಅನಾಹುತ ತಪ್ಪಿದೆ. ತಕ್ಷಣವೇ ಬೋಗಿಯಿಂದ ಪ್ರಯಾಣಿಕರು ಕೆಳಗಿಳಿದಿದ್ದಾರೆ.
ತಕ್ಷಣವೇ ರೈಲ್ವೆ ಸಿಬ್ಬಂದಿ ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಬೆಂಕಿ‌ ನಂದಿಸುವ ಕಾರ್ಯ ಮಾಡಿದ್ದಾರೆ. ಬೆಂಕಿ ನಂದಿಸಿದ ಬಳಿಕ ರೈಲು ಸಂಚಾರ ಆರಂಭಿಸಿದೆ. ಒಂದು ಗಂಟೆಗೂ‌ ಹೆಚ್ಚು ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ ಎನ್ನಲಾಗಿದೆ.
ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ ನಂತರ ರೈಲು ಮತ್ತೆ ಸಂಚಾರ ಆರಂಭಿಸಿತು

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement