ಇಲಿ ಕಚ್ಚಿದ ನಂತರ ಆಸ್ಪತ್ರೆಗೆ ದಾಖಲಾದ ಉತ್ತರ ಪ್ರದೇಶದ ಸಚಿವ ಗಿರೀಶ್ ಚಂದ್ರ ಯಾದವ್

ಬಂಡಾ: ಉತ್ತರ ಪ್ರದೇಶದ ಸಚಿವ ಗಿರೀಶ್ ಚಂದ್ರ ಯಾದವ್ ಅವರನ್ನು ಸೋಮವಾರ ಮುಂಜಾನೆ ಇಲಿ ಕಚ್ಚಿದ ಹಿನ್ನೆಲೆಯಲ್ಲಿ ಇಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾ ಆಸ್ಪತ್ರೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಂಡಾ  ಜಿಲ್ಲೆಯ ಪ್ರವಾಸದಲ್ಲಿದ್ದು ಸರ್ಕಿಟ್ ಹೌಸ್‌ನಲ್ಲಿ ತಂಗಿದ್ದ ಯುವಜನ ಕಲ್ಯಾಣ ಮತ್ತು ಕ್ರೀಡಾ ರಾಜ್ಯ ಸಚಿವ ಗಿರೀಶ್ ಚಂದ್ರ ಯಾದವ್ ಅವರು ಆರೋಗ್ಯವಾಗಿದ್ದು, ಬೆಳಿಗ್ಗೆ … Continued

ಜಾರ್ಖಂಡ್‌ ಸಿಎಂ ಹೆಸರಿಗೆ ಗಣಿಗಾರಿಕೆ ಗುತ್ತಿಗೆ : ಹೇಮಂತ್ ಸೊರೇನ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ರಾಂಚಿ: ಜನತಾ ಪ್ರಾತಿನಿಧ್ಯ ಕಾಯಿದೆ 1951ರ ಸೆಕ್ಷನ್ 9ಎ ಉಲ್ಲಂಘನೆ ಆರೋಪದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಹೆಸರಿಗೆ ಗಣಿ ಗುತ್ತಿಗೆ ನೀಡಿರುವ ಕುರಿತು ಚುನಾವಣಾ ಆಯೋಗ ಅವರಿಗೆ ನೋಟಿಸ್ ಕಳುಹಿಸಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಗಣಿ ಗುತ್ತಿಗೆಯನ್ನು ಅವರ ಪರವಾಗಿ ನೀಡಿದ್ದಕ್ಕಾಗಿ ಅವರ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದು ಎಂದು ಚುನಾವಣಾ … Continued

ಬೃಹತ್‌ ನೀರಿನ ಟ್ಯಾಂಕಿನಲ್ಲಿ ಬಿದ್ದ ಕಾಡುಕೋಣ…!

ಮಂಗಳೂರು: ಕಾಡಿನಿಂದ ನೀರು ಅರಸಿ ಬಂದ ಕಾಡುಕೋಣಯೊಂದು ನೀರಿನ ಟ್ಯಾಂಕ್ ಗೆ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟಲ್ಪ ಸಮೀಪದ ಕನ್ಯಾನದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಕಳೆಂಜೆಮಲೆ ರಕ್ಷಿತಾರಣ್ಯ ಕಾಡಿನಿಂದ ಕಾಡುಕೋಣವು ನೀರು ಹುಡುಕಿಕೊಂಡು ರಾತ್ರಿ ಊರಿಗೆ ಬಂದಿದೆ ಎಂದು ಹೇಳಲಾಗಿದೆ. ಕನ್ಯಾನ ಭಾರತ ಸೇವಾಶ್ರಮದ ದೊಡ್ಡ ನೀರಿನ ಟ್ಯಾಂಕ್ ನಲ್ಲಿ ಬಗ್ಗಿ ನೀರು … Continued

ಟ್ವಿಟರ್ ಸಿಇಒ ಪರಾಗ್ ಅಗರವಾಲ್ ಬದಲಿಸಲು, ವಿಜಯ ಗಡ್ಡೆ ವಜಾಗೊಳಿಸಲು ಎಲೋನ್ ಮಸ್ಕ್ ಚಿಂತನೆ: ವರದಿ

ಟೆಸ್ಲಾ ಸಿಇಒ ಎಲೋನ್ ಮಸ್ಕ್ ಟ್ವಿಟರ್ ಕಂಪನಿಯನ್ನು $44 ಶತಕೋಟಿಗೆ ಖರೀದಿಸಿದಾಗಿನಿಂದ, ಉದ್ಯೋಗಿಗಳು ತಮ್ಮ ಉದ್ಯೋಗವನ್ನು ಕಳೆದುಕೊಳ್ಳುವ ಬಗ್ಗೆ ಭೀತರಾಗಿದ್ದಾರೆ. ಕಳೆದ ಕೆಲವು ವಾರಗಳಲ್ಲಿ, ಸಿಇಒ ಪರಾಗ್ ಅಗರವಾಲ್ ವಜಾಗೊಳಿಸುವಿಕೆ, ಟ್ವಿಟರ್‌ನ ಭವಿಷ್ಯ ಮತ್ತು ಹೆಚ್ಚಿನದಕ್ಕೆ ಸಂಬಂಧಿಸಿದಂತೆ ಚರ್ಚೆಗಳು ನಡೆಯುತ್ತಿವೆ. ಉದ್ಯೋಗ ಕಡಿತಕ್ಕೆ ಸಂಬಂಧಿಸಿದಂತೆ, ಸದ್ಯಕ್ಕೆ ಆ ರೀತಿಯ ಏನೂ ನಡೆಯುತ್ತಿಲ್ಲ ಎಂದು ಅಗರವಾಲ್ ಭರವಸೆ … Continued

ನವಜೋತ್ ಸಿಧು ವಿರುದ್ಧ ಶಿಸ್ತು ಕ್ರಮಕ್ಕೆ ಒತ್ತಾಯಿಸಿ ಸೋನಿಯಾ ಗಾಂಧಿಗೆ ಪತ್ರ ಬರೆದ ಪಂಜಾಬ್ ಕಾಂಗ್ರೆಸ್ ಉಸ್ತುವಾರಿ…!

ನವದೆಹಲಿ: ಪಂಜಾಬ್ ಮತ್ತು ಚಂಡೀಗಢದ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಉಸ್ತುವಾರಿ ಹರೀಶ್ ಚೌಧರಿ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬರೆದ ಲಿಖಿತ ಪತ್ರದಲ್ಲಿ ಪಂಜಾಬ್ ಕಾಂಗ್ರೆಸ್ ಮಾಜಿ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ವಿರುದ್ಧ ಶಿಸ್ತು ಕ್ರಮಕ್ಕೆ ಒತ್ತಾಯಿಸಿದ್ದಾರೆ. ಏಪ್ರಿಲ್ 23ರ ಪತ್ರದಲ್ಲಿ, “ನವೆಂಬರ್‌ನಿಂದ ಇಲ್ಲಿಯವರೆಗೆ ಪಂಜಾಬ್‌ನಲ್ಲಿ ಪಕ್ಷದ ವ್ಯವಹಾರಗಳ … Continued

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂತು ಕೆಂಪೇಗೌಡರ ಪ್ರತಿಮೆಯ 700 ಕೆ.ಜಿ. ತೂಕದ ಖಡ್ಗ

ಬೆಂಗಳೂರು: ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಷ್ಠಾಪನೆ ಆಗಲಿರುವ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆಯ ಭಾಗವಾದ 700 ಕೆ.ಜಿ. ತೂಕದ ಖಡ್ಗವು ದೆಹಲಿಯಿಂದ ಬೆಂಗಳೂರನ್ನು ತಲುಪಿದೆ. ವಿಶೇಷ ಟ್ರಕ್​ನಲ್ಲಿ ಬಂದ ಈ ಖಡ್ಗವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಸೋಮವಾರ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ನೆರೆದಿದ್ದ ಪುರೋಹಿತರು, ಸಚಿವರ ನೇತೃತ್ವದಲ್ಲಿ … Continued

ಕುಮಟಾ; ಕುಡಿಯುವ ನೀರಿನ ಯೋಜನೆಗೆ 120 ಕೋಟಿ ರೂ ಮಂಜೂರು: .ಶಾಸಕ  ದಿನಕರ ಶೆಟ್ಟಿ

ಕುಮಟಾ; ತಾಲೂಕಿನ ಹೆಗಡೆ ಜಿಲ್ಲಾ ಪಂಚಾಯತವ್ಯಾಪ್ತಿಯ ೯ ಗ್ರಾ.ಪಂ ಸಂಬಂಧಿಸಿದಂತೆ ಪ್ರತ್ಯೇಕ ಕುಡಿಯುವ ನೀರಿನ ಯೋಜನೆಗೆ 120 ಕೋಟಿ ಮಂಜೂರಾಗಿದ್ದು ಸದ್ಯದಲ್ಲೇ ಟೆಂಡರ್ ಕರೆಯಲಾಗುತ್ತಿದೆ ಎಂದು ಶಾಸಕ ದಿನಕರ ಶೆಟ್ಟಿ ತಿಳಿಸಿದರು. ಅವರು ಹಾಳಾಗಿರುವ ಬರ್ಸಗುಣಿ ರಸ್ತೆಯನ್ನು ಕಾಂಕ್ರೀಟ್‌ ರಸ್ತೆ ನಿರ್ಮಾಣಕ್ಕಾಗಿ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಹಾಳಾಗಿರುವ ರಸ್ತೆಯ ೧೨೦ ಮೀಟರ್‌ ಉದ್ದದ … Continued

ಕುಮಟಾ: ಜಿಪಂ ಸದಸ್ಯ, ವಕೀಲರ ಸಂಘದ ಅಧ್ಯಕ್ಷರು ಪ್ರಯಾಣಿಸುತ್ತಿದ್ದ ಕಾರು ಅಪಘಾತ, ಆಸ್ಪತ್ರೆಗೆ ದಾಖಲು, ಪ್ರಾಣಾಪಾಯದಿಂದ ಪಾರು

ಕುಮಟಾ; ತಾಲೂಕಿನ ಬಾಡದವರಾದ ಜಿಲ್ಲಾಪ ಪಂಚಾಯತ ಸದಸ್ಯ ರತ್ನಾಕರ ನಾಯ್ಕ ಮತ್ತು ಕುಮಟಾದ ವಕೀಲರ ಸಂಘದ ಅಧ್ಯಕ್ಷರಾದ ಆರ್.ಜಿ.ನಾಯ್ಕ ಅವರು ಪ್ರಯಾಣಿಸುತ್ತಿರುವ ಕಾರು ಅಪಘಾತಕ್ಕೀಡಾಗಿದ್ದು, ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಭಾನುವಾರ ಸಂಜೆ ಕುಂದಾಪುರದ ಸಮೀಪದ ನಾವುಂದದಲ್ಲಿ ಕಾರು ಡಿವೈಡರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಇಬ್ಬರನ್ನು ತಕ್ಷಣ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವಕೀಲರಾದ … Continued

ಧಾರವಾಡದ ಕಲ್ಲೂರಿನಲ್ಲಿ ಭಾರೀ ಜಂಗಿ ನಿಕಾಲಿ ಕುಸ್ತಿ: ವಿಜೇತ ಪರಶುರಾಮ ಬೊಮ್ಮನಹಳ್ಳಿಗೆ ಬೆಳ್ಳಿ ಗದೆ

ಧಾರವಾಡ : ಧಾರವಾಡ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಕಾರ್ಮಿಕರ ದಿನಾಚರಣೆ ಹಾಗೂ ಬಸವ ಜಯಂತಿ ಅಂಗವಾಗಿ ಜೈ ಹನುಮಾನ್ ಕುಸ್ತಿ ಸಂಘದ ವತಿಯಿಂದ ಭಾರಿ ಜಂಗಿ ನಿಕಾಲಿ ಕುಸ್ತಿ ನಡೆಯಿತು. ಗ್ರಾಮದ ಕುವೆಂಪು ಶತಮಾನೋತ್ಸವ ಸರಕಾರಿ ಮಾದರಿ ಶಾಲೆ ಮೈದಾನದಲ್ಲಿ ನಡೆದ ಕುಸ್ತಿಯಲ್ಲಿ ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದ ಒಟ್ಟು ೫೨ ಪುರುಷ ಜೋಡಿಗಳು, ೫ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಮಳೆ ಜೋರು : ದಕ್ಷಿಣ ಒಳನಾಡಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ 4 ದಿನ ಇನ್ನಷ್ಟು ಜೋರಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ 3ರಿಂದ ಮೇ 6ರ ವರೆಗೆ ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮಂಡ,ಮೈಸೂರು, ಚಿತ್ರದುರ್ಗ, … Continued