ಬೆಂಗಳೂರು: ಯಾವುದೇ ಕಾರಣಕ್ಕೂ ಕರ್ನಾಟಕದ ಒಂದೇ ಒಂದು ಇಂಚು ಜಾಗವನ್ನು ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕರ್ನಾಟಕದಲ್ಲಿ ಮರಾಠಿ ಮಾತನಾಡುವ ಅನೇಕ ಪ್ರದೇಶಗಳಿದ್ದು, ಅವುಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಬಗ್ಗೆ ನಡೆಸುತ್ತಿರುವ ಹೋರಾಟಕ್ಕೆ ನಮ್ಮ ಬೆಂಬಲಿದೆ. ಹಾಗೂ ಅದು ಮಹಾರಾಷ್ಟ್ರಕ್ಕೆ ಸೇರುವ ವರೆಗೂ ನಾವು ಹೋರಾಟಕ್ಕೆ ಬೆಂಗಲ ನೀಡುತ್ತೇನೆ ಎಂದು ಅಜಿತ್ ಪವಾರ್ ಪುಣೆಯಲ್ಲಿ ಮಹಾರಾಷ್ಟ್ರ ಸಂಸ್ಥಾಪನಾ ದಿನಾಚರಣೆ ವೇಳೆ ಭಾನುವಾರ ಹೇಳಿಕೆ ನೀಡಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ಕರ್ನಾಟಕ ಮುಖ್ಯಮಂತ್ರಿ ಬೊಮ್ಮಾಯಿ ಅವರು ರಾಜಕೀಯ ಉಳಿವಿಗಾಗಿ ಭಾಷೆ, ಗಡಿ ವಿಚಾರಗಳನ್ನು ಎತ್ತುವುದು ಅತ್ಯಂತ ಸಣ್ಣತನ. ಕರ್ನಾಟಕದಲ್ಲಿ ಮರಾಠಿ ಭಾಷಿಕರು ಇರುವ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಅವರ ಹೇಳಿಕೆ ಬಾಲಿಷತನದ್ದು ಎಂದು ಲೇವಡಿ ಮಾಡಿದ್ದಾರೆ.
advertisement
9535127775 / 9901837775 / 6364528715 / 08362775155 / https://icsmpucollege.com/
ಮಹಾರಾಷ್ಟ್ರದಲ್ಲೂ ಅನೇಕ ಕಡೆ ಕನ್ನಡ ಮಾತನಾಡುವ ಪ್ರದೇಶಗಳಿವೆ. ಅವುಗಳನ್ನು ಕರ್ನಾಟಕಕ್ಕೆ ಸೇರಿಸಿಕೊಳ್ಳಬೇಕೆಂದು ನಾವು ಯೋಚನೆ ಮಾಡುತ್ತಿದ್ದೇವೆ. ನಿಮ್ಮ ರಾಜಕೀಯ ಅಸ್ತಿತ್ವಕ್ಕಾಗಿ ಭಾಷೆ ವಿವಾದ ಸೃಷ್ಟಿ ಮಾಡಬೇಡಿ ಎಂದು ಎಚ್ಚರಿಸಿದರು.
ಮಹಾರಾಷ್ಟ್ರದಲ್ಲಿ ಯಾವಾಗ ಅಲ್ಲಿನ ರಾಜಕಾರಣ ಇಕ್ಕಟ್ಟಿಗೆ ಸಿಲುಕುತ್ತದೆಯೋ ಅವರು ಗಡಿ ವಿವಾದದ ಕ್ಯಾತೆ ತೆಗೆಯುತ್ತಾರೆ. ಇದು ಹೊಸದೇನೂ ಅಲ್ಲ. ಇದರ ಬಗ್ಗೆ ಚರ್ಚೆಯೇ ಅನಗತ್ಯ. ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಮುಗಿದು ಹೋದ ಅಧ್ಯಾಯ. ಈ ಸಮಸ್ಯೆ ಬಗೆಹರಿದು ದಶಕಗಳೇ ಕಳೆದಿವೆ. ಪದೇ ಪದೇ ಗಡಿ ವಿವಾದವನ್ನು ಮುಂದಿಟ್ಟುಕೊಂಡು ಸೌಹಾರ್ದವನ್ನು ಕೆಣಕಬೇಡಿ. ರಾಜಕೀಯ ಅಸ್ತಿತ್ವಕ್ಕಾಗಿ ಈ ರೀತಿ ಮಾತನಾಡುವುದು ಸರಿಯಲ್ಲ ಎಂದು ಹೇಳಿದರು.
ನಿಮ್ಮ ಕಾಮೆಂಟ್ ಬರೆಯಿರಿ