ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣದಲ್ಲಿ ನನ್ನ ವಿರುದ್ಧದ ಆರೋಪ ನಿರಾಧಾರ, ಇದರ ಹಿಂದೆ ಷಡ್ಯಂತ್ರ: ಡಾ.ಅಶ್ವತ್ಥ ನಾರಾಯಣ

posted in: ರಾಜ್ಯ | 0

ಬೆಂಗಳೂರು: ಪಿಎಸ್‌ಐ ಪರೀಕ್ಷೆ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ಕಾಂಗ್ರೆಸ್ ಮುಖಂಡರು ಮಾಡಿರುವ ಆರೋಪ ಆಧಾರ ರಹಿತ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ ಸ್ಪಷ್ಟನೆ ನೀಡಿದ್ದಾರೆ.

ಸೋಮವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು “ ನನ್ನ ರಾಜಕೀಯ ಬೆಳವಣಿಗೆಯಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರಿಗೆ ಭಯವಾಗತ್ತಿದೆ. ನನ್ನ ಹೆಸರಿಗೆ ಮಸಿ ಬಳಿಯುವ ಯತ್ನ ನಡೆಸಲಾಗುತ್ತಿದ್ದು, ಆದರೆ ನೂರು ಮಂದಿ ಬಂದರೂ ಮಸಿ ಬಳಿಯಲು ಸಾಧ್ಯವಿಲ್ಲ ಎಂದು ಹೇಳಿದರು.
ಇದು ಷಡ್ಯಂತ್ರ ಎಂಬುದು ಗೊತ್ತಾಗುತ್ತದೆ. ಅಪಾದನೆ ಮಾಡುತ್ತಿರುವ ಕಾಂಗ್ರೆಸ್ ಮುಖಂಡರು ಯಾವುದನ್ನೂ ಸ್ಪಷ್ಟವಾಗಿ ಹೇಳಿಲ್ಲ. ಇಂತಹ ಕೀಳು ಮಟ್ಟದ ಆರೋಪ ಸರಿಯಲ್ಲ ಎಂದು ಹೇಳಿದ ಅವರು, ಶಿವಕುಮಾರ ಅವರಿಗೆ ನನ್ನ ಕುರಿತಾಗಿ ಮಾತನಾಡಲು ಯಾವ ವ್ಯಕ್ತಿ ಕರೆ ಮಾಡಿದ್ದಾರೆ ಎಂಬುದನ್ನು ಅವರೇ ಸ್ಪಷ್ಟಪಡಿಸಲಿ ಎಂದು ಸವಾಲು ಹಾಕಿದರು.

ಇಂತಹ ನೂರಾರು ಆರೋಪ ಮಾಡಿದರೂ, ನೂರು ಜನ್ಮವೆತ್ತಿ ಬಂದರೂ ಏನು ಮಾಡಲು ಸಾಧ್ಯವಿಲ್ಲ ಎಂದು ಕಿಡಿಕಾರಿದರು.
ಮುಖ್ಯಮಂತ್ರಿಗಳ ಮುಂದೆಯೇ ಅವರು ಗಂಡಸು ಯಾರು ಎಂದು ಕೇಳಿದ್ದರು. ಇದೀಗ, ನಾನು ಅವರ ತಮ್ಮ ಭಾಗಿಯಾಗಿದ್ದಾರೆ ಎಂದು ಹೇಳಲು ಹೋಗುವುದಿಲ್ಲ. ಆದರೆ, ಅವರ ಕುಟುಂಬಸ್ಥರು, ಸಂಬಂಧಿಕರು ಭಾಗಿಯಾಗಿದ್ದಾರೆ ಎಂಬ‌ ಮಾಹಿತಿ ಬಂದಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಆಗ್ರಹಿಸಿದ್ದರು.

ಓದಿರಿ :-   ಜನ ಕಲ್ಯಾಣೋತ್ಸವ ರಾಜ್ಯ ಮಟ್ಟದ ಕಥಾ ಸ್ಪರ್ಧೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 3

advertisement

ನಿಮ್ಮ ಕಾಮೆಂಟ್ ಬರೆಯಿರಿ