ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂತು ಕೆಂಪೇಗೌಡರ ಪ್ರತಿಮೆಯ 700 ಕೆ.ಜಿ. ತೂಕದ ಖಡ್ಗ

ಬೆಂಗಳೂರು: ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಷ್ಠಾಪನೆ ಆಗಲಿರುವ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆಯ ಭಾಗವಾದ 700 ಕೆ.ಜಿ. ತೂಕದ ಖಡ್ಗವು ದೆಹಲಿಯಿಂದ ಬೆಂಗಳೂರನ್ನು ತಲುಪಿದೆ.
ವಿಶೇಷ ಟ್ರಕ್​ನಲ್ಲಿ ಬಂದ ಈ ಖಡ್ಗವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಸೋಮವಾರ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ನೆರೆದಿದ್ದ ಪುರೋಹಿತರು, ಸಚಿವರ ನೇತೃತ್ವದಲ್ಲಿ ಖಡ್ಗಕ್ಕೆ ಸಾಂಪ್ರದಾಯಿಕ ಶಕ್ತಿಪೂಜೆ ನೆರವೇರಿಸಲಾಯಿತು.
`‌

ಕೆಐಎನಲ್ಲಿ 23 ಎಕರೆ ವಿಸ್ತಾರದಲ್ಲಿ ಕೆಂಪೇಗೌಡರ ಸ್ಮರಣಾರ್ಥ ಹೆರಿಟೇಜ್ ಪಾರ್ಕ್ ಅಸ್ತಿತ್ವಕ್ಕೆ ಬರಲಿದ್ದು, ಕಾಮಗಾರಿಗಳು ಭರದಿಂದ ಸಾಗುತ್ತಿವೆ. ಇಲ್ಲಿ ತಲೆಯೆತ್ತಲಿರುವ ಕೆಂಪೇಗೌಡರ ಭವ್ಯ ಪ್ರತಿಮೆಗೆ 85 ಕೋಟಿ ರೂ. ವಿನಿಯೋಗಿಸಲಾಗುತ್ತಿದೆ. ನೋಯಿಡಾದ ಪದ್ಮಭೂಷಣ ಪುರಸ್ಕೃತ ಶಿಲ್ಪಿಗಳಾದ ರಾಮ್ ವಾನಜಿ ಸುತರ್ ಈ ಪ್ರತಿಮೆ ಮಾಡಿಕೊಡುತ್ತಿದ್ದಾರೆ’ ಎಂದರು.
ಅಮೆರಿಕದ `ಅಕ್ಕ’ ಕನ್ನಡ ಕೂಟಗಳ ಮುಖ್ಯಸ್ಥ ಡಾ.ಅಮರನಾಥ್ ಗೌಡ, ಪ್ರಾಧಿಕಾರದ ಆಯುಕ್ತ ವಿನಯ ದೀಪ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ, ಪ್ರಾಧಿಕಾರದ ನಿರ್ದೇಶಕರು ಉಪಸ್ಥಿತರಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement