ಮೂರು ದೇಶಗಳ ಯುರೋಪ್‌ ಪ್ರವಾಸ ಆರಂಭಿಸಿದ ಪ್ರಧಾನಿ ಮೋದಿ

ನವದೆಹಲಿ: ಈ ವರ್ಷದ ಮೊದಲ ವಿದೇಶ ಪ್ರವಾಸವನ್ನು ಪ್ರಧಾನಿ ನರೇಂದ್ರ ಮೋದಿ ಆರಂಭಿಸಿದ್ದು, ಭಾನುವಾರ ರಾತ್ರಿ ಜರ್ಮನಿಯ ಬರ್ಲಿನ್‌ಗೆ ತೆರಳಿದ್ದಾರೆ.
ಯುರೋಪಿನ ದೇಶಗಳೊಂದಿಗೆ ಶಾಂತಿ, ಸಹಕಾರ ಹಾಗೂ ವ್ಯಾಪಾರವನ್ನು ಮತ್ತಷ್ಟು ಬಲಪಡಿಸಲು ಅವರು ಮುಂದಾಗಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿರುವ ಪ್ರಧಾನ ಮಂತ್ರಿ ಕಚೇರಿ (ಪಿಎಂಒ), ಮೂರು ದಿನಗಳ ಪ್ರವಾಸದಲ್ಲಿ ಪ್ರಧಾನಿ ಮೋದಿ ಅವರು ಜರ್ಮನ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್, ಡೆನ್ಮಾರ್ಕ್ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸೆನ್ ಮತ್ತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಭೇಟಿ ಮಾಡಲಿದ್ದಾರೆ. ಜರ್ಮನಿಯಲ್ಲಿ ಇಂದು, ಸೋಮವಾರ ಹಲವಾರು ಪ್ರಮುಖ ಕಾರ್ಯಕ್ರಮಗಳಲ್ಲಿ ಹಾಜರಾಗಲು ಪ್ರಧಾನಿ ನಿರ್ಧರಿಸಿದ್ದಾರೆ. ಅಷ್ಟೇ ಅಲ್ಲದೆ, ಯುರೋಪ್ ಭೇಟಿಯ ಸಮಯದಲ್ಲಿ ಉಕ್ರೇನ್ ಯುದ್ಧದ ಬಗ್ಗೆಯೂ ಗಮನ ಹರಿಸಲಾಗುವುದು ಎಂದು ತಿಳಿಸಿದೆ.

ಯುರೋಪ್ ಖಂಡ ಭಾರತೀಯ ಮೂಲದ ಎರಡು ಮಿಲಿಯನ್‌ಗಿಂತಲೂ ಹೆಚ್ಚು ಜನರಿಗೆ ನೆಲೆಯಾಗಿದೆ. ಅದರಲ್ಲೂ ಜರ್ಮನಿ ಗಮನಾರ್ಹ ಪ್ರಮಾಣ ಹೊಂದಿದೆ. ಕೋವಿಡ್​ -19 ನಂತರ ಭಾರತ ಮತ್ತು ಜರ್ಮನಿ ನಡುವಿನ ದೀರ್ಘಕಾಲದ ವಾಣಿಜ್ಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಪ್ರಯತ್ನ ಮಾಡುತ್ತೇನೆ. ಯುರೋಪ್​ನಲ್ಲಿರುವ ನಮ್ಮ ಸಹೋದರ, ಸಹೋದರಿಯರನ್ನು ಭೇಟಿ ಮಾಡುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ..| ಗಿರ್‌ ಸೋಮನಾಥದ ಹೆದ್ದಾರಿಯಲ್ಲಿ ವಾಹನಗಳನ್ನು ನಿಲ್ಲಿಸಿದ 2 ಸಿಂಹಿಣಿಗಳು, 8 ಸಿಂಹದ ಮರಿಗಳ ಗುಂಪು-ವೀಕ್ಷಿಸಿ

ಜರ್ಮನಿಯ ಫೆಡರಲ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಜರ್ಮನಿಯ ಬರ್ಲಿನ್‌ಗೆ ಭೇಟಿ ನೀಡಿದ್ದಾರೆ. ನಂತರ ಅವರು ಮೇ 3 ರಿಂದ 4 ಡೆನ್ಮಾರ್ಕ್‌ನ ಕೋಪನ್‌ಹೇಗನ್‌ಗೆ ಪ್ರಯಾಣಿಸಲಿದ್ದಾರೆ. ಭಾರತಕ್ಕೆ ಹಿಂತಿರುಗುವ ವೇಳೆ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಮೋದಿ ಭೇಟಿ ಮಾಡಲಿದ್ದಾರೆ. ಅವರು ಮೂರು ದಿನಗಳ ಪ್ರವಾಸದಲ್ಲಿ 25 ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

2 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement