ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಮಳೆ ಜೋರು : ದಕ್ಷಿಣ ಒಳನಾಡಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ 4 ದಿನ ಇನ್ನಷ್ಟು ಜೋರಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೇ 3ರಿಂದ ಮೇ 6ರ ವರೆಗೆ ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮಂಡ,ಮೈಸೂರು, ಚಿತ್ರದುರ್ಗ, ಬಳ್ಳಾರಿ ಹಾಗೂ ದಾವಣಗೆರೆಯಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ ಸುರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಸೋಮವಾರ ಕೊಡಗಿನ ಗೋಣಿಕೊಪ್ಪದಲ್ಲಿ 34 ಮಿಮೀ, ಮಂಡ್ಯದ ಮಳವಳ್ಳಿಯಲ್ಲಿ 31 ಮಿಮೀ, ಕೆ.ಆರ್.ಪೇಟೆಯಲ್ಲಿ 26 ಮಿಮೀ ಹಾಗೂ ಬೆಂಗಳೂರು ನಗರದಲ್ಲಿ 21 ಮಿಮೀ ಮಳೆ ಸುರಿದಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement