ಮೇ 5ರಂದು ಜೆಡಿಎಸ್ ಕೋರ್ ಕಮಿಟಿ ಸಭೆ

ಬೆಂಗಳೂರು: ಜನತಾ ಜಲಧಾರೆಯ ಬೃಹತ್ ಸಮಾವೇಶ ಹಾಗೂ ಪಕ್ಷದ ಸಾಂಸ್ಥಿಕ ಚುನಾವಣೆ ನಡೆಸುವ ಕುರಿತು ಚರ್ಚಿಸಲು ಜೆಡಿಎಸ್ ಕೋರ್ ಕಮಿಟಿ ಸಭೆ ಮೇ 5ರಂದು ನಡೆಯಲಿದೆ.
ಕೋರ್ ಕಮಿಟಿ ಅಧ್ಯಕ್ಷ ಬಂಡೆಪ್ಪ ಕಾಶಂಪುರ್ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹಾಗೂ ರಾಜ್ಯ ಸಂಸದೀಯ ಮಂಡಳಿ ಅಧ್ಯಕ್ಷ ಎಚ್.ಕೆ.ಕುಮಾರಸ್ವಾ ಸೇರಿದಂತೆ ಕೋರ್ ಕಮಿಟಿ ಸದಸ್ಯರು ಪಾಲ್ಗೊಳ್ಳಲಿದ್ದಾರೆ.

ಮೇ 13ರಂದು ನೆಲಮಂಗಲದ ಬಳಿ ಜನತಾ ಜಲಧಾರೆಯ ಬೃಹತ್ ಸಮಾವೇಶ ನಡೆಸಲು ಉದ್ದೇಶಿಸಲಾಗಿದೆ. ಜನತಾ ಜಲಧಾರೆ ಕಾರ್ಯಕ್ರಮ 15 ಸ್ಥಳಗಳಿಂದ ಏಕಕಾಲಕ್ಕೆ ಪ್ರಾರಂಭವಾಗಿದ್ದು, ಕಾವೇರಿ ಕೃಷ್ಣ ಸೇರಿದಂತೆ ಪವಿತ್ರ ನದಿಗಳಿಂದ ನೀರು ಸಂಗ್ರಹಿಸಲಾಗಿದೆ.

ರಾಜ್ಯದ ನೀರಾವರಿ ಯೋಜನೆಗಳ ಸಮರ್ಪಕ ಅನುಷ್ಠಾನದ ಭರವಸೆ ನೀಡಿ ವಿಧಾನಸಭೆ ಚುನಾವಣೆಯಲ್ಲಿ ಸ್ವಂತ ಬಲದ ಮೇಲೆ ಅಧಿಕಾರ ನೀಡಬೇಕೆಂಬ ಕೋರಿಕೆಯನ್ನು ಜೆಡಿಎಸ್‌ ಜನ ಮುಂದಿಟ್ಟಿದೆ ಹಾಗೂ ನೀರಾವರಿ ಯೋಜನೆಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುತ್ತಿದೆ. ಈ ಹಿನ್ನೆಲೆಯಲ್ಲಿ ಮೇ 13ರಂದು ಜೆಡಿಎಸ್‌ನಿಂದ ನೆಲಮಂಗಲದ ಬಳಿ ಜನತಾ ಜಲಧಾರೆಯ ಬೃಹತ್ ಸಮಾವೇಶ ನಡೆಸಲು ಉದ್ದೇಶಿಸಲಾಗಿದ್ದು, ಇದರ ಹಿನ್ನೆಲೆಯಲ್ಲಿ ಈ ಕೋರ್‌ ಕಮಿಟಿ ಸಭೆ ನಡೆಯಲಿದೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಮಾರಾಮಾರಿ : ಚಾಕು ಇರಿತ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement