ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಹೊರಟ್ಟಿ

posted in: ರಾಜ್ಯ | 0

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಇಂದು, ಮಂಗಳವಾರ (ಮೇ 3) ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ನಗರದ ತಾಜ್ ವೆಸ್ಟೆಂಡ್ ಹೋಟೆಲ್​ನಲ್ಲಿ ಸೇರ್ಪಡೆಯಾಗಿ ಮಾತನಾಡಿದ ಬಸವರಾಜ ಹೊರಟ್ಟಿ, ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಜೆಡಿಎಸ್‌ ಬಗ್ಗೆ ನನಗೆ ಒಳ್ಳೆಯ ಅಭಿಪ್ರಾಯವಿದೆ. ಆದರೆ ಮತದಾರರ ಅಭಿಪ್ರಾಯದ ಮೇಲೆ ಬಿಜೆಪಿ ಸೇರ್ಪಡೆಯಾಗುತ್ತಿದ್ದೇನೆ ಎಂದು ತಿಳಿಸಿದರು.
ಹೊರಟ್ಟಿ ಸೇರ್ಪಡೆ ಬಗ್ಗೆ ಮಾತನಾಡಿದ ಸಚಿವ ಆರ್ ಅಶೋಕ್, ಶಿಕ್ಷಕರ ಕ್ಷೇತ್ರದಿಂದ 7 ಬಾರಿ ವಿಧಾನ ಪರಿಷತ್‌ಗೆ ಆಯ್ಕೆಯಾಗಿ ಹಲವು ಹುದ್ದೆಗಳನ್ನ ನಿಭಾಯಿಸಿದ್ದಾರೆ. ಹೊರಟ್ಟಿ ಸರಳ ಸಜ್ಜನ ರಾಜಕಾರಣಿ. ಅವರ ಸೇರ್ಪಡೆಯಿಂದ ಬಿಜೆಪಿ ವರ್ಚಸ್ಸು ಹೆಚ್ಚುತ್ತದೆ. ಹೊರಟ್ಟಿಯವರು ರಾಜಕೀಯ ಮುತ್ಸದ್ದಿ. ಅವರ ಪಕ್ಷ ಸೇರ್ಪಡೆ ಮುಂದಿನ ಚುನಾವಣೆಗೆ ಇದು ದಿಕ್ಸೂಚಿ ಎಂದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವರಾದ ಅರಗ ಜ್ಞಾನೆಂದ್ರ, ಆರ್ ಅಶೋಕ್, ಕೋಟ ಶ್ರೀನಿವಾಸ್ ಪೂಜಾರಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಮತ್ತು ಇತರರು ಉಪಸ್ಥಿತರಿದ್ದರು.

ಓದಿರಿ :-   ಶಿವಮೊಗ್ಗದಲ್ಲಿ 4 ಮಕ್ಕಳಿಗೆ ಜನ್ಮ ನೀಡಿದ ತಾಯಿ...!

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 2

advertisement

ನಿಮ್ಮ ಕಾಮೆಂಟ್ ಬರೆಯಿರಿ