ಲಾರಿ-ಕಾರು ಡಿಕ್ಕಿ: ಸ್ಥಳದಲ್ಲೇ ದಂಪತಿ, ಮಗು ಸಾವು

posted in: ರಾಜ್ಯ | 0

ತುಮಕೂರು: ಲಾರಿ- ಕಾರು ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಕಾರಿನಲ್ಲಿದ್ದ ದಂಪತಿ ಹಾಗೂ ಮಗು ಸ್ಥಳದಲ್ಲೇ ಸಾವಿಗೀಡಾದ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಬಿಸೇಗೌಡನದೊಡ್ಡಿಯಲ್ಲಿ ಇಂದು, ಮಂಗಳವಾರ ನಡೆದಿದೆ.

ಮೃತರು ಚನ್ನಪಟ್ಟಣ ಮೂಲದವರು ಎಂದು ಹೇಳಲಾಗಿದ್ದು, ಮೃತರು ಹುಲಿಯೂರುದುರ್ಗ‌ ಕಡೆಯಿಂದ ಮದ್ದೂರು ಕಡೆಗೆ ಕಾರಿನಲ್ಲಿ ಹೋಗುತ್ತಿದ್ದಾಗ ಈ ಅವಘಡ ನಡೆದಿದೆ ಎನ್ನಲಾಗಿದೆ. ಘಟನೆ ಸಂಬಂಧ ಹುಲಿಯೂರು ದುರ್ಗ ಪೋಲಿಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ. ಮೃತ ದೇಹಗಳನ್ನು ಕುಣಿಗಲ್‌ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ಓದಿರಿ :-   ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಸಾಹಿತಿ ಡಿ.ಎಸ್. ನಾಗಭೂಷಣ ನಿಧನ
advertisement

ನಿಮ್ಮ ಕಾಮೆಂಟ್ ಬರೆಯಿರಿ