ಕಾರವಾರ: ಮೊಬೈಲ್ ಜಾಸ್ತಿ ಬಳಸಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಯುವತಿ

ಕಾರವಾರ: ಮೊಬೈಲ್ ಜಾಸ್ತಿ ಬಳಕೆ ಮಾಡದಂತೆ ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಹಬ್ಬುವಾಡದಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಮೇಘ (20) ಎಂದು ಗುರುತಿಸಲಾಗಿದೆ. ಈ ಯುವತಿ ಮೂಲತಃ ಸಿದ್ದಾಪುರದವಳಾಗಿದ್ದು, ಕಾರವಾರದ ಹಬ್ಬುವಾಡದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದಳು ಎಂದು ಹೇಳಲಾಗಿದೆ.

ಪ್ಯಾರಾಮೇಡಿಕಲ್ ಕೋರ್ಸ್ ಮುಗಿಸಿದ್ದ ಯುವತಿ ಮೊಬೈಲ್ ಗೀಳು ಹಚ್ಚಿಕೊಂಡಿದ್ದಳು. ಇದಲ್ಲದೇ ಸ್ನೇಹಿತರೊಂದಿಗೆ ಮೊಬೈಲ್ ನಲ್ಲಿ ಹರಟುತ್ತಿದ್ದರಿಂದ ಪೋಷಕರು ಈ ಬಗ್ಗೆ ಬುದ್ಧಿ ಹೇಳಿದ್ದಾರೆ. ಹೆತ್ತವರ ಮಾತಿನಿಂದ ಕೋಪಗೊಂಡಿದ್ದ ಈಕೆ ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ. ಘಟನೆ ಸಂಬಂಧ ಕಾರವಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಏಪ್ರಿಲ್‌ 20ರಂದು ಕರ್ನಾಟಕಕ್ಕೆ ಪ್ರಧಾನಿ ಮೋದಿ, ಎರಡು ಚುನಾವಣಾ ಸಮಾವೇಶದಲ್ಲಿ ಭಾಗಿ

ನಿಮ್ಮ ಕಾಮೆಂಟ್ ಬರೆಯಿರಿ

advertisement