ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಎಂಬುದು ಕಪೋಲಕಲ್ಪಿತ: ಬಿಜೆಪಿ‌ ರಾಜ್ಯ ಉಸ್ತುವಾರಿ ಅರುಣ ಸಿಂಗ್

ಬೆಂಗಳೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಎಂಬುದು ಕಪೋಲಕಲ್ಪಿತ. ಬೊಮ್ಮಾಯಿ ಅವರೇ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಹೇಳಿದ್ದಾರೆ.
ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಮನ್ ಮ್ಯಾನ್ ಮುಖ್ಯಮಂತ್ರಿ. ಒಳ್ಳೆಯ ಆಡಳಿತ ಕೊಡುತ್ತಿದ್ದಾರೆ. ಹೀಗಾಗಿ ಕಾಲ್ಪನಿಕ ಪ್ರಶ್ನೆಗಳಿಗೆ ಉತ್ತರವಿಲ್ಲ ಎಂದು ಹೇಳಿದರು.

2023ರ ಚುನಾವಣೆ ಬೊಮ್ಮಾಯಿ ನೇತೃತ್ವದಲ್ಲಿ ನಡೆಯತ್ತಾ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅರುಣ ಸಿಂಗ್, ಅವರು ಕಾಮನ್ ಮ್ಯಾನ್, ಜನ ಮತ್ತೆ ಬೊಮ್ಮಾಯಿ ಮುಖ್ಯಮಂತ್ರಿ ಆಗಲಿ ಎಂದು ಬಯಸುತ್ತಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟ ವಿಚಾರ. ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಬೊಮ್ಮಾಯಿ ಚರ್ಚಿಸಬಹುದು ಎಂದು ಹೇಳಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement