ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ತಾಯಿಯನ್ನು ಭೇಟಿಯಾದ ಯೋಗಿ ಆದಿತ್ಯನಾಥ

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ತಮ್ಮ ತಾಯಿಯ ಪಾದಗಳನ್ನು ಸ್ಪರ್ಶಿಸಿ ಆಶೀರ್ವಾದ ಪಡೆಯುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ.
ಅದಕ್ಕೆ “ಮಾ” ಎಂದು ಶೀರ್ಷಿಕೆ ನೀಡಿರುವ ಆದಿತ್ಯನಾಥ ಅವರು ತಮ್ಮ ತಾಯಿ ಸಾವಿತ್ರಾ ದೇವಿ ಅವರೊಂದಿಗಿನ ಚಿತ್ರವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಆದಿತ್ಯನಾಥ್ ಅವರು ಪ್ರಸ್ತುತ ಉತ್ತರಾಖಂಡ್‌ನ ತಮ್ಮ ಜನಿಸಿದ ಊರಾದ ಪೌರಿಯಲ್ಲಿದ್ದಾರೆ, ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ತಮ್ಮ ತಾಯಿಯನ್ನು ಭೇಟಿಯಾಗಿದ್ದಾರೆ. ಬುಧವಾರ ತಮ್ಮ ಸೋದರಳಿಯನ ಕೇಶ ಮುಂಡನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವರು ಮಂಗಳವಾರ ತಮ್ಮ ಗ್ರಾಮಕ್ಕೆ ಭೇಟಿ ನೀಡಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

28 ವರ್ಷಗಳಲ್ಲಿ ಇದು ಮೊದಲ ಬಾರಿಗೆ ಉತ್ತರಾಖಂಡಕ್ಕೆ ಕುಟುಂಬ ಸಮಾರಂಭದಲ್ಲಿ ಭಾಗವಹಿಸಲು ಬಂದಿದ್ದಾರೆ ಎಂದು ವರದಿಯಾಗಿದೆ. ಸಾಂಕ್ರಾಮಿಕ ರೋಗ ಕೊರೊನಾ ಎರಡನೇ ಅಲೆಯ ಸಂದರ್ಭದಲ್ಲಿ ಏಪ್ರಿಲ್ 2020 ರಲ್ಲಿಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರಿಗೆ ಹರಿದ್ವಾರದಲ್ಲಿ ತನ್ನ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ.

ಅಂತಿಮ ಕ್ಷಣದಲ್ಲಿ ನನ್ನ ತಂದೆಯ ದರ್ಶನ ಪಡೆಯಬೇಕೆಂಬ ಉತ್ಕಟ ಬಯಕೆ ನನಗಿತ್ತು. ಆದರೆ, ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ರಾಜ್ಯದ 23 ಕೋಟಿ ಜನರ ಕರ್ತವ್ಯದ ಪ್ರಜ್ಞೆಯನ್ನು ಅನುಸರಿಸಿ, ನಾನು ಅದನ್ನು ಮಾಡಲು ಸಾಧ್ಯವಾಗಲಿಲ್ಲ” ಎಂದು ಮುಖ್ಯಮಂತ್ರಿ ಹೇಳಿದ್ದರು.
ಈ ಹಿಂದೆ ತಮ್ಮ ತವರು ಜಿಲ್ಲೆಯ ಮಹಾಯೋಗಿ ಗುರು ಗೋರಖನಾಥ್ ಸರ್ಕಾರಿ ಕಾಲೇಜಿನಲ್ಲಿ ತಮ್ಮ ಆಧ್ಯಾತ್ಮಿಕ ಗುರು ಮಹಂತ್ ಅವೈದ್ಯನಾಥ್ ಅವರ ಪ್ರತಿಮೆಯನ್ನು ಅನಾವರಣಗೊಳಿಸುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಭಾವುಕರಾಗಿದ್ದರು. ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಅವರು, ತಾವು ಜನಿಸಿದ ಸ್ಥಳದಲ್ಲಿ ತಮ್ಮ ಆಧ್ಯಾತ್ಮಿಕ ಗುರುವಿನ ಪ್ರತಿಮೆಯನ್ನು ಅನಾವರಣಗೊಳಿಸುತ್ತಿರುವುದು ಹೆಮ್ಮೆ ಎನಿಸುತ್ತಿದೆ ಎಂದು ಹೇಳಿದ್ದರು.

ಇಂದಿನ ಪ್ರಮುಖ ಸುದ್ದಿ :-   ಒಡಿಶಾ ರೈಲು ಅಪಘಾತ : 101 ಮೃತದೇಹಗಳ ಗುರುತು ಇನ್ನೂ ಪತ್ತೆಯಾಗಿಲ್ಲ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 3

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement