ಸಂಪುಟ ಸಭೆ ದಿಢೀರ್‌ ಮೇ 11ಕ್ಕೆ ಮುಂದೂಡಿಕೆ: ಸಂಪುಟ ಪುನರ್ರಚನೆ ಸಾಧ್ಯತೆ ದಟ್ಟ

ಬೆಂಗಳೂರು : ಮೇ 5 ರಂದು ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ಸಭೆಯನ್ನು ಹಠಾತ್ ಮುಂದೂಡಲಾಗಿದೆ. ಇದು ಕುತೂಹಲಕ್ಕೆ ಕಾರಣವಾಗಿದೆ.ವಿಧಾನಸೌಧದ ಸಚಿವ ಸಂಪುಟ ಸಭಾಂಗಣದಲ್ಲಿ ಗುರುವಾರ ಬೆಳಿಗ್ಗೆ 11:30ಕ್ಕೆ ಸಂಪುಟ ಸಭೆ ನಿಗದಿಯಾಗಿತ್ತು. ಅದನ್ನು ರದ್ದುಪಡಿಸಿ ಮೇ 11ರ ಬೆಳಿಗ್ಗೆ 11 ಗಂಟೆಗೆ ನಿಗದಿಪಡಿಸಲಾಗಿದೆ ಎಂದು ಸಚಿವ ಸಂಪುಟ ವಿಭಾಗದ ಜಂಟಿ ಕಾರ್ಯದರ್ಶಿ ಬುಧವಾರ ಪರಿಷ್ಕೃತ ಸೂಚನಾ ಪತ್ರ ಹೊರಡಿಸಿದ್ದಾರೆ‌.
ಪೂರ್ವ ನಿಗದಿಯಾಗಿದ್ದ ಸಂಪುಟ ಸಭೆ ಮೇ 11ರಂದು ನಡೆಯಲಿದ್ದು, ಮೇ 5 ರಿಂದ 10ರ ಅವಧಿಯಲ್ಲಿ ಸಂಪುಟ ವಿಸ್ತರಣೆ ಅಥವಾ ಪುನರ್ರಚನೆ ಸಾಧ್ಯತೆ ದಟ್ಟವಾಗಿದೆ.

ಪ್ರಧಾನಿ ನರೇಂದ್ರ‌ ಮೋದಿ ವಿದೇಶದಿಂದ ವಾಪಸ್ ಆದ ಬಳಿಕ ರಾಜ್ಯ ರಾಜಕಾರಣಕ್ಕೆ ಸಂಬಂಧಪಟ್ಟ ಅಸ್ಪಷ್ಟತೆ ಕೊನೆಯಾಗಲಿದೆ.‌ ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನರ್ ರಚನೆ ಕುರಿತು ಬಿಜೆಪಿಯಲ್ಲಿ ಚರ್ಚೆ ನಡೆಯುತ್ತಿದೆ. ಮೇ 10ರೊಳಗೆ ಈ ಪ್ರಕ್ರಿಯೆ ಪೂರ್ಣಗೊಳಿಸುವ ಸಾಧ್ಯತೆ ಇದೆ. ಈ ಕಾರಣದಿಂದಾಗಿಯೇ ಸಂಪುಟ ಸಭೆ ಮುಂದೂಡಿರುವ ಸಾಧ್ಯತೆ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಂಪುಟ ಸಭೆ ಮುಂದೂಡಿಕೆಯಾಗಿದೆ ಎಂದು ಬಿಜೆಪಿ ಮೂಲಗಳು ಹೇಳುತ್ತಿವೆ.

ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು; ಏಪ್ರಿಲ್‌ 19 ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement