ಸಹಾಯಕ ಪ್ರಾಧ್ಯಾಪಕರ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಪ್ರೊ. ಎಚ್.ನಾಗರಾಜು ಅಮಾನತು

ಮೈಸೂರು: ಇತ್ತೀಚಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನಡೆದಿದ್ದ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ವಿಶ್ವ ವಿದ್ಯಾಲಯದ ಭೂಗೋಳ ಶಾಸ್ತ್ರ ಅಧ್ಯಯನ ವಿಭಾಗದ ಪ್ರೊ. ಎಚ್.ನಾಗರಾಜ ಅವರನ್ನು ಪೊಲೀಸರು ಬಂಧಿಸಿದ್ದರು. ಈಗ ಅವರನ್ನು ಮೈಸೂರು ವಿವಿ ಅಮಾನತುಗೊಳಿಸಿ ಆದೇಶಿಸಿದೆ.

ಈ ಕುರಿತು ಮೈಸೂರು ವಿಶ್ವ ವಿದ್ಯಾಲಯದ ಕುಲಸಚಿವರು ಆದೇಶ ಹೊರಡಿಸಿದ್ದು, ದಿನಾಂಕ 27-04-2022ರಂದು ಮಲ್ಲೇಶ್ವರಂ ಠಾಣೆ ಪೊಲೀಸರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೀಡಿದಂತ ದೂರಿನ ಹಿನ್ನಲೆಯಲ್ಲಿ, ಮೈಸೂರು ವಿಶ್ವ ವಿದ್ಯಾಲಯ ಭೂಗೋಳ ಶಾಸ್ತ್ರ ಅಧ್ಯಯನ ವಿಭಾಗದ ಪ್ರೊ. ಎಚ್ ನಾಗರಾಜ್ ಅವರನ್ನು ಬಂಧಿಸಿದ್ದಾರೆ.
ದಿನಾಂಕ 27-04-2022ರಿಂದ ಪೂರ್ವಾನ್ವಯವಾಗುವಂತೆ, ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ, ಪ್ರೊ. ಎಚ್ ನಾಗರಾಜ್, ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ನಾಗರಾಜು ಅವರು ಜಿಯಾಗ್ರಫಿ ಪ್ರೊಫೆಸರ್ ಆಗಿದ್ದು, ಪ್ರಶ್ನೆ ಪತ್ರಿಕೆ ಲೀಕ್ ಸಂಬಂಧ ಮಲ್ಲೇಶ್ವರಂ ಪೊಲೀಸರಿಂದ ಬಂಧಿತರಾಗಿದ್ದರು ಧಾರವಾಡ ಕರ್ನಾಟಕ ಯೂನಿವರ್ಸಿಟಿಯ ಮೌಲ್ಯಮಾಪನ ರಿಜಿಸ್ಟ್ರಾರ್ ಆಗಿದ್ದ ಅವರನ್ನು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ನಿರ್ಲಕ್ಷ್ಯ ಹಿನ್ನೆಲೆಯಲ್ಲಿ ಬಂಧನ ಮಾಡಲಾಗಿತ್ತು. ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ನಾಗರಾಜ್ ತಂಗಿ ಮಗಳು ಕುಸುಮಳನ್ನು ಸಹ ಪೊಲೀಸರು ವಶಕ್ಕೆ ಪಡೆದಿದ್ದರು.

ಪ್ರಮುಖ ಸುದ್ದಿ :-   ವೀಡಿಯೊ..| ಕುಮಟಾ : ಅಘನಾಶಿನಿ ನದಿಗೆ ಅಡ್ಡವಾಗಿ ನಿರ್ಮಾಣವಾಗುತ್ತಿದ್ದ ಸೇತುವೆಯ ಸ್ಲ್ಯಾಬ್‌ ಕುಸಿತ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement