ಸಂಪುಟ ಸಭೆ ದಿಢೀರ್‌ ಮೇ 11ಕ್ಕೆ ಮುಂದೂಡಿಕೆ: ಸಂಪುಟ ಪುನರ್ರಚನೆ ಸಾಧ್ಯತೆ ದಟ್ಟ

ಬೆಂಗಳೂರು : ಮೇ 5 ರಂದು ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ಸಭೆಯನ್ನು ಹಠಾತ್ ಮುಂದೂಡಲಾಗಿದೆ. ಇದು ಕುತೂಹಲಕ್ಕೆ ಕಾರಣವಾಗಿದೆ.ವಿಧಾನಸೌಧದ ಸಚಿವ ಸಂಪುಟ ಸಭಾಂಗಣದಲ್ಲಿ ಗುರುವಾರ ಬೆಳಿಗ್ಗೆ 11:30ಕ್ಕೆ ಸಂಪುಟ ಸಭೆ ನಿಗದಿಯಾಗಿತ್ತು. ಅದನ್ನು ರದ್ದುಪಡಿಸಿ ಮೇ 11ರ ಬೆಳಿಗ್ಗೆ 11 ಗಂಟೆಗೆ ನಿಗದಿಪಡಿಸಲಾಗಿದೆ ಎಂದು ಸಚಿವ ಸಂಪುಟ ವಿಭಾಗದ ಜಂಟಿ ಕಾರ್ಯದರ್ಶಿ ಬುಧವಾರ ಪರಿಷ್ಕೃತ … Continued

ಅಚ್ಚರಿಯ ಕ್ರಮದಲ್ಲಿ ರೆಪೊ ದರ ಹೆಚ್ಚಳ ಮಾಡಿದ ಆರ್‌ಬಿಐ, ತಕ್ಷಣದಿಂದಲೇ ಜಾರಿ: ಸಾಲದ ಇಎಂಐಗಳಲ್ಲಿ ಹೆಚ್ಚಳ ಸಾಧ್ಯತೆ

ನವದೆಹಲಿ: ರೆಪೊ ದರದಲ್ಲಿ 40 ಮೂಲಾಂಶ ಹೆಚ್ಚಳ ಮಾಡಲಾಗಿದ್ದು, ಶೇ 4.40ಕ್ಕೆ ನಿಗದಿಪಡಿಸಲಾಗಿದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಪ್ರಕಟಿಸಿದ್ದಾರೆ. ಹಾಗೂ ಇದು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ. ದೆಹಲಿಯಲ್ಲಿ ಇಂದು, ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತಕ್ಷಣದಿಂದ ಜಾರಿಗೆ ಬರುವಂತೆ ಪಾಲಿಸಿ ರೆಪೊ ದರಗಳನ್ನು 40 ಮೂಲಾಂಶಗಳಷ್ಟು … Continued

ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಲು ಪೊಲೀಸ್ ಠಾಣೆಗೆ ಹೋದ ಬಾಲಕಿ ಮೇಲೆ ಪೊಲೀಸ್‌ ಅಧಿಕಾರಿಯಿಂದಲೇ ಅತ್ಯಾಚಾರ: ದೂರು ದಾಖಲು

ಲಲಿತ್‌ಪುರ (ಉತ್ತರ ಪ್ರದೇಶ) : ನಾಲ್ಕು ಜನರಿಂದ ಅತ್ಯಾಚಾರಕ್ಕೊಳಗಾದ 13 ವರ್ಷದ ಬಾಲಕಿಯ ಮೇಲೆ ಪ್ರಕರಣ ದಾಖಲಿಸಲು ಹೋಗಿದ್ದ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಮತ್ತೆ ಅತ್ಯಾಚಾರವೆಸಗಿದ್ದಾನೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಉತ್ತರ ಪ್ರದೇಶದ ಲಲಿತ್‌ಪುರದಲ್ಲಿ ಪೊಲೀಸ್ ಠಾಣೆಯ ಉಸ್ತುವಾರಿ ಸೇರಿದಂತೆ ಐವರ ವಿರುದ್ಧ ಎಫ್‌ಐಆರ್ ದಾಖಲಿಸಿದ ನಂತರ ಪೊಲೀಸರು ಮೂವರನ್ನು … Continued

ಬೇಸಿಗೆ ಉಷ್ಣತೆ ಮತ್ತಷ್ಟು ಹೆಚ್ಚಾದರೆ ಶಾಲೆಯ ಬೇಸಿಗೆ ರಜೆ ವಿಸ್ತರಣೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಬಿಸಿಲಿನ ತಾಪ ಇದೇ ರೀತಿ ಮುಂದುವರಿದಲ್ಲಿ ಮೇ 16ರಿಂದ ಆರಂಭವಾಗಬೇಕಿರುವ 2022-23ನೇ ಸಾಲಿನ ಶೈಕ್ಷಣಿಕ ಅವಧಿಯನ್ನು ಮುಂದೂಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯು ಮೇ 16 ರಿಂದ ಶಾಲೆ ಆರಂಭಿಸಲು ನಿರ್ಧರಿಸಿದ್ದು, ಈ ಸಂಬಂಧ ಸುತ್ತೋಲೆ ಸಹ ಹೊರಡಿಸಲಾಗಿದೆ. ಪ್ರತಿ ವರ್ಷ ಮೇ ಕೊನೆಯಲ್ಲಿ ಶಾಲೆ … Continued

ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ತಾಯಿಯನ್ನು ಭೇಟಿಯಾದ ಯೋಗಿ ಆದಿತ್ಯನಾಥ

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ತಮ್ಮ ತಾಯಿಯ ಪಾದಗಳನ್ನು ಸ್ಪರ್ಶಿಸಿ ಆಶೀರ್ವಾದ ಪಡೆಯುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ. ಅದಕ್ಕೆ “ಮಾ” ಎಂದು ಶೀರ್ಷಿಕೆ ನೀಡಿರುವ ಆದಿತ್ಯನಾಥ ಅವರು ತಮ್ಮ ತಾಯಿ ಸಾವಿತ್ರಾ ದೇವಿ ಅವರೊಂದಿಗಿನ ಚಿತ್ರವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಆದಿತ್ಯನಾಥ್ ಅವರು ಪ್ರಸ್ತುತ ಉತ್ತರಾಖಂಡ್‌ನ ತಮ್ಮ ಜನಿಸಿದ ಊರಾದ ಪೌರಿಯಲ್ಲಿದ್ದಾರೆ, ಅವರು … Continued

ಹಿರಿಯ ರಂಗಭೂಮಿ ಕಲಾವಿದೆ ಲಕ್ಷ್ಮೀ ಬಾಯಿ ಏಣಗಿ ನಿಧನ

ಧಾರವಾಡ: ಖ್ಯಾತ ರಂಗಭೂಮಿ ಕಲಾವಿದೆ ಹಾಗೂ ದಿ. ಏಣಗಿ ಬಾಳಪ್ಪ ಅವರ ಪತ್ನಿ ಶ್ರೀಮತಿ ಲಕ್ಷ್ಮಿಬಾಯಿ ಏಣಗಿ (96) ಮಂಗಳವಾರ ಇಲ್ಲಿನ ರಜತಗಿರಿ ನಿವಾಸದಲ್ಲಿ ನಿಧನರಾದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಗುಬ್ಬಿ ವೀರಣ್ಣ ಪ್ರಶಸ್ತಿ, ನೂರಕ್ಕೂ ಹೆಚ್ಚು ರಂಗ ಸನ್ಮಾನಗಳಿಗೆ ಭಾಜನರಾಗಿದ್ದರು. 1940-50 ರ ದಶಕದಲ್ಲಿ ಕನ್ನಡ ರಂಗಭೂಮಿಯಲ್ಲಿ ನಟಿಯಾಗಿ ಹೆಸರು ಪಡೆದಿದ್ದ ಅವರು ಕರ್ನಾಟಕದ … Continued

ಮಹಾರಾಷ್ಟ್ರ ಸಿಎಂ ಮನೆ ಎದುರು ಹನುಮಾನ್ ಚಾಲೀಸಾ ಪಠಣ ಪ್ರಕರಣ: ಸಂಸದ ನವನೀತ್ ರಾಣಾ, ಶಾಸಕ ರವಿ ರಾಣಾಗೆ ಮುಂಬೈ ಕೋರ್ಟಿನಿಂದ ಜಾಮೀನು

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಮನೆಯ ಹೊರಗೆ ಹನುಮಾನ್ ಚಾಲೀಸಾ ಪಠಿಸಲು ಯತ್ನಿಸಿದ ಆರೋಪದ ಮೇಲೆ ದೇಶದ್ರೋಹದ ಆರೋಪದಲ್ಲಿ ಬಂಧಿಸಲ್ಪಟ್ಟಿದ್ದಮಹಾರಾಷ್ಟ್ರ ಶಾಸಕ ರವಿ ರಾಣಾ ಮತ್ತು ಸಂಸದೆ ನವನೀತ್ ಕೌರ್ ರಾಣಾ ದಂಪತಿಗೆ ಮುಂಬೈ ಸೆಷನ್ಸ್ ನ್ಯಾಯಾಲಯ ಬುಧವಾರ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ. ಬಾರ್ & ಬೆಂಚ್ ಪ್ರಕಾರ, ತಲಾ 50,000 ರೂ.ಗಳ … Continued

ದೆಹಲಿಯಿಂದ ಸೂಚನೆ ಬಂದ ಬಳಿಕ ಸಚಿವ ಸಂಪುಟ ವಿಸ್ತರಣೆ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ದೆಹಲಿಗೆ ಹೋದ ನಂತರ ತಿಳಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಹಾಗಾಗಿ ಹೈಕಮಾಂಡ್ ಸಂದೇಶ ಬಂದ ನಂತರವೇ ಮಂತ್ರಿ ಮಂಡಳದ ವಿಸ್ತರಣೆ ಕುರಿತು ಚಿಂತನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಆರ್.ಟಿ.ನಗರದಲ್ಲಿರುವ ತಮ್ಮ ಖಾಸಗಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮಿತ್ … Continued

ಇನ್ಮುಂದೆ ಉಚಿತ ಟ್ವಿಟ್ಟರ್‌ ಅಂತ್ಯವೇ? ವಾಣಿಜ್ಯ, ಸರ್ಕಾರಿ ಟ್ವಿಟ್ಟರ್‌ ಬಳಕೆದಾರರಿಗೆ ಶುಲ್ಕ ವಿಧಿಸಬಹುದು ಎಂದ ಎಲೋನ್ ಮಸ್ಕ್

ಸ್ಯಾನ್ ಫ್ರಾನ್ಸಿಸ್ಕೋ: ಎಲೋನ್ ಮಸ್ಕ್ ಅವರು ಟ್ವಿಟರ್ ಅನ್ನು ಪೇ ವಾಲ್ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ನಂತೆ ಮಾಡುವ ಯೋಜನೆಗಳನ್ನು ಬಹಿರಂಗಪಡಿಸಿದ್ದರಿಂದ ಅವರ ಅಡಿಯಲ್ಲಿ ಟ್ವಿಟರ್ ಹೇಗಿರುತ್ತದೆ ಎಂಬುದರ ಪ್ರಮುಖ ಸುಳಿವನ್ನು ನೀಡಿದ್ದಾರೆ. ಟ್ವಟ್ಟರ್‌ ಸಾಂದರ್ಭಿಕ ಬಳಕೆದಾರರಿಗೆ ಯಾವಾಗಲೂ ಉಚಿತವಾಗಿರುತ್ತದೆ ಆದರೆ ವಾಣಿಜ್ಯ ಮತ್ತು ಸರ್ಕಾರಿ ಬಳಕೆದಾರರಿಗೆ ಸ್ವಲ್ಪ ಶುಲ್ಕವನ್ನು ವಿಧಿಸಬಹುದು ಎಂದು ಎಲೋನ್ ಮಸ್ಕ್ ಮಂಗಳವಾರ … Continued

ಮಸೀದಿಗಳಲ್ಲಿ ಆಜಾನ್‌ಗೆ ಧ್ವನಿವರ್ಧಕಗಳ ಬಳಕೆ ನಿಲ್ಲಿಸಲು ಗಡುವು ಕೊನೆಗೊಂಡ ಬೆನ್ನಲ್ಲೇ ಬಾಳ್ ಠಾಕ್ರೆ ಹಳೆ ವೀಡಿಯೊ ತುಣುಕು ಹಂಚಿಕೊಂಡ ರಾಜ್ ಠಾಕ್ರೆ

ಮುಂಬೈ: ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಅವರು ವರ್ಷಗಳ ಹಿಂದೆ ಶಿವಸೇನಾ ಸಂಸ್ಥಾಪಕ ಬಾಳ್ ಠಾಕ್ರೆ ಮಾಡಿದ ಭಾಷಣದ ಕಿರು ತುಣುಕನ್ನು ಹಂಚಿಕೊಂಡಿದ್ದಾರೆ. 36 ಸೆಕೆಂಡುಗಳ ಸುದೀರ್ಘ ವೀಡಿಯೊದಲ್ಲಿ, ಬಾಳ್ ಠಾಕ್ರೆ ಅವರು ಧ್ವನಿವರ್ಧಕಗಳ ಬಳಕೆಯ ವಿರುದ್ಧ ಎಚ್ಚರಿಕೆ ನೀಡುತ್ತಾರೆ ಮತ್ತು ಮಹಾರಾಷ್ಟ್ರದಲ್ಲಿ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ “ರಸ್ತೆಗಳಲ್ಲಿ ನಮಾಜ್ನಿಲ್ಲುತ್ತದೆ” ಎಂದು ಹೇಳುವುದನ್ನು … Continued