ಪಿಎಸ್‌ಐ ನೇಮಕ ಪರೀಕ್ಷೆ ಹಗರಣ: ಇಬ್ಬರು ಪೊಲೀಸ್‌ ಅಧಿಕಾರಿಗಳನ್ನು ವಶಕ್ಕೆ ಪಡೆದ ಸಿಐಡಿ ಅಧಿಕಾರಿಗಳು

posted in: ರಾಜ್ಯ | 0

ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಹಗರಣದಲ್ಲಿ ಈಗ ಪೊಲೀಸರ ಬಂಧನವೂ ಆಗುತ್ತಿದ್ದು, ಈ ಪ್ರಕರಣದ ಸಂಬಂಧ ರಾಯಚೂರು ಜಿಲ್ಲೆ ಲಿಂಗಸೂಗೂರು ಡಿವೈ‌ಎಸ್‌ಪಿ ಮಲ್ಲಿಕಾರ್ಜುನ ಸಾಲಿ ಹಾಗೂ ಕಲಬುರಗಿ ಬೆರಳಚ್ಚು ವಿಭಾಗದ ಸಿಪಿಐ ಆನಂದ ಮೇತ್ರೆ ಬಂಧನವಾಗಿದೆ. ನಿನ್ನೆಯಿಂದ ಸುದೀರ್ಘವಾಗಿ ತೀವ್ರ ವಿಚಾರಣೆ ನಡೆಸಿದ ಸಿಐಡಿ ತಂಡ ಇಂದು, ಗುರುವಾರ ಇಬ್ಬರೂ ಅಧಿಕಾರಿಗಳನ್ನು ವೈದ್ಯಕೀಯ ತಪಾಸಣೆಗೆ … Continued

ಮೇ 7ರಂದು ರಾಜ್ಯದಲ್ಲಿ ಸಂಚಾರಿ ಪಶು ಚಿಕಿತ್ಸಾಲಯ ಲೋಕಾರ್ಪಣೆ, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 1 ಅಂಬುಲೆನ್ಸ್ : ಸಚಿವ ಪ್ರಭು ಚವ್ಹಾಣ

posted in: ರಾಜ್ಯ | 0

ಬೆಂಗಳೂರು: ಪಶುಸಂಗೋಪನ ಇಲಾಖೆಯಿಂದ ಸಂಚಾರಿ ಪಶು ಚಿಕಿತ್ಸಾಲಯದ ಲೋಕಾರ್ಪಣೆ ಮೇ 7 ರಂದು ನಡೆಯಲಿದೆ ಎಂದು ಪಶು ಸಂಗೋಪನ ಸಚಿವ ಪ್ರಭು ಚವ್ಹಾಣ ಹೇಳಿದ್ದಾರೆ. ವಿಕಾಸ ಸೌಧದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 7 ರಂದು ಕೇಂದ್ರ ಸರ್ಕಾರದಿಂದ ಕೊಡಲ್ಪಟ್ಟ 275 ಪಶು ಸಂಜೀವಿನಿ ಅಂಬುಲೆನ್ಸ್ ಲೋಕಾರ್ಪಣೆ ನಡೆಯಲಿದೆ. ಅಲ್ಲದೆ, 1962 ಹೆಲ್ಪ್ ಲೈನ್ … Continued

8,000 ಮೀಟರ್‌ಗಳಿಗಿಂತ ಹೆಚ್ಚು ಎತ್ತರದ ಐದು ಪರ್ವತ ಶಿಖರಗಳನ್ನು ಏರಿದ ಮೊದಲ ಭಾರತೀಯ ಮಹಿಳೆ ಎನಿಸಿಕೊಂಡ ಪ್ರಿಯಾಂಕಾ ಮೋಹಿತೆ…!

ಮುಂಬೈ: ಪಶ್ಚಿಮ ಮಹಾರಾಷ್ಟ್ರದ ಸತಾರಾ ಮೂಲದ ಪ್ರಿಯಾಂಕಾ ಮೋಹಿತೆ ಅವರು ಗುರುವಾರ ಕಾಂಚನಜುಂಗಾ ಪರ್ವತವನ್ನು ಏರಿದ ನಂತರ 8,000 ಮೀಟರ್‌ಗಿಂತ ಹೆಚ್ಚಿನ ಎತ್ತರದ ಐದು ಶಿಖರಗಳನ್ನು ಏರಿದ ಮೊದಲ ಭಾರತೀಯ ಮಹಿಳೆ ಎನಿಸಿಕೊಂಡಿದ್ದಾರೆ. 2020ರ ತೇನ್ಸಿಂಗ್ ನೊರ್ಗೆ ಸಾಹಸ ಪ್ರಶಸ್ತಿ ಪುರಸ್ಕೃತೆ ಪ್ರಿಯಾಂಕಾ ಮೋಹಿತೆ (30) ಅವರು ಭೂಮಿಯ ಮೂರನೇ ಅತಿ ಎತ್ತರದ ಪರ್ವತವಾದ ಕಾಂಚನಜುಂಗಾ … Continued

ಪತ್ನಿ, ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ…!

ಮಲಪ್ಪುರಂ: ಕೇರಳದಲ್ಲಿ ಮತ್ತೊಂದು ದುರಂತ ಘಟನೆಯಲ್ಲಿ, ವ್ಯಕ್ತಿಯೊಬ್ಬ ತನ್ನ ಹೆಂಡತಿ ಮತ್ತು ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ಮೇ 5, ಗುರುವಾರ ನಡೆದಿದ್ದು, ಅವರ ಮಕ್ಕಳಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಮಲಪ್ಪುರಂ ಜಿಲ್ಲೆಯ ಪೆರಿಂತಲ್ಮನ್ನಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ವ್ಯಕ್ತಿ ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿದ್ದ. ಮೊಹಮ್ಮದ್ … Continued

ಚಲಿಸುತ್ತಿದ್ದ ಕಾರಿನ ಜೊತೆ ಮಹಿಳೆಯನ್ನು ಎಳೆದ ದುರುಳರು, ಮಹಿಳೆಗೆ ಗಾಯ…ವೀಕ್ಷಿಸಿ

ನವದೆಹಲಿ: ಮಹಿಳೆಯೊಬ್ಬರ ಮೇಲೆ ಇಬ್ಬರು ವ್ಯಕ್ತಿಗಳು ಹಲ್ಲೆ ನಡೆಸಿ ಚಲಿಸುತ್ತಿರುವ ಕಾರಿನ ಜೊತೆಗೆ  ಅವರನ್ನು ಎಳೆದೊಕೊಂಡ ಹೋದ  ಪರಿಣಾಮ ಅವರು ಗಾಯಗೊಂಡ   ಅಮಾನುಷ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ. ದೆಹಲಿಯ ಅಮರ್ ಕಾಲೋನಿಯಲ್ಲಿ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಪತ್ರಕರ್ತರೊಬ್ಬರು ಈ ಘಟನೆ ವೀಡಿಯೋವನ್ನು ಟ್ವೀಟರ್‌ನಲ್ಲಿ ಪ್ರಕಟಿಸಿ ಹಲ್ಲೆ ಮಾಡಿದ ವ್ಯಕ್ತಿಗಳ ವಿರುದ್ಧ ಕ್ರಮ … Continued

ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವರನ ಕೈಗೇ ಕೋಳ ತೊಡಿಸಿ, ಜೈಲಿಗೆ ಕಳುಹಿಸಿದ ಮಹಿಳಾ ಸಬ್ ಇನ್ಸ್ ಪೆಕ್ಟರ್….!

ಗುವಾಹತಿ: ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವರನ ಕೈಗೇ ಆ ಡಬಲ್ ಸ್ಟಾರ್ ಮಹಿಳಾ ಸಬ್ ಇನ್ಸ್ ಪೆಕ್ಟರ್ ಕೋಳ ತೊಡಿಸಿ, ಜೈಲಿಗೆ ಕಳುಹಿಸಿದ್ದಾರೆ.ಅಸ್ಸಾಂನ ಡೇರ್‌ಡೆವಿಲ್ ಮಹಿಳಾ ಪೋಲೀಸ್ ಅಧಿಕಾರಿ, ಕೆಲವು ತಿಂಗಳ ಹಿಂದೆ ಶಾಸಕರೊಬ್ಬರನ್ನು ಎದರಿಸುವ ಮೂಲಕ ಮಾಧ್ಯಮಗಳ ಗಮನ ಸೆಳೆದಿದ್ದರು, ಈಗ ವಂಚನೆ ಆರೋಪದ ಮೇಲೆ ತಾನು ಮದುವೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ವರನನ್ನೇ ಬಂಧಿಸಿದ್ದಾರೆ…! ತನ್ನ … Continued

ಸಾಂಕ್ರಾಮಿಕ ರೋಗ ಮುಗಿದ ನಂತರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ: ಅಮಿತ್ ಶಾ

ಕೋಲ್ಕತ್ತಾ: ಎರಡು ದಿನಗಳ ಬಂಗಾಳ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೋವಿಡ್ ಸಾಂಕ್ರಾಮಿಕ ರೋಗ ಮುಗಿದ ನಂತರ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಿಎಎ ಜಾರಿಗೊಳಿಸುವುದಿಲ್ಲ ಎಂದು ವದಂತಿಗಳನ್ನು ಹಬ್ಬಿಸುತ್ತಿದೆ, ಆದರೆ ಕೊರೊನಾ ಮುಗಿದ ನಂತರ ನಾವು ಸಿಎಎ ಜಾರಿಗೊಳಿಸುತ್ತೇವೆ ಎಂದು ನಾನು … Continued

ಭಾರತದಲ್ಲಿ 47 ಲಕ್ಷ ಕೋವಿಡ್ ಸಾವುಗಳು ಎಂದು ಗಣಿತದ ಮಾದರಿ ಬಳಸಿ ಹೇಳಿದ ಡಬ್ಲ್ಯುಎಚ್‌ಒ: ಇದು ಸಂಪೂರ್ಣ ಅವೈಜ್ಞಾನಿಕ ಎಂದು ತಿರಸ್ಕರಿಸಿದ ಭಾರತ

ನವದೆಹಲಿ: ಕೋವಿಡ್ ಸಾವಿನ ಸಂಖ್ಯೆಯನ್ನು ಲೆಕ್ಕಾಚಾರ ಮಾಡಲು ವಿಶ್ವ ಆರೋಗ್ಯ ಸಂಸ್ಥೆ ಗಣಿತದ ಮಾದರಿಯ ಬಳಕೆಯನ್ನು ಭಾರತ ಬಲವಾಗಿ ಆಕ್ಷೇಪಿಸಿದೆ. ಈ ಸಮೀಕ್ಷೆಯು ಸಂಪೂರ್ಣ ಅವಾಸ್ತವಿಕವಾಗಿದೆ ಎಂದು ಭಾರತ ಹೇಳಿದೆ. ದೇಶವು ಜನನ ಮತ್ತು ಮರಣಗಳ ನೋಂದಣಿಯ “ಅತ್ಯಂತ ದೃಢವಾದ” ವ್ಯವಸ್ಥೆಯನ್ನು ಭಾರತದ ಹೊಂದಿದೆ ಎಂದು ಪ್ರತಿಪಾದಿಸುತ್ತಾ, ಕೇಂದ್ರ ಆರೋಗ್ಯ ಸಚಿವಾಲಯವು ತನ್ನ ಖಂಡನೆಯಲ್ಲಿ, ವಿಶ್ವ … Continued

ನೇಮಕಕ್ಕೂ ಮುನ್ನ ಪಿಎಸ್‌ಐ ಸಮವಸ್ತ್ರ ಧರಿಸಿ ಪೋಸ್‌ ಕೊಟ್ಟಿದ್ದ ಪೊಲೀಸ್‌ ಪೇದೆ ಅಮಾನತು

posted in: ರಾಜ್ಯ | 0

ಬೆಂಗಳೂರು: ಪಿಎಸ್‌ಐ ನೇಮಕಾತಿ ಆದೇಶಕ್ಕೂ ಮುನ್ನವೇ ಹಾವೇರಿ ತಾಲೂಕಿನ ಗುಡಸಲಕೊಪ್ಪ ಗ್ರಾಮದ ಬಸನಗೌಡ ಕರೇಗೌಡ, ಸಮವಸ್ತ್ರ ಧರಿಸಿ ತಮ್ಮೂರಿನ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಈ ಬಗ್ಗೆ ಪರಿಶೀಲನೆ ನಡೆಸಿದ್ದ ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್. ಅನುಚೇತ್, ಕಾನ್‌ಸ್ಟೆಬಲ್ ಬಸನಗೌಡನನ್ನು ಅಮಾನತು ಮಾಡಿದ್ದಾರೆ. ಪಿಎಸ್‌ಐ ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ಬಸನಗೌಡ ಅವರನ್ನೂ ವಿಚಾರಣೆ ಮಾಡಿದ್ದರು. … Continued

ಸಿಎಂ ಕಾರ್ಯದರ್ಶಿ, ಬಿಬಿಎಂಪಿ ಆಯುಕ್ತ ಸೇರಿ 17 ಐಎಎಸ್‌ ಅಧಿಕಾರಿಗಳ ವರ್ಗಾವಣೆ

posted in: ರಾಜ್ಯ | 0

ಬೆಂಗಳೂರು: ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸೇರಿದಂತೆ 17 ಐಎಎಸ್‌ ಅಧಿಕಾರಿಗಳನ್ನು ಗುರುವಾರ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಬಿಬಿಎಂಪಿ ಆಯುಕ್ತರಾಗಿದ್ದ ಗೌರವ್ ಗುಪ್ತಾ ಅವರನ್ನು ಮೌಲಭೂತ ಸೌಕರ್ಯ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದ್ದು, ಅವರ ಸ್ಥಾನಕ್ಕೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ತುಷಾರ ಗಿರಿನಾಥ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಮುಖ್ಯಮಂತ್ರಿ ಬೊಮ್ಮಾಯಿ … Continued