ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 4 ದಿನಗಳ ಕಾಲ ಮಳೆ ಹೆಚ್ಚಾಗುವ ಸಾಧ್ಯತೆ: ಮುನ್ಸೂಚನೆ

ಬೆಂಗಳೂರು: ಇಂದಿನಿಂದ ನಾಲ್ಕು ದಿನಗಳ ಕಾಲ ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಇಂದು ಕೂಡ ರಾಜ್ಯಾದ್ಯಂತ ಹಲವೆಡೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ವಿಶೇಷವಾಗಿ ಇಂದಿನಿಂದ (ಮೇ 5ರಿಂದ) ಕರಾವಳಿ ಜಿಲ್ಲೆಗಳು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ.
ಇಂದು ಕೂಡ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಮುಂದಿನ ನಾಲ್ಕು ದಿನಗಳ ಕಾಲ ಬೆಂಗಳೂರು, ಕರಾವಳಿ, ಮಲೆನಾಡಿನಲ್ಲಿ ಮಳೆ ಜೋರಾಗಿ ಬೀಳುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ಮೇ 9ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.
ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೀತಿಯೇ ಸಿದ್ದು, ಪರಮೇಶ್ವರ ವೀಡಿಯೊ ಹೊರಬರಬಹುದು : ರಮೇಶ ಜಾರಕಿಹೊಳಿ

 

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement