ಗಾಳಿ ತುಂಬುವ ವೇಳೆ ಜೆಸಿಬಿ ಟೈರ್ ಸ್ಫೋಟ: ಗಾಳಿಯಲ್ಲಿ ಹಾರಿಬಿದ್ದು ಇಬ್ಬರ ಸಾವು | ದೃಶ್ಯ ಸಿಸಿಟಿವಿಯಲ್ಲಿ ಸೆರೆ

ರಾಯ್ಪುರ: ಛತ್ತೀಸ್‌ಗಢದ ರಾಯ್‌ಪುರ ಜಿಲ್ಲೆಯ ವಾಹನ ವರ್ಕ್‌ಶಾಪ್‌ನಲ್ಲಿ ಜೆಸಿಬಿಗೆ ಗಾಳಿ ತುಂಬುತ್ತಿದ್ದಾಗ ಟೈರ್ ಸ್ಫೋಟಗೊಂಡು ಇಬ್ಬರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಯ್‌ಪುರದ ಸಿಲ್ತಾರಾ ಕೈಗಾರಿಕಾ ಪ್ರದೇಶದಲ್ಲಿ ಮೇ 3 ರಂದು ಸಂಭವಿಸಿದ ಈ ಘಟನೆಯು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ದೊಡ್ಡ ಟೈರ್‌ನಲ್ಲಿ ಕೆಲಸಗಾರ ಗಾಳಿ ತುಂಬುತ್ತಿರುವುದನ್ನು ವೀಡಿಯೊ ತುಣುಕಿನಲ್ಲಿ ತೋರಿಸಲಾಗಿದೆ. ನಂತರ ಇನ್ನೊಬ್ಬ ವ್ಯಕ್ತಿ ಬಂದು ಗಾಳಿಯ ಪ್ರಮಾಣವನ್ನು ಪರೀಕ್ಷಿಸಲು ಟೈರ್ ಅನ್ನು ಒತ್ತುತ್ತಾನೆ, ಅದು ಸ್ಫೋಟಕ್ಕೆ ಕಾರಣವಾಗುತ್ತದೆ.

ಸ್ಫೋಟದಲ್ಲಿ ಇಬ್ಬರು ವ್ಯಕ್ತಿಗಳು ಹಾರಿಹೋಗಿರುವುದನ್ನು ವೀಡಿಯೊ ದೃಶ್ಯಗಳು ತೋರಿಸುತ್ತವೆ.
ವರದಿಗಳ ಪ್ರಕಾರ, ಸ್ಫೋಟವು ಎಷ್ಟು ತೀವ್ರವಾಗಿತ್ತು ಎಂದರೆ ಟೈರ್ ಬಳಿ ಇದ್ದ ಇಬ್ಬರೂ ಉದ್ಯೋಗಿಗಳು ಗಾಳಿಯಲ್ಲಿ ಹಾರಿ ಬಿದ್ದಿದ್ದಾರೆ.

ಮಂಗಳವಾರ ಮಧ್ಯಾಹ್ನ 3:30ರ ಸುಮಾರಿಗೆ ಇಬ್ಬರೂ ಜೆಸಿಬಿಯ ಟೈರ್‌ಗಳಲ್ಲಿ ಗಾಳಿ ತುಂಬುತ್ತಿದ್ದರು. ಇದ್ದಕ್ಕಿದ್ದಂತೆ ಟೈರ್ ಸಿಡಿಯಿತು. ಇವರಲ್ಲಿ ಒಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಮಧ್ಯಪ್ರದೇಶದ ರೇವಾ ಜಿಲ್ಲೆಯ ಇಬ್ಬರು ಕಾರ್ಮಿಕರು ಸ್ಫೋಟದಲ್ಲಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದು, ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಈ ಹಳ್ಳಿಯಲ್ಲಿರುವ ಮತದಾನ ಕೇಂದ್ರದ ಒಬ್ಬರೇ ಒಬ್ಬರು ಮತದಾರರಿಗಾಗಿ 40 ಕಿಮೀ ನಡೆದುಕೊಂಡು ಹೋದ ಚುನಾವಣಾ ಸಿಬ್ಬಂದಿ...!

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement